IND vs PAK ಭಾರತ ಗೆಲುವಿಗೆ ಕಾಶ್ಮೀರದಲ್ಲಿ ಸಂಭ್ರಮಾಚರಣೆ, ಮೋದಿ ಸೇರಿ ಗಣ್ಯರ ಅಭಿನಂದನೆ!
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ದಧ ಭರ್ಜರಿ ಗೆಲುವಿಗೆ ಸಂಭ್ರಮಾಚರಣೆ ಜೋರಾಗಿದೆ. ಜಮ್ಮು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಸಂಭ್ರಮ ಶುರುವಾಗಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅಹಮ್ಮದಾಬಾದ್(ಅ.14) ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿದೆ. 8ನೇ ಬಾರಿಗೆ ಪಾಕಿಸ್ತಾನ, ಭಾರತದ ಎದರು ಮಂಡಿಯೂರಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧದ ಗೆಲವಿಗೆ ಸಂಭ್ರಮಾಚರಣೆ ಜೋರಾಗಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಗೆಲುವನ್ನು ಪಟಾಕಿ ಹಚ್ಚಿ, ತಿರಂಗ ಹಾರಾಡಿಸಿ ಸಂಭ್ರಮಿಸಿದ್ದಾರೆ. ಕಾಶ್ಮೀರದ ಬೀದಿ ಬೀದಿಯಲ್ಲಿ ಸಂಭ್ರಮ ಮನೆ ಮಾಡಿದೆ. ಕೇವಲ ಕಾಶ್ಮೀರ ಮಾತ್ರವಲ್ಲ, ದೇಶದ ಮೂಲೆ ಮೂಲೆಗಳಲ್ಲಿ ಪಾಕಿಸ್ತಾನ ವಿರುದ್ದದ ಗೆಲುವಿನ ಸಂಭ್ರಮ ಶುರುವಾಗಿದೆ.
ಪಾಕ್ ವಿರುದ್ದ 7 ವಿಕೆಟ್ ಗೆಲುವು ದಾಖಲಿಸುತ್ತಿದ್ದಂತೆ ಕಾಶ್ಮೀರ ಬೀದಿಯಲ್ಲಿ ಸಾವಿರಕ್ಕಿಂತೂ ಹೆಚ್ಚು ಅಭಿಮಾನಿಗಳು ಜಮಾಯಿಸಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಮಿಸಿದ್ದಾರೆ. ಭಾರತ ಅಭೂಪತಪೂರ್ವ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಹಮ್ಮದಾಬಾದ್‌ನಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಇದು ಅಲ್ರೌಂಡ್ ಶ್ರೇಷ್ಠ ಆಟ, ತಂಡಕ್ಕೆ ಅಭಿನಂದನೆ, ಮುಂದಿನ ಪಂದ್ಯಕ್ಕೆ ಶುಭಾಶಯ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
IND vs PAK ಏಕದಿನ ವಿಶ್ವಕಪ್‌ನಲ್ಲಿ 8ನೇ ಬಾರಿ ತಲೆಬಾಗಿದ ಪಾಕಿಸ್ತಾನ, ಭಾರತಕ್ಕೆ 7 ವಿಕೆಟ್ ಭರ್ಜರಿ ಗೆಲುವು!
ತ್ರಿವರ್ಣ ಧ್ವಜ ಮತ್ತಷ್ಟು ಎತ್ತರದಲ್ಲಿ ಹಾರಾಡುತ್ತಿದೆ. ಅತ್ಯದ್ಭುತ ಗೆಲುವಿಗೆ ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಚಪ್ಪಾಳೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಗೆಲುವಿನ ಓಟ ಮುಂದುವರೆಸಿದೆ. ತಂಡವಾಗಿ ಉತ್ತಮ ಆಟ ಪ್ರದರ್ಶನ ರಾಷ್ಟ್ರದ ಹಿರಿಮೆಯನ್ನು, ಹೆಮ್ಮೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಲಿದೆ ಅನ್ನೋದನ್ನು ತೋರಿಸಿದ್ದೀರಿ ಎಂದು ಅಮಿತ್ ಶಾ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಜೈ ಹೋ ಟೀಂ ಇಂಡಿಯಾ, ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು, ಅದ್ಭುತ ಆಟದೊಂದಿಗೆ ಗೆಲುವು ತಮ್ಮದಾಗಿಸಿಕೊಂಡ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
IND vs PAK ಪಂದ್ಯಕ್ಕೆ ಹಾಜರಿದ್ದ ಅಮಿತ್ ಶಾ, ಗೆಲುವು ಕೈತಪ್ಪಲು ಸಾಧ್ಯವೇ ಇಲ್ಲ ಎಂದ ಫ್ಯಾನ್ಸ್!
ಭಾರತ ಗೆಲುವನ್ನು ಕೇಂದ್ರದ ಬಹುತೇಕ ಸಚಿವರು ಕೊಂಡಾಡಿದ್ದಾರೆ. ಇದೇ ವೇಳೆ ಕ್ರೀಡಾಂಗಣದಲ್ಲಿ ಭಾರತ್, ವಂದೇ ಮಾತರಂ, ಜೈಹೋ ಘೋಷಣೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯೆಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಗಲವರು ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ.