ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ. ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಹ್ಯಾಮಿಲ್ಟನ್(ಜ.29): ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ಈ ಪಂದ್ಯವನ್ನು ಜಯಿಸಿ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದರೆ, ಕಿವೀಸ್ ತಿರುಗೇಟು ನೀಡಲು ರೆಡಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಟಿಕ್ನೆರ್ ಬದಲಿಗೆ ಸ್ಕಾಟ್ ಕುಗ್ಲಿಜಿನ್ ತಂಡ ಕೂಡಿಕೊಂಡಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 2-0 ಅಂತರ ಮುನ್ನಡೆ ಕಾಯ್ದುಕೊಂಡಿದೆ.

ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲುವಿನ ಕಾತರದಲ್ಲಿ ಟೀಂ ಇಂಡಿಯಾ

ಆಕ್ಲೆಂಡ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್‌ಗಳಿಂದ ಜಯಿಸಿತ್ತು. ಇನ್ನು ಅದೇ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ವಿರಾಟ್ ಪಡೆ 7 ವಿಕೆಟ್‌ಗಳ ಜಯ ದಾಖಲಿಸಿತ್ತು. 

ತಂಡಗಳು ಹೀಗಿವೆ:

ಭಾರತ:

Scroll to load tweet…

ನ್ಯೂಜಿಲೆಂಡ್:

Scroll to load tweet…