Asianet Suvarna News Asianet Suvarna News

ಈ ಆಟಗಾರ ಸದ್ಯ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಎಂದು ಬಣ್ಣಿಸಿದ ವಿರೇಂದ್ರ ಸೆಹ್ವಾಗ್..!

* ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯ ಗೆದ್ದು ಬೀಗಿದ ಇಂಗ್ಲೆಂಡ್‌
* ಭಾರತ ಎದುರು 7 ವಿಕೆಟ್‌ಗಳ ಜಯ ಸಾಧಿಸಿದ ಬೆನ್ ಸ್ಟೋಕ್ಸ್‌ ಪಡೆ
* ಇಂಗ್ಲೆಂಡ್‌ ಸ್ಟಾರ್ ಬ್ಯಾಟರ್ ಪ್ರದರ್ಶನ ಕೊಂಡಾಡಿದ ವಿರೇಂದ್ರ ಸೆಹ್ವಾಗ್
 

Ind vs Eng Virender Sehwag Ultimate Praise For England Star Joe Root kvn
Author
Bengaluru, First Published Jul 5, 2022, 6:04 PM IST

ಬರ್ಮಿಂಗ್‌ಹ್ಯಾಮ್‌(ಜು.05): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್‌ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯು 2-2 ರೊಂದಿಗೆ ಡ್ರಾ ಆಗಿದೆ. ಬರ್ಮಿಂಗ್‌ಹ್ಯಾಮ್‌ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ 28ನೇ ಶತಕ ಬಾರಿಸಿದರೇ, ಜಾನಿ ಬೇರ್‌ಸ್ಟೋವ್ ಒದೇ ಪಂದ್ಯದಲ್ಲಿ ಎರಡನೇ ಶತಕ ಸಿಡಿಸಿ ಇಂಗ್ಲೆಂಡ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಸದ್ಯದ ಅತ್ಯುತ್ತಮ ಟೆಸ್ಟ್ ಬ್ಯಾಟರ್‌ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. 

ಬರ್ಮಿಂಗ್‌ಹ್ಯಾಮ್ ಟೆಸ್ಟ್ (Birmingham Test) ಪಂದ್ಯದಲ್ಲಿ ಭಾರತ ನೀಡಿದ್ದ 378 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಒಂದು ಹಂತದಲ್ಲಿ 109 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಲ್ಕನೇ ವಿಕೆಟ್‌ಗೆ ಜತೆಯಾದ ಜಾನಿ ಬೇರ್‌ಸ್ಟೋವ್ (Jonny Bairstow) ಹಾಗೂ ಜೋ ರೂಟ್ (Joe Root) ಜೋಡಿ ಮುರಿಯದ 369 ರನ್‌ಗಳ ಜತೆಯಾಟವಾಡುವ ಮೂಲಕ ಇಂಗ್ಲೆಂಡ್ ತಂಡವು 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸುವಂತೆ ಮಾಡಿದ್ದಾರೆ. ಸ್ಪೋಟಕ ಬ್ಯಾಟಿಂಗ್ ನಡೆಸಿದ ಜೋ ರೂಟ್ 173 ಎಸೆತಗಳನ್ನು ಎದುರಿಸಿ 19 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 142 ರನ್ ಚಚ್ಚಿದರು. ಇನ್ನು ಮತ್ತೊಂದು ತುದಿಯಲ್ಲಿ ಜಾನಿ ಬೇರ್‌ಸ್ಟೋವ್ 145 ಎಸೆತಗಳನ್ನು ಎದುರಿಸಿ 15 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 114 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.  

ಇದೀಗ ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ (Virender Sehwag), ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಜೋ ರೂಟ್‌ ಸದ್ಯ ಜಗತ್ತಿನ ಅತ್ಯುತ್ತಮ ಬ್ಯಾಟರ್ ಎಂದು ಬಣ್ಣಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸೆಹ್ವಾಗ್, ಈ ರನ್ ಮಷೀನ್‌ ಭಾರತ ಎದುರಿನ ಟೆಸ್ಟ್ ಸರಣಿಯಲ್ಲಿ 4ನೇ ಟೆಸ್ಟ್ ಶತಕ ಬಾರಿಸಿದ್ದಾರೆ. ಜೋ ರೂಟ್ ಸದ್ಯ ಜಗತ್ತಿನ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ಮುಲ್ತಾನಿನ ಸುಲ್ತಾನ ಖ್ಯಾತಿಯ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

Ind vs Eng ಬೇರ್‌ಸ್ಟೋವ್, ರೂಟ್‌ ದಾಳಿಗೆ ದಾರಿ ತಪ್ಪಿದ ಟೀಂ ಇಂಡಿಯಾ..!

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದ್ದ ಟೀಂ ಇಂಡಿಯಾ, ರಿಷಭ್ ಪಂತ್ (Rishabh Pant) ಹಾಗೂ ರವೀಂದ್ರ ಜಡೇಜಾ (Ravindra Jadeja) ಬಾರಿಸಿದ ಆಕರ್ಷಕ ಶತಕಗಳ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 416 ರನ್‌ ಬಾರಿಸಿ ಸರ್ವಪತನ ಕಂಡಿತ್ತು. ಇನ್ನು ಮೊದಲ ಆರಂಭಿಸಿದ ಇಂಗ್ಲೆಂಡ್ ತಂಡವು ಆರಂಭಿಕ ಆಘಾತದ ಹೊರತಾಗಿಯೂ, ಜಾನಿ ಬೇರ್‌ಸ್ಟೋವ್ ಬಾರಿಸಿದ ಸಮಯೋಚಿತ ಶತಕದ ನೆರವಿನಿಂದ 284 ರನ್‌ ಬಾರಿಸಿ ಸರ್ವಪತನ ಕಂಡಿತ್ತು. ಭಾರತ ತಂಡವು 132 ರನ್‌ಗಳ ಮೊದಲ ಇನಿಂಗ್ಸ್‌ ಮುನ್ನಡೆ ಪಡೆಯಿತು. ಇದಾದ ಬಳಿಕ ಚೇತೇಶ್ವರ್ ಪೂಜಾರ ಹಾಗೂ ರಿಷಭ್ ಪಂತ್ ಬಾರಿಸಿದ ಅರ್ಧಶತಕದ ನೆರವಿನಿಂದ ಭಾರತ ತಂಡವು ಎರಡನೇ ಇನಿಂಗ್ಸ್‌ನಲ್ಲಿ 245 ರನ್ ಬಾರಿಸಿತು. ಈ ಮೂಲಕ ಇಂಗ್ಲೆಂಡ್ ತಂಡಕ್ಕೆ 378 ರನ್‌ಗಳ ಕಠಿಣ ಗುರಿ ನೀಡಿತ್ತು.

ಕಳೆದ ವರ್ಷ ಇಂಗ್ಲೆಂಡ್ ಎದುರು 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಭಾರತ ತಂಡವು ಪ್ರವಾಸ ಕೈಗೊಂಡಿತ್ತು. ಮೊದಲ 4 ಟೆಸ್ಟ್ ಪಂದ್ಯಗಳು ಮುಕ್ತಾಯದ ವೇಳೆಗೆ ಭಾರತ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿತ್ತು. ಆದರೆ ಮ್ಯಾಂಚೆಸ್ಟರ್‌ನಲ್ಲಿ ನಡೆಯಬೇಕಿದ್ದ 5ನೇ ಟೆಸ್ಟ್‌ಗೂ ಮುನ್ನ ಭಾರತೀಯ ಪಾಳಯದಲ್ಲಿ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊನೆಯ ಟೆಸ್ಟ್‌ ಪಂದ್ಯವನ್ನು ಮುಂದೂಡಲಾಗಿತ್ತು.

Follow Us:
Download App:
  • android
  • ios