* ಟೀಂ ಇಂಡಿಯಾ ಎದುರಿನ 4 ಟೆಸ್ಟ್‌ಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ* 4ನೇ ಟೆಸ್ಟ್‌ನಿಂದ ಹೊರಬಿದ್ದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಜೋಸ್‌ ಬಟ್ಲರ್* ವೇಗಿ ಮಾರ್ಕ್‌ ವುಡ್‌, ಕ್ರಿಸ್‌ ವೋಕ್ಸ್‌ ಹಾಗೂ ಸ್ಯಾಮ್‌ ಬಿಲ್ಲಿಂಗ್ಸ್‌ಗೆ ಸ್ಥಾನ

ಲಂಡನ್(ಆ.30)‌: ಸೆಪ್ಟೆಂಬರ್ 2ರಿಂದ ಲಂಡನ್‌ನ ದಿ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ವಿರುದ್ಧದ 4ನೇ ಟೆಸ್ಟ್‌ಗೆ ಬಲಿಷ್ಠ ಇಂಗ್ಲೆಂಡ್‌ ತಂಡ ಪ್ರಕಟಗೊಂಡಿದ್ದು, ವೇಗಿ ಮಾರ್ಕ್‌ ವುಡ್‌, ಕ್ರಿಸ್‌ ವೋಕ್ಸ್‌ ಹಾಗೂ ಸ್ಯಾಮ್‌ ಬಿಲ್ಲಿಂಗ್ಸ್‌ ತಂಡ ಕೂಡಿಕೊಂಡಿದ್ದಾರೆ.

ಇಂಗ್ಲೆಂಡ್‌ನ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಜೋಸ್‌ ಬಟ್ಲರ್‌ ಗೈರಾಗಲಿದ್ದಾರೆ. ಬಟ್ಲರ್‌ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬಟ್ಲರ್‌ ಬದಲಿಗೆ ಸ್ಯಾಮ್‌ ಬಿಲ್ಲಿಂಗ್ಸ್‌ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಕ್ರಿಸ್‌ ವೋಕ್ಸ್‌, ಮಾರ್ಕ್‌ ವುಡ್‌ ಸಹ ತಂಡಕ್ಕೆ ಸೇರಿಕೊಂಡಿದ್ದಾರೆ. 15 ಆಟಗಾರರನ್ನೊಳಗೊಂಡ ತಂಡದಲ್ಲಿ ಈ ಮೂರು ಹೊಸ ಸೇರ್ಪಡೆಗಳಾಗಿವೆ.

Scroll to load tweet…
Scroll to load tweet…

ನಾಲ್ಕೇ ದಿನಕ್ಕೆ ಮುಗಿದ ಲೀಡ್ಸ್‌ ಟೆಸ್ಟ್‌: ಟೀಂ ಇಂಡಿಯಾಗೆ 76 ರನ್‌ಗಳ ಇನಿಂಗ್ಸ್‌ ಸೋಲು..!

5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಉಭಯ ತಂಡಗಳು ತಲಾ 1-1ರ ಸಮಬಲ ಸಾಧಿಸಿವೆ. ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿತ್ತು. ಇನ್ನು ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿತ್ತು. ಲೀಡ್ಸ್‌ ಟೆಸ್ಟ್‌ನಲ್ಲಿ ಭಾರತಕ್ಕೆ ತಿರುಗೇಟು ನೀಡಿದ್ದ ಜೋ ರೂಟ್ ಪಡೆ ಇನಿಂಗ್ಸ್‌ ಗೆಲುವು ದಾಖಲಿಸಿ ಸರಣಿಯಲ್ಲಿ ಸಮಬಲ ಸಾಧಿಸಿತ್ತು.