Asianet Suvarna News Asianet Suvarna News

IND vs SA ಬೆಂಗಳೂರು ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ!

  • ಭಾರತ ಹಾಗೂ ಸೌತ್ ಆಫ್ರಿಕಾ ಟಿ20 ಪಂದ್ಯ
  • ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ
  • ಟಾಸ್ ಗೆದ್ದ ಸೌತ್ ಆಫ್ರಿಕಾ ಬೌಲಿಂಗ್ ಆಯ್ಕೆ
IND vs SA 5th T20 South Africa win toss and chose bowl first against Team India in Bengaluru Match ckm
Author
Bengaluru, First Published Jun 19, 2022, 6:33 PM IST | Last Updated Jun 19, 2022, 6:42 PM IST

ಬೆಂಗಳೂರು(ಜೂ.19): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ತೀವ್ರ ಕುತೂಹಲಕ್ಕೆ ಕಾರಣಾಗಿದೆ. ಗೆದ್ದ ತಂಡ ಸರಣಿ ಕೈವಶ ಮಾಡಲಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 5 ಪಂದ್ಯಗಳ ಸರಣಿಯಲ್ಲಿ ಕೊನೆಗೂ ಟಾಸ್ ಗೆಲ್ಲಲು ಟೀಂ ಇಂಡಿಯಾ ವಿಫಲವಾಗಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಸೌತ್ ಆಫ್ರಿಕಾ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11
ಕ್ವಿಂಟನ್ ಡಿಕಾಕ್, ರೀಜಾ ಹೆಂಡ್ರಿಕ್ಸ್, ರಸಿ ವಾಂಡರ್ ಡಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕಾಲ್ಸೇನ್, ತ್ರಿಸ್ಟನ್ ಸ್ಟಬ್ಸ್, ಡ್ವೇನ್ ಪ್ರೆಟೋರಿಯಸ್,  ಕಾಗಿಸೋ ರಬಾಡಾ, ಕೇಶವ್ ಮಹಾರಾಜ್(ನಾಯಕ), ಲುಂಗಿ ಎನ್ಗಿಡಿ, ಅನ್ರಿಚ್ ನೋರ್ಜೆ

ಭಾರತ ಸೌತ್ ಆಫ್ರಿಕಾ ಟಿ20 ಪಂದ್ಯ, ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ಜಾಮ್

ಸೌತ್ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಹೊರಗುಳಿದಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ತಂಡವನ್ನು ಭಾರತೀಯ ಮೂಲದ ಕೇಶವ್ ಮಹಾರಾಜ್ ಮುನ್ನಡೆಸುತ್ತಿದ್ದಾರೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ಅವೇಶ್ ಖಾನ್

ಸರಣಿ 2-2 ಅಂತರದಲ್ಲಿ ಸಮಬಲಗೊಂಡಿದೆ. ಹೀಗಾಗಿ ಅಂತಿಮ ಪಂದ್ಯ ಫೈನಲ್ ಸ್ವರೂಪ ಪಡೆದುಕೊಂಡಿದೆ. ಗೆಲುವಿಗಾಗಿ ಉಭಯ ತಂಡಗಳು ಭಾರಿ ಹೋರಾಟ ನಡೆಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್‌ಗೆ ಹೆಚ್ಟು ನೆರವು ನೀಡಲಿದೆ. 

ಬೆಂಗಳೂರು ಪಂದ್ಯಕ್ಕೆ ಮಳೆ ಕಾಟ ಹೆಚ್ಚಾಗಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಕಳೆದೆರಡು ದಿನ ಬೆಂಗಳೂರು ಮಳೆಯಿಂದ ಒದ್ದೆಯಾಗಿತ್ತು. ಸಂಜೆ ವೇಳೆಗೆ ಸುರಿದ ಬಾರಿ ಮಳೆ ಹಲವು ಅವಾಂತರ ಸೃಷ್ಟಿಸಿತ್ತು. ಇಂದು ಮಳೆ ಬರದಂತೆ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಡ್ರೈನೇಜ್ ಸಿಸ್ಟಮ್ ಅಳವಡಿಸಲಾಗಿದೆ. ಹೀಗಾಗಿ ಅದೆಷ್ಟೇ ಮಳೆ ಬಂದರೂ ಕೇವಲ 20 ನಿಮಿಷದಲ್ಲಿ ಕ್ರೀಡಾಂಗಣ ಆಟಕ್ಕೆ ಸಜ್ಜಗೊಳಿಸಲು ಸಾಧ್ಯವಿದೆ.

IND vs SA 2 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪಂದ್ಯ, ಕ್ರೀಡಾಂಗಣ ಸುತ್ತ ಭಾರಿ ಭದ್ರತೆ!

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮುಗ್ಗರಿಸಿತ್ತು. ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಸೌತ್ ಆಫ್ರಿಕಾ 7 ವಿಕೆಟ್ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ದ್ವಿತೀಯ ಪಂದ್ಯದಲ್ಲಿ ಮತ್ತೆ ಮಿಂಚಿನ ಪ್ರದರ್ಶನ ನೀಡಿದ ಸೌತ್ ಆಫ್ರಿಕಾ 4 ವಿಕೆಟ್ ಗೆಲುವು ಸಾಧಿಸಿತು. ಈ ಮೂಲಕ ಟೀಂ ಇಂಡಿಯಾ ತೀವ್ರ ಒತ್ತಡಕ್ಕೆ ಸಿಲುಕಿತು. ಆದರೆ 3ನೇ ಹಾಗೂ ಮಹತ್ವದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕಮ್‌ಬ್ಯಾಕ್ ಮಾಡಿತು. 3ನೇ ಪಂದ್ಯದಲ್ಲಿ ಭಾರತ 48 ರನ್ ಗೆಲುವು ದಾಖಲಿಸಿತು. ಇನ್ನು ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 82 ರನ್ ಗೆಲವು ದಾಖಲಿಸಿತು. ಈ ಮೂಲಕ ಸರಣಿ 2-2 ಅಂತರದಲ್ಲಿ ಸಮಬಲಗೊಂಡಿತು. ಇಂದಿನ ಪಂದ್ಯ ಗೆದ್ದ ತಂಡ ಟ್ರೋಫಿ ವಶಪಡಿಸಿಕೊಳ್ಳಲಿದೆ.

Latest Videos
Follow Us:
Download App:
  • android
  • ios