* ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮಳೆರಾಯ ಅಡ್ಡಿ* ಮೊದಲ ದಿನದ ಮೊದಲ ಸೆಷನ್‌ ಮಳೆಯ ಅಟ್ಟಹಾಸಕ್ಕೆ ಬಲಿ* ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ-ನ್ಯೂಜಿಲೆಂಡ್ ಮುಖಾಮುಖಿ

ಸೌಥಾಂಪ್ಟನ್‌(ಜೂ.18): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗಿದೆ. ಪರಿಣಾಮ ಮೊದಲ ದಿನದಾಟದ ಮೊದಲ ಸೆಷನ್‌ ಮಳೆಗೆ ಆಹುತಿಯಾಗಿದೆ.

ಇಲ್ಲಿನ ರೋಸ್‌ ಬೌಲ್‌ ಕ್ರೀಡಾಂಗಣ ಐತಿಹಾಸಿಕ ಪಂದ್ಯಕ್ಕಾಗಿ ಸಜ್ಜಾಗಿದೆ. ಆದರೆ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮೊದಲ ಸೆಷನ್‌ ಪಂದ್ಯವು ರದ್ದಾಗಿದೆ. ಮಳೆಯ ತೀವ್ರತೆ ಗಮನಿಸಿದರೆ ಉಳಿದೆರಡು ಸೆಷನ್‌ ಆಟವೂ ನಡೆಯುವುದು ಅನುಮಾನ ಎನಿಸಿದೆ.

Scroll to load tweet…
Scroll to load tweet…
Scroll to load tweet…

ಇದು ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಆಗಿರುವುದರಿಂದ 5 ದಿನಗಳ ಜತೆಗೆ ಒಂದು ದಿನವನ್ನು ಹೆಚ್ಚುವರಿಯಾಗಿ ಮೀಸಲಿಡಲಾಗಿದೆ. ಮಳೆಯಿಂದ, ತಾಂತ್ರಿಕ ಕಾರಣಗಳಿಂದಾಗಿ ಸ್ಥಗಿತಗೊಂಡ ಆಟವನ್ನು ಮೀಸಲು ದಿನದಲ್ಲಿ ಆಡಿಸಲು ಐಸಿಸಿ ತೀರ್ಮಾನಿಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌: ಟೆಸ್ಟ್ ಕ್ರಿಕೆಟ್‌ಗೆ ಯಾರು ಬಾಸ್‌..?

Scroll to load tweet…

ಭಾರತ ಹಾಗೂ ನ್ಯೂಜಿಲೆಂಡ್ ಎರಡೂ ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು, ಟೆಸ್ಟ್ ಚಾಂಪಿಯನ್‌ಶಿಪ್‌ ಮೇಸ್ ಗೆಲ್ಲಲು ಜಿದ್ದಾಜಿದ್ದಿನ ಪೈಪೋಟಿ ನಡೆಸುವ ನಿರೀಕ್ಷೆಯಿದೆ. ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಸದ್ಯ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡವು ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದೆ.