* ಲೀಡ್ಸ್‌ ಟೆಸ್ಟ್‌ನಲ್ಲಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿ ಟೀಂ ಇಂಡಿಯಾ* ಮೊದಲ ದಿನದಾಟದ ಮೊದಲ ಸೆಷನ್‌ನಲ್ಲೇ 4 ವಿಕೆಟ್ ಕಳೆದುಕೊಂಡ ಭಾರತ* 3 ವಿಕೆಟ್ ಕಬಳಿಸಿ ಮಿಂಚಿದ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ 

ಲೀಡ್ಸ್‌(ಆ.25): ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್‌ನ ಮೊದಲ ದಿನದಾಟದ ಮೊದಲ ಸೆಷನ್‌ನಲ್ಲೇ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಲಂಚ್‌ ಬ್ರೇಕ್ ವೇಳೆಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು ಕೇವಲ 56 ರನ್‌ ಗಳಿಸಿದ್ದು, ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದೆ. 

ಹೌದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಗೆ ಅನುಭವಿ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ಇನ್ನಿಲ್ಲದಂತೆ ಕಾಡಿದ್ದಾರೆ. ಅಗ್ರಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳಾದ ಕೆ.ಎಲ್‌ ರಾಹುಲ್‌(0). ಚೇತೇಶ್ವರ್ ಪೂಜಾರ(1) ಹಾಗೂ ವಿರಾಟ್ ಕೊಹ್ಲಿ(7) ಅವರನ್ನು ಒಂದಂಕಿ ಮೊತ್ತಕ್ಕೆ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ 21 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

Scroll to load tweet…

Ind vs Eng ಸಂಕಷ್ಟದಲ್ಲಿ ಟೀಂ ಇಂಡಿಯಾ; 3ನೇ ವಿಕೆಟ್ ಪತನ..!

ಇನ್ನು ನಾಲ್ಕನೇ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಅಜಿಂಕ್ಯ ರಹಾನೆ ಜೋಡಿ ನಾಲ್ಕನೇ ವಿಕೆಟ್‌ಗೆ 35 ರನ್‌ಗಳ ಜತೆಯಾಟ ನಿಭಾಯಿಸಿದರು. ನೆಲಕಚ್ಚಿ ಆಡುತ್ತಿದ್ದ ರಹಾನೆ(54 ಎಸೆತ, 18 ರನ್)ಯನ್ನು ಪೆವಿಲಿಯನ್ನಿಗಟ್ಟುವಲ್ಲಿ ಓಲಿ ರಾಬಿನ್‌ಸನ್ ಯಶಸ್ವಿಯಾಗಿದ್ದಾರೆ. ಸದ್ಯ ರೋಹಿತ್ ಶರ್ಮಾ 15 ರನ್‌ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.