Asianet Suvarna News Asianet Suvarna News

Ind vs NZ: ಭಾರತ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್‌ ಆಯ್ಕೆ; ಟೀಂ ಇಂಡಿಯಾ ಪರ ಇಬ್ಬರು ಪಾದಾರ್ಪಣೆ

ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯಕ್ಕೆ ಆಕ್ಲೆಂಡ್ ಆತಿಥ್ಯ
ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ
ಭಾರತ ಪರ ಏಕದಿನ ಕ್ರಿಕೆಟ್‌ಗೆ ಉಮ್ರಾನ್ ಮಲಿಕ್, ಅರ್ಶದೀಪ್ ಸಿಂಗ್ ಪಾದಾರ್ಪಣೆ

Ind vs NZ New Zealand Win the toss and elect Bowl first against India in 1st ODI kvn
Author
First Published Nov 25, 2022, 6:58 AM IST

ಆಕ್ಲೆಂಡ್(ನ.25): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್‌ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇನ್ನು ಏಕದಿನ ಕ್ರಿಕೆಟ್‌ ಮಾದರಿಗೆ ಯುವ ವೇಗಿಗಳಾದ ಆರ್ಶದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ಪಾದಾರ್ಪಣೆ ಮಾಡಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಪಂದ್ಯಕ್ಕೆ ಇಲ್ಲಿನ ಈಡನ್ ಪಾರ್ಕ್‌ ಮೈದಾನ ಆತಿಥ್ಯ ವಹಿಸಿದೆ. 2023ರಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಪೂರ್ವಭಾವಿ ಸಿದ್ದತೆಗಾಗಿ ಈ ಸರಣಿಯನ್ನು ಬಳಸಿಕೊಳ್ಳಲು ಉಭಯ ತಂಡಗಳು ಎದುರು ನೋಡುತ್ತಿವೆ. ನ್ಯೂಜಿಲೆಂಡ್ ತಂಡವು ನಾಲ್ವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್‌ನೊಂದಿಗೆ ಕಣಕ್ಕಿಳಿದಿದೆ. ಲಾಕಿ ಫರ್ಗ್ಯೂಸನ್, ಟಿಮ್ ಸೌಥಿ, ಆಡಂ ಮಿಲ್ನೆ ಹಾಗೂ ಮ್ಯಾಟ್ ಹೆನ್ರಿ ವೇಗಿಗಳ ರೂಪದಲ್ಲಿ ಸ್ಥಾನ ಪಡೆದಿದ್ದರೇ,  ಮಿಚೆಲ್ ಸ್ಯಾಂಟ್ನರ್ ಸ್ಪಿನ್ನರ್ ರೂಪದಲ್ಲಿ ಸ್ಥಾನ ಪಡೆದಿದ್ದಾರೆ.

ಏಕದಿನ ತಂಡಕ್ಕೆ ಆರ್ಶದೀಪ್, ಮಲಿಕ್ ಪಾದಾರ್ಪಣೆ: ಚುಟುಕು ಕ್ರಿಕೆಟ್‌ನಲ್ಲಿ ಮಾರಕ ದಾಳಿ ನಡೆಸಿ ಗಮನ ಸೆಳೆದಿರುವ ಯುವ ವೇಗಿಗಳಾದ ಆರ್ಶದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಬೆಂಚ್ ಕಾಯಿಸಿದ್ದ ಸಂಜು ಸ್ಯಾಮ್ಸನ್ ಕೂಡಾ ತಂಡ ಕೂಡಿಕೊಂಡಿದ್ದಾರೆ.

Ind vs NZ: ಕಿವೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಪಾಕಿಸ್ತಾನ ರೆಕಾರ್ಡ್‌ ಬ್ರೇಕ್‌ ಮಾಡಲು ಟೀಂ ಇಂಡಿಯಾ ರೆಡಿ..!

ತಾರಾ ಆಟಗಾರರ ಅನುಪಸ್ಥಿತಿಯಲ್ಲಿ ಶಿಖರ್‌ ಧವನ್‌ ಭಾರತ ತಂಡವನ್ನು ಮುನ್ನಡೆಸುತ್ತಿದ್ದು, ಶುಭ್‌ಮನ್‌ ಗಿಲ್‌, ಉಮ್ರಾನ್‌ ಮಲಿಕ್‌, ಸಂಜು ಸ್ಯಾಮ್ಸನ್‌, ಶ್ರೇಯಸ್‌ ಅಯ್ಯರ್‌ಗೆ ಇದು ಉತ್ತಮ ಅವಕಾಶವೆನಿಸಿದೆ. ಇನ್ನು ಶಾರ್ದೂಲ್‌ ಠಾಕೂರ್‌, ವಾಷಿಂಗ್ಟನ್‌ ಸುಂದರ್‌ಗೆ ತಮ್ಮ ಆಲ್ರೌಂಡ್‌ ಆಟದ ಸಾಮರ್ಥ್ಯ ಪ್ರದರ್ಶಿಸಲು ಮತ್ತೊಂದು ಅವಕಾಶ ಒದಗಿ ಬಂದಿದೆ. ಮತ್ತೊಂದೆಡೆ ಟಿ20 ಸರಣಿಯನ್ನು ಸೋತ ನ್ಯೂಜಿಲೆಂಡ್‌, ಏಕದಿನದಲ್ಲಿ ಪುಟದೇಳಲು ಎದುರು ನೋಡುತ್ತಿದೆ.

ತಂಡಗಳು ಹೀಗಿವೆ ನೋಡಿ

ಭಾರತ ಕ್ರಿಕೆಟ್ ತಂಡ: ಶಿಖರ್ ಧವನ್(ನಾಯಕ), ಶುಭ್‌ಮನ್ ಗಿಲ್, ರಿಷಭ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಆರ್ಶದೀಪ್ ಸಿಂಗ್, ಯುಜುವೇಂದ್ರ ಚಹಲ್.

ನ್ಯೂಜಿಲೆಂಡ್ ಕ್ರಿಕೆಟ್ ತಂಡ:

ಫಿನ್ ಅಲೆನ್ಮ ಡೆವೊನ್ ಕಾನ್‌ವೇ, ಕೇನ್ ವಿಲಿಯಮ್ಸನ್(ನಾಯಕ), ಟಾಮ್ ಲೇಥಮ್(ವಿಕೆಟ್ ಕೀಪರ್), ಡೇರಲ್ ಮಿಚೆಲ್, ಗ್ಲೆನ್ ಫಿಲಿಫ್ಸ್‌, ಮಿಚೆಲ್ ಸ್ಯಾಂಟ್ನರ್, ಆಡಂ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗ್ಯೂಸನ್.

Follow Us:
Download App:
  • android
  • ios