ಅಹಮ್ಮದಾಬಾದ್(ಮಾ.14):  ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದ ಸೋಲಿಗೆ ಟೀಂ ಇಂಡಿಯಾ ತಿರುಗೇಟು ನೀಡಿದೆ.  ನಾಯಕ ವಿರಾಟ್ ಕೊಹ್ಲಿ ಮಾಡಿದ 2 ಬದಲಾವಣೆ ಕೂಡ ವರ್ಕೌಟ್ ಆಗಿದೆ. ಇಶಾನ್ ಕಿಶನ್ ಹಾಗೂ ವಿರಾಟ್ ಕೊಹ್ಲಿ ಅರ್ಧಶತಕ ನೆರವಿನಿಂದ ಟೀಂ ಇಂಡಿಯಾ 2ನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗೆಲುವು ಸಾಧಿಸಿದೆ.

ಟೆಸ್ಟ್ ಅಬ್ಬರಕ್ಕೆ ಬ್ರೇಕ್; ಟಿ20ಯಲ್ಲಿ ಟೀಂ ಇಂಡಿಯಾಗೆ ಮೊದಲ ಆಘಾತ!.

165 ರನ್ ಟಾರ್ಗೆಟ್ ಬೆನ್ನಟ್ಟಲು ಕಣಕ್ಕಿಳಿದ ಟೀಂ ಇಂಡಿಯಾ ಆರಂಭದಲ್ಲೇ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡು ಆತಂಕ ಎದುರಿಸಿತ್ತು. ಆದರೆ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿದ ಇಶಾನ್ ಕಿಶನ್ ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದರು.

ನಾಯಕ ವಿರಾಟ್ ಕೊಹ್ಲಿ ಕೂಡ ಉತ್ತಮ ಸಾಥ್ ನೀಡಿದರು. ಇಶಾನ್ ಕಿಶನ್ 32 ಎಸೆತದಲ್ಲಿ 56 ರನ್ ಸಿಡಿಸಿ ಔಟಾದರು. ಇತ್ತ ಕೊಹ್ಲಿ ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರಿಷಬ್ ಪಂತ್ 26 ರನ್ ಸಿಡಿಸಿ ನಿರ್ಗಮಿಸಿದರು.

ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಜೊತೆಯಾಟ ಟೀಂ ಇಂಡಿಯಾ ಗೆಲುವಿನ ಹಾದಿ ಸುಗಮಗೊಳಿಸಿತು. ಭಾರತ 17.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಕೊಹ್ಲಿ ಅಜೇಯ 73 ರನ್ ಸಿಡಿಸಿದರು . ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 1-1 ಅಂತರ ಸಾಧಿಸಿದೆ.