ಅಹಮ್ಮದಾಬಾದ್(ಮಾ.21): ಇಂಗ್ಲೆಂಡ್ ವಿರುದ್ದದ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಕೆಲ ಬದಲಾವಣೆ ಮಾಡಿದ್ದರು. ಹೀಗಾಗಿ ಆರಂಭಿಕನಾಗಿ ಕಣಕ್ಕಿಳಿದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದಿಂದ  ಪಂದ್ಯ ಮಾತ್ರವಲ್ಲ ಸರಣಿ ಗೆಲುವು ದಾಖಲಿಸಿದೆ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಆರಂಭಿಕನಾಗಿ ಕಣಕ್ಕಿಳಿಯಬೇಕು ಅನ್ನೋ ಒತ್ತಾಯ ಹೆಚ್ಚಾಗುತ್ತಿದೆ.

 

ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ: 3-2 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡ ಕೊಹ್ಲಿ ಪಡೆ.

ವಿರಾಟ್ ಕೊಹ್ಲಿ ಕೂಡ ಆರಂಭಿಕನಾಗಿ ಕಣಕ್ಕಿಳಿಯುವ ಕುರಿತು ಒಲವು ತೋರಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಆರಂಭಿಕನಾಗಿ ಕಣಕ್ಕಿಳಯಲಿದ್ದೇನೆ ಎಂದಿದ್ದಾರೆ. ಇಷ್ಟೇ ಅಲ್ಲ ವಿಶ್ವದ ಬೆಸ್ಟ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಲು ಉತ್ಸುಕನಾಗಿರುವುದಾಗಿ ಹೇಳಿದ್ದಾರೆ. 

ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯುವುದು ಸೂಕ್ತ ಎಂದಿದ್ದಾರೆ. ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯುವುದರಿಂದ ಟೀಂ ಇಂಡಿಯಾಗೆ ಲಾಭ ಹೆಚ್ಚು. ಆದರೆ ಇಂಗ್ಲೆಂಡ್ ತಂಡ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಹೇಳಿದ್ದರು. ಇದೀಗ ಅಭಿಮಾನಿಗಳ ಕೂಡ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯುವುದೇ ಸೂಕ್ತ ಎಂದಿದ್ದಾರೆ.