* ಲಂಡನ್‌ನಲ್ಲಿಂದು ಮೊದಲ ಏಕದಿನ ಕ್ರಿಕೆಟ್ ಪಂದ್ಯ ಆರಂಭಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ

ಲಂಡನ್‌(ಜು.12): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈಗಾಗಲೇ ಟಿ20 ಸರಣಿ ಗೆದ್ದು ಬೀಗುತ್ತಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯಲ್ಲೂ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಅವರಂತ ಬೌಲರ್‌ಗಳು ಈ ಪಿಚ್‌ನಲ್ಲಿ ಲಾಭ ಪಡೆಯುವ ನಿರೀಕ್ಷೆಯಿದೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ದಿ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿಯನ್ನು ನೀಡಲಾಗಿದ್ದು, ವಿರಾಟ್ ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಂಡಿದ್ದಾರೆ. ಟೀಂ ಇಂಡಿಯಾ ಐವರು ಬ್ಯಾಟರ್‌ಗಳು, ಇಬ್ಬರು ಆಲ್ರೌಂಡರ್‌ಗಳು ಹಾಗೂ ನಾಲ್ವರು ಬೌಲರ್‌ಗಳೊಂದಿಗೆ ಕಣಕ್ಕಿಳಿದಿದೆ. ನಾಯಕ ರೋಹಿತ್ ಶರ್ಮಾ ಜತೆಗೆ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಬ್ಯಾಟಿಂಗ್ ಜವಾಬ್ದಾರಿ ಹೊರಲಿದ್ದಾರೆ. ಆಲ್ರೌಂಡರ್‌ಗಳಾಗಿ ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಜತೆಗೆ ಪ್ರಸಿದ್ದ್ ಕೃಷ್ಣ ಹಾಗೂ ಯುಜುವೇಂದ್ರ ಚಹಲ್ ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ. 

ವಿರಾಟ್ ಕೊಹ್ಲಿ ಆರ್ಶದೀಪ್ ಸಿಂಗ್‌ಗೆ ವಿಶ್ರಾಂತಿ: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ತೊಡೆಸಂದು ನೋವಿಗೆ ಒಳಗಾಗಿರುವ ವಿರಾಟ್ ಕೊಹ್ಲಿ ಹಾಗೂ ಕಿಬ್ಬೊಟ್ಟೆ ನೋವಿನಿಂದ ಬಳಲುತ್ತಿರುವ ಯುವ ವೇಗಿ ಆರ್ಶದೀಪ್ ಸಿಂಗ್ ಅವರು ಮೊದಲ ಪಂದ್ಯದ ಆಯ್ಕೆಗೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ಟ್ವೀಟ್ ಮೂಲಕ ತಿಳಿಸಿದೆ. ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಆರ್ಶದೀಪ್ ಸಿಂಗ್, ಇದೇ ಮೊದಲ ಬಾರಿಗೆ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ಎದುರು ನೋಡುತ್ತಿದ್ದರು. ಆದರೆ ಆರ್ಶದೀಪ್ ಸಿಂಗ್ ಆರೋಗ್ಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವುದು ಕೊಂಚ ತಡವಾಗುವ ಸಾಧ್ಯತೆಯಿದೆ.

Scroll to load tweet…

ಟಿ20 ಸರಣಿಯಲ್ಲಿ ಆಘಾತಕಾರಿ ಸೋಲು ಕಂಡಿದ್ದ ವಿಶ್ವಚಾಂಪಿಯನ್ ಇಂಗ್ಲೆಂಡ್ ತಂಡವು ಭಾರತಕ್ಕೆ ತಿರುಗೇಟು ನೀಡಲು ರೆಡಿಯಾಗಿದೆ. ಜಾನಿ ಬೇರ್‌ಸ್ಟೋವ್, ಬೆನ್ ಸ್ಟೋಕ್ಸ್ ಹಾಗೂ ಜೋ ರೂಟ್‌ ಇಂಗ್ಲೆಂಡ್ ತಂಡವನ್ನು ಕೂಡಿಕೊಂಡಿರುವುದು ಜೋಸ್ ಬಟ್ಲರ್ ಪಡೆಯ ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಮೋಯಿನ್ ಅಲಿ ಆಲ್ರೌಂಡರ್‌ ಪಾತ್ರವನ್ನು ನಿಭಾಯಿಸಲಿದ್ದಾರೆ.

ತಂಡಗಳು ಹೀಗಿವೆ ನೋಡಿ

Scroll to load tweet…

ಭಾರತ: ರೋಹಿತ್ ಶರ್ಮಾ‌(ನಾಯಕ), ಶಿಖರ್ ಧವನ್‌, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್‌ ಯಾದವ್, ರಿಷಭ್‌ ಪಂತ್‌, ಹಾರ್ದಿಕ್ ಪಾಂಡ್ಯ‌, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ‌, ಯುಜುವೇಂದ್ರ ಚಹಲ್‌.

ಇಂಗ್ಲೆಂಡ್‌: ಜೋಸ್ ಬಟ್ಲರ್‌(ನಾಯಕ), ಜೇಸನ್ ರಾಯ್‌, ಜೋ ರೂಟ್‌, ಜಾನಿ ಬೇರ್‌ಸ್ಟೋವ್‌, ಬೆನ್ ಸ್ಟೋಕ್ಸ್‌, ಲಿಯಾಮ್ ಲಿವಿಂಗ್‌ಸ್ಟೋನ್‌, ಮೋಯಿನ್ ಅಲಿ, ಕ್ರೆಗ್ ಓವರ್‌ಟನ್, ಡೇವಿಡ್ ವಿಲ್ಲಿ, ರೀಸ್‌ ಟಾಪ್ಲಿ, ಬ್ರೈಡನ್ ಕೇರ್ಸ್‌‌.

Scroll to load tweet…

ಪಿಚ್‌ ರಿಪೋರ್ಚ್‌

ದಿ ಓವಲ್‌ ಕ್ರೀಡಾಂಗಣದ ಪಿಚ್‌ ಬ್ಯಾಟರ್‌ಗಳಿಗೆ ಸಹಕಾರಿಯಾಗುವ ಸಾಧ್ಯತೆ ಹೆಚ್ಚು. ಇಲ್ಲಿ 71 ಏಕದಿನ ಪಂದ್ಯಗಳು ನಡೆಯಲಿದ್ದು, ಮೊದಲ ಇನ್ನಿಂಗ್‌್ಸನ ಸರಾಸರಿ ಮೊತ್ತ 254 ರನ್‌. ಪಿಚ್‌ ಉತ್ತಮ ಬೌನ್ಸ್‌ ಸಹ ಹೊಂದಿದ್ದು, ವೇಗಿಗಳು ಪರಿಣಾಮಕಾರಿಯಾಗಬಲ್ಲರು.