ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಂ ಇಂಡುಯಾ 163 ರನ್ ಬಾರಿಸಿದ್ದು, ನ್ಯೂಜಿಲೆಂಡ್ ಗೆಲ್ಲಲು ಸ್ಫರ್ಧಾತ್ಮಕ ಗುರಿ ನೀಡಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಮೌಂಟ್‌ ಮಾಂಗನ್ಯುಯಿ(ಫೆ.02):ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಹಾಗೂ ಶಿವಂ ದುಬೆ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ 5ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ರನ್ ಬಾರಿಸಿದ್ದು, ಕಿವೀಸ್‌ಗೆ ಸ್ಫರ್ಧಾತ್ಮಕ ಗುರಿ ನೀಡಿದೆ.

Scroll to load tweet…

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಸಂಜು ಸ್ಯಾಮ್ಸನ್ ಮತ್ತೊಮ್ಮೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವಿಫಲರಾದರು. ಕೇವಲ 2 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಎರಡನೇ ವಿಕೆಟ್‌ಗೆ ಜತೆಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಜೋಡಿ ಉತ್ತಮ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 

ಕನ್ನಡಿಗ ಕೆ. ಎಲ್ ರಾಹುಲ್ 33 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 45 ರನ್ ಬಾರಿಸಿ ಕೇವಲ 5 ರನ್ ಅಂತರದಲ್ಲಿ ಅರ್ಧಶತಕವಂಚಿತರಾದರು. ರೋಹಿತ್ ಶರ್ಮಾ ಕೇವಲ 41 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 60 ರನ್ ಬಾರಿಸಿ ರಿಟೈರ್ಡ್ ಹರ್ಟ್ ಆದರು. 

ಕೊನೆಯಲ್ಲಿ ಶ್ರೇಯಸ್ ಅಯ್ಯರ್ ಅಜೇಯ 33 ಹಾಗೂ ಮನೀಶ್ ಪಾಂಡೆ ಅಜೇಯ 11 ಬ್ಯಾಟಿಂಗ್ ನೆರವಿನಿಂದ ಸ್ಫರ್ಧಾತ್ಮಕ ಮೊತ್ತ ಕಲೆಹಾಕಿದೆ.