ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ: 396ಕ್ಕೆ ಟೀಂ ಇಂಡಿಯಾ ಆಲೌಟ್
ಮೊದಲ ದಿನದಾಟದಂತ್ಯದ ವೇಳೆಗೆ 6 ವಿಕೆಟ್ ಕಳೆದುಕೊಂಡಿದ್ದ ಟೀಂ ಇಂಡಿಯಾ, ಎರಡನೇ ದಿನದಾಟದಲ್ಲಿ ಸರಿಯಾಗಿ 60 ರನ್ ಬಾರಿಸಿ ಉಳಿದ 4 ವಿಕೆಟ್ ಕಳೆದುಕೊಂಡಿತು. ಯಶಸ್ವಿ ಜೈಸ್ವಾಲ್ ಹೊರತುಪಡಿಸಿ ಟೀಂ ಇಂಡಿಯಾದ ಯಾವೊಬ್ಬ ಬ್ಯಾಟರ್‌ಗಳು 35 ರನ್ ಬಾರಿಸಲು ಕೂಡಾ ಯಶಸ್ವಿಯಾಗಲಿಲ್ಲ.
ವಿಶಾಖಪಟ್ಟಣ(ಫೆ.03): ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಬಾರಿಸಿದ ಸಮಯೋಚಿತ ದ್ವಿಶತಕದ ನೆರವಿನಿಂದ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 396 ರನ್ ಬಾರಿಸಿ ಸರ್ವಪತನ ಕಂಡಿದೆ. ಈ ಮೊಲಕ ಮೊದಲ ಇನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಪಡೆ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.
ಮೊದಲ ದಿನದಾಟದಂತ್ಯದ ವೇಳೆಗೆ 6 ವಿಕೆಟ್ ಕಳೆದುಕೊಂಡಿದ್ದ ಟೀಂ ಇಂಡಿಯಾ, ಎರಡನೇ ದಿನದಾಟದಲ್ಲಿ ಸರಿಯಾಗಿ 60 ರನ್ ಬಾರಿಸಿ ಉಳಿದ 4 ವಿಕೆಟ್ ಕಳೆದುಕೊಂಡಿತು. ಯಶಸ್ವಿ ಜೈಸ್ವಾಲ್ ಹೊರತುಪಡಿಸಿ ಟೀಂ ಇಂಡಿಯಾದ ಯಾವೊಬ್ಬ ಬ್ಯಾಟರ್‌ಗಳು 35 ರನ್ ಬಾರಿಸಲು ಕೂಡಾ ಯಶಸ್ವಿಯಾಗಲಿಲ್ಲ. ಶುಭ್‌ಮನ್ ಗಿಲ್ 34 ರನ್ ಬಾರಿಸಿದ್ದೇ ಟೀಂ ಇಂಡಿಯಾ ಪರ ವೈಜಾಗ್ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ದಾಖಲಾದ ಎರಡನೇ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿತು.
ಮೊದಲ ದಿನದಾಟದಂತ್ಯದ ವೇಳೆಗೆ 257 ಎಸೆತಗಳನ್ನು ಎದುರಿಸಿ 179 ರನ್ ಗಳಿಸಿದ್ದ ಜೈಸ್ವಾಲ್, ಎರಡನೇ ದಿನದಾಟದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದರು. ಕೇವಲ 277 ಎಸೆತಗಳನ್ನು ಎದುರಿಸಿ ದ್ವಿಶತಕ ಪೂರೈಸುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾದರು. ಅವರು ದ್ವಿಶತಕ ಸಿಡಿಸಲು 18 ಬೌಂಡರಿ ಹಾಗೂ 7 ಮುಗಿಲೆತ್ತರದ ಶತಕ ಸಿಡಿಸಿದರು. ಅಂತಿಮವಾಗಿ ಯಶಸ್ವಿ ಜೈಸ್ವಾಲ್ 290 ಎಸೆತಗಳನ್ನು ಎದುರಿಸಿ 19 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ 209 ರನ್ ಬಾರಿಸಿ ಜೇಮ್ಸ್ ಆಂಡರ್‌ಸನ್‌ಗೆ ಮೂರನೇ ಬಲಿಯಾದರು.