ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಕ್ಷಣಗಣನೆಜುಲೈ 07ರಿಂದ ಉಭಯ ತಂಡಗಳ ನಡುವಿನ ಟಿ20 ಸರಣಿ ಆರಂಭಕೋವಿಡ್‌ನಿಂದ ಚೇತರಿಸಿಕೊಂಡು ಅಭ್ಯಾಸ ಆರಂಭಿಸಿರುವ ರೋಹಿತ್ ಶರ್ಮಾ

ಬರ್ಮಿಂಗ್‌ಹ್ಯಾಮ್‌(ಜು.04): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮಹತ್ವದ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾಗಿದ್ದು, ಸೀಮಿತ ಓವರ್‌ಗಳ ಸರಣಿಗೆ ಟೀಂ ಇಂಡಿಯಾ ಕೂಡಿಕೊಂಡಿದ್ದಾರೆ. ಇದರ ಭಾಗವಾಗಿ ರೋಹಿತ್ ಶರ್ಮಾ ನೆಟ್ಸ್‌ನಲ್ಲಿ ಭರ್ಜರಿಯಾಗಿ ಅಭ್ಯಾಸ ನಡೆಸುವ ಇಂಗ್ಲೆಂಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಿಸಿಸಿಐ (BCCI), ಸೋಮವಾರವಷ್ಟೇ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಈ ವಿಡಿಯೋದಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ (Team India) ಅನುಭವಿ ಬೌಲರ್‌ಗಳಾದ ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್ ಅವರ ಎದುರು ನೆಟ್ಸ್‌ ಪ್ರಾಕ್ಟೀಸ್ ನಡೆಸಿದ್ದಾರೆ. ರೋಹಿತ್ ಶರ್ಮಾ ಹೊರಬಂದು ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ್ದಾರೆ. ಸೀಮಿತ ಓವರ್‌ಗಳ ಸರಣಿಗೆ ಭರ್ಜರಿ ಆರಂಭ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಪಂದ್ಯ ಮುಕ್ತಾಯವಾದ ಬಳಿಕ, ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರು ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಮೂರು ಪಂದ್ಯಗಳ ಟಿ20 ಸರಣಿ ಜುಲೈ 7ಕ್ಕೆ ಆರಂಭವಾಗಲಿದ್ದು, ಮೊದಲ ಪಂದ್ಯಕ್ಕೆ ಸೌಥಾಂಪ್ಟನ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಬಳಿಕ ಜುಲೈ 9, 10ಕ್ಕೆ ಉಳಿದೆರಡು ಪಂದ್ಯಗಳು ಕ್ರಮವಾಗಿ ಬಮಿಂಗ್‌ಹ್ಯಾಮ್‌ ಹಾಗೂ ನಾಟಿಂಗ್‌ಹ್ಯಾಮ್‌ನಲ್ಲಿ ನಿಗದಿಯಾಗಿವೆ. ಏಕದಿನ ಪಂದ್ಯಗಳು ಜುಲೈ 12, 14 ಮತ್ತು 17ಕ್ಕೆ ಕ್ರಮವಾಗಿ ಓವಲ್‌, ಲಾರ್ಡ್ಸ್ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿವೆ.

ಇಂಗ್ಲೆಂಡ್ ಎದುರಿನ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್‌ ನ್ಯೂಸ್‌..!

Scroll to load tweet…

ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಶದೀಪ್‌ ಸಿಂಗ್, ಉಮ್ರಾನ್ ಮಲಿಕ್.

ಎರಡನೇ ಹಾಗೂ ಮೂರನೇ ಟಿ20 ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್‌ ಪಟೇಲ್, ಉಮ್ರಾನ್ ಮಲಿಕ್.

ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ

ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್‌, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್.