Asianet Suvarna News Asianet Suvarna News

Ind vs SA, Cape Town Test: ಕೈಕೊಟ್ಟ ಪೂಜಾರ, ರಹಾನೆ, ಕೊಹ್ಲಿ-ಪಂತ್ ಮೇಲೆ ಎಲ್ಲರ ಚಿತ್ತ..!

* ಮೂರನೇ ದಿನದಾಟದಲ್ಲಿ ತಿರುಗೇಟು ನೀಡಿದ ಟೀಂ ಇಂಡಿಯಾ

* ಆಕರ್ಷಕ ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾದ ರಿಷಭ್ ಪಂತ್

* ಒಟ್ಟಾರೆ 143 ರನ್‌ಗಳ ಮುನ್ನಡೆ ಗಳಿಸಿದ ಭಾರತ ತಂಡ

 

Ind vs SA Cape Town Test Rahane Pujara Fails Again All eyes on Virat Kohli and Rishabh Pant Partnership On Day 3 kvn
Author
Bengaluru, First Published Jan 13, 2022, 4:25 PM IST
  • Facebook
  • Twitter
  • Whatsapp

ಕೇಪ್‌ಟೌನ್‌(ಜ.13): ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಮೂರನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದ ಮೂರನೇ ದಿನದಾಟವು ಸಾಕಷ್ಟು ಪೈಪೋಟಿಯಿಂದ ಕೂಡಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ಸಿಗುತ್ತಿದೆ. ಮತ್ತೊಮ್ಮೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ (Cheteshwar Pujara) ಹಾಗೂ ಅಜಿಂಕ್ಯ ರಹಾನೆ (Ajinkya Rahane) ಒಂದಂಕಿ ಮೊತ್ತಕ್ಕೆ ವಿಕೆಟ್ ಅನುಭವಿಸಿದರೂ ಸಹಾ ಆ ಬಳಿಕ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಮುರಿಯದ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಮೂರನೇ ದಿನದಾಟದ ಲಂಚ್‌ ಬ್ರೇಕ್ ವೇಳೆಗೆ ಟೀಂ ಇಂಡಿಯಾ (Team India) 4 ವಿಕೆಟ್ ಕಳೆದುಕೊಂಡು 130 ರನ್ ಬಾರಿಸಿದ್ದು, ಒಟ್ಟಾರೆ 143 ರನ್‌ಗಳ ಮುನ್ನಡೆ ಗಳಿಸಿದೆ.

ಇಲ್ಲಿನ ನ್ಯೂಲ್ಯಾಂಡ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಕೊನೆಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 57 ರನ್‌ ಬಾರಿಸಿದ್ದ ಟೀಂ ಇಂಡಿಯಾ, ಮೂರನೇ ದಿನದಾಟದಾರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಭಾರತ ತನ್ನ ಖಾತೆಗೆ ಮೂರನೇ ದಿನದಾಟದಲ್ಲಿ ಒಂದು ರನ್ ಸೇರಿಸುವ ಮುನ್ನವೇ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ವಿಕೆಟ್ ಕಳೆದುಕೊಂಡಿತು. ಪೂಜಾರ 9 ರನ್‌ ಬಾರಿಸಿ ಮಾರ್ಕೊ ಯಾನ್ಸೆನ್‌ ಬೌಲಿಂಗ್‌ನಲ್ಲಿ ಕೀಗನ್‌ ಪೀಟರ್‌ಸನ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೇ ಕಳೆದ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದ ರಹಾನೆ ಕೇವಲ ಒಂದು ರನ್‌ ಬಾರಿಸಿ ಕಗಿಸೋ ರಬಾಡ (Kagiso Rabada) ಬೌಲಿಂಗ್‌ನಲ್ಲಿ ಡೀನ್ ಎಲ್ಗರ್‌ಗೆ ಕ್ಯಾಚಿತ್ತು ಪೆವಿಲಿಯನ್ ಹಾದಿ ಹಿಡಿದರು. ಈ ವೇಳೆಗೆ ಟೀಂ ಇಂಡಿಯಾ ಮೂರನೇ ದಿನದಾಟದಲ್ಲಿ ತನ್ನ ಖಾತೆಗೆ ಕೇವಲ ಒಂದು ರನ್ ಸೇರಿಸಿ ಪ್ರಮಖ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಗ ಟೀಂ ಇಂಡಿಯಾ ಕೇವಲ 71 ರನ್‌ಗಳ ಮುನ್ನಡೆ ಗಳಿಸಿತ್ತು.

ಕೊಹ್ಲಿ-ಪಂತ್ ಜುಗಲ್ಬಂದಿ: ಆರಂಭದಲ್ಲೇ ಟೀಂ ಇಂಡಿಯಾ ದಿಢೀರ್ ಎನ್ನುವಂತೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ 5ನೇ ವಿಕೆಟ್‌ಗೆ ಜತೆಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಐದನೇ ವಿಕೆಟ್‌ಗೆ ಈ ಜೋಡಿ ಮುರಿಯದ 72 ರನ್‌ಗಳ ಜತೆಯಾಟ ನಿಭಾಯಿಸಿದೆ. ಜೋಹಾನ್ಸ್‌ಬರ್ಗ್ ಟೆಸ್ಟ್ ಪಂದ್ಯದಲ್ಲಿ ಬೇಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತೀವ್ರ ಟೀಕೆಗೆ ಗುರಿಯಾಗಿದ್ದ ರಿಷಭ್ ಪಂತ್ ಇದೀಗ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಚುರುಕಾಗಿ ರನ್‌ ಗಳಿಸುವ ಮೂಲಕ ತಂಡದ ರನ್‌ ಗಳಿಕೆಗೆ ಚುರುಕು ಮುಟ್ಟಿಸಿದರು.

Ashes Test: ಕೊನೆಯ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

ಮತ್ತೊಂದೆಡೆ ನಾಯಕ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ಗಮನ ಸೆಳೆದರು. ರಿಷಭ್ ಪಂತ್ ಕೇವಲ 58 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ವೃತ್ತಿಜೀವನದ 8ನೇ ಟೆಸ್ಟ್ ಅರ್ಧಶತಕ ಪೂರೈಸಿದರು. ಇನ್ನೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 127 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 28 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. 

Follow Us:
Download App:
  • android
  • ios