ಆಕ್ಲೆಂಡ್(ಜ.26): ಇಂಡೋ-ಕಿವೀಸ್ ಎರಡನೇ ಟಿ20 ಪಂದ್ಯಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಸಾಕಷ್ಟು ರನ್ ಮಳೆ ಹರಿದಿತ್ತು. ಇಂದು ಅದೇ ಆಕ್ಲೆಂಡ್ ಮೈದಾನದಲ್ಲಿ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿವೆ.

ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ಆಕ್ಲೆಂಡ್‌ನಲ್ಲಿ ಶುಕ್ರವಾರ(ಜ.24) ನಡೆದ ಪಂದ್ಯದಲ್ಲಿ ಕಿವೀಸ್ ನೀಡಿದ್ದ 204 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವಿರಾಟ್ ಪಡೆ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಿತ್ತು.

2ನೇ ಟಿ20: ಈಡನ್‌ ಪಾರ್ಕ್‌ನಲ್ಲಿಂದು ಮತ್ತೆ ರನ್‌ ಮಳೆ?

ಈ ಗೆಲುವಿನೊಂದಿಗೆ ಟೀಂ ಇಂಡಿಯಾ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಎರಡನೇ ಪಂದ್ಯದಲ್ಲೂ ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. ಇನ್ನು ಕಿವೀಸ್ ಪಡೆ ಟೀಂ ಇಂಡಿಯಾಗೆ ತಿರುಗೇಟು ನೀಡುವ ತವಕದಲ್ಲಿದೆ. ಯಾರು ಇಂದಿನ ಪಂದ್ಯದಲ್ಲಿ ಗೆದ್ದು ಬೀಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ