ಜಸ್ಪ್ರೀತ್ ಮನವಿಗೆ ಸ್ಪಂದಿಸಿದ ಬಿಸಿಸಿಐ; 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅಲಭ್ಯ!
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಇದೀಗ ಅಂತಿಮ ಟೆಸ್ಟ್ ಪಂದ್ಯದತ್ತ ಚಿತ್ತ ನೆಟ್ಟಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ.
ಅಹಮ್ಮದಾಬಾದ್(ಫೆ.27): ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಇಂಗ್ಲೆಂಡ್ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಕುರಿತು ಬುಮ್ರಾ, ಬಿಸಿಸಿಐಗೆ ಮನವಿ ಮಾಡಿಕೊಂಡಿದ್ದರು. ವೈಯುಕ್ತಿಕ ಕಾರಣಗಳಿಂದ 4ನೇ ಟೆಸ್ಟ್ ಪಂದ್ಯದಿಂದ ತನ್ನನ್ನು ಕೈಬಿಡುವಂತೆ ಮನವಿ ಮಾಡಿದ್ದರು.
ಬ್ರಿಟನ್‌ನ ಮಾಧ್ಯಮಗಳಿಂದ ರೂಟ್ ಪಡೆಗೆ ಹಿಗ್ಗಾಮುಗ್ಗಾ ಟೀಕೆ..!
ಬುಮ್ರಾ ಮನವಿಗೆ ಸ್ವಂದಿಸಿದ ಬಿಸಿಸಿಐ, 4ನೇ ಟೆಸ್ಟ್ ಪಂದ್ಯದಿಂದ ಬುಮ್ರಾಗೆ ವಿಶ್ರಾಂತಿ ನೀಡಿದೆ. ಬುಮ್ರಾ ವೈಯುಕ್ತಿಕ ಕಾರಣದಿಂದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಿಂದ ತನ್ನನ್ನು ಕೈಬಿಡುವಂತೆ ಮನವಿ ಮಾಡಿಕೊಂಡಿದ್ದರು. ಬುಮ್ರಾ ಮನವಿ ಪುರಸ್ಕರಿಸಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಬುಮ್ರಾ ಕೈಬಿಟ್ಟ ಕಾರಣ ತಂಡಕ್ಕೆ ಯಾರನ್ನು ಸೇರಿಸಿಕೊಂಡಿಲ್ಲ. ತಂಡದಲ್ಲಿ ಈಗಾಗಲೇ ವೇಗಗಳ ಲಭ್ಯತೆ ಇರುವುದರಿಂದ ಹೊಸದಾಗಿ ಯಾರನ್ನು ಸೇರಿಸಿಕೊಂಡಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. 4ನೇ ಟೆಸ್ಟ್ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣ ಅಹಮ್ಮದಾಬಾದ್‌ನಲ್ಲಿ ನಡೆಯಲಿದೆ. ಮಾರ್ಚ್ 4 ರಿಂದ ಮಾರ್ಚ್ 8 ರ ವರೆಗೆ ಈ ಪಂದ್ಯ ನಡೆಯಲಿದೆ.
ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಬಮನ್ ಗಿಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ವೃದ್ಧಿಮಾನ್ ಸಾಹ, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್