Ind vs SA ಟಿ2​0 ಸರಣಿಯನ್ನಾಡಲು ಭಾರತಕ್ಕೆ ಬಂದಿಳಿದ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ

* ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಗೆ ಕ್ಷಣಗಣನೆ

* ಜೂನ್ 9ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭ

* ಟಿ20 ಸರಣಿಯನ್ನಾಡಲು ಭಾರತಕ್ಕೆ ಬಂದಿಳಿದ ಹರಿಣಗಳ ಪಡೆ

Ind vs SA South Africa Cricket team lands in Delhi for 5 match T20I Series against India kvn

ನವದೆಹಲಿ(ಜೂ.03): ಭಾರತ ವಿರುದ್ಧ ಜೂನ್ 9ರಿಂದ ಆರಂಭಗೊಳ್ಳಲಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ಗುರುವಾರ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ನವದೆಹಲಿಗೆ ಬಂದಿಳಿಯಿತು. ತೆಂಬ ಬವುಮಾ (Temba Bavuma) ನೇತೃತ್ವದ ತಂಡವನ್ನು ಆರ್‌ಟಿ-ಪಿಸಿಆರ್‌ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಯಿತು. ಶುಕ್ರವಾರದಿಂದ ತಂಡ ಅಭ್ಯಾಸ ಆರಂಭಿಸಲಿದೆ. ಮೊದಲ ಪಂದ್ಯಕ್ಕೆ ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಭಾನುವಾರ(ಜೂ.5) ಭಾರತ ತಂಡ ದೆಹಲಿ ತಲುಪಲಿದೆ.

ರೋಹಿತ್ ಶರ್ಮಾ (Rohit Sharma) ಅನುಪಸ್ಥಿತಿಯಲ್ಲಿ ಕೆ ಎಲ್ ರಾಹುಲ್ (KL Rahul), ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ವಿಕೆಟ್ ಕೀಪರ್‌ ಬ್ಯಾಟರ್‌ ರಿಷಭ್ ಪಂತ್ (Rishabh Pant) ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (Virat Kohli), ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಅನುಭವಿ ವಿಕೆಟ್ ಕೀಪರ್‌ ದಿನೇಶ್ ಕಾರ್ತಿಕ್‌, ಹಾರ್ದಿಕ್ ಪಾಂಡ್ಯ, ಕುಲ್ದೀಪ್‌ ಯಾದವ್ ಟೀಂ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಇನ್ನು 15ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ವೇಗಿಗಳಾದ ಉಮ್ರಾನ್ ಮಲಿಕ್ ಹಾಗೂ ಆರ್ಶದೀಪ್ ಸಿಂಗ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಕಳೆದ ಜನವರಿಯಲ್ಲಿ ಭಾರತ ಕ್ರಿಕೆಟ್ ತಂಡವು (Indian Cricket Team), ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಾಗ 3 ಪಂದ್ಯಗಳ ಏಕದಿನ ಸರಣಿಯಲ್ಲಿ ವೈಟ್‌ವಾಷ್ ಸೋಲು ಅನುಭವಿಸಿತ್ತು. ಇದೀಗ ತವರಿನಲ್ಲಿ ಹರಿಣಗಳನ್ನು ಭೇಟೆಯಾಡಲು ಟೀಂ ಇಂಡಿಯಾ ಸಜ್ಜಾಗಿದೆ. ಇನ್ನು ಟಿ20 ಕ್ರಿಕೆಟ್‌ನಲ್ಲಿ ಇದುವರೆಗೂ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಒಟ್ಟು 15 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಟೀಂ ಇಂಡಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ. 15 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಟೀಂ ಇಂಡಿಯಾ (Team India) ಗೆಲುವು ಸಾಧಿಸಿದ್ದರೆ, ದಕ್ಷಿಣ ಆಫ್ರಿಕಾ ತಂಡವು 6 ಪಂದ್ಯಗಳಲ್ಲಿ ಗೆಲುವಿನ ಸಿಹಿಯುಂಡಿದೆ.

ದಕ್ಷಿಣ ಆಫ್ರಿಕಾ ತಂಡ: ತೆಂಬಾ ಬವುಮಾ(ನಾಯಕ), ಡಿ ಕಾಕ್‌, ಹೆಂಡ್ರಿಕ್ಸ್‌, ಕ್ಲಾಸೆನ್‌, ಮಹಾರಾಜ್‌, ಮಾರ್ಕ್ರಮ್‌, ಮಿಲ್ಲರ್‌, ಎನ್‌ಗಿಡಿ, ನೋಕಿಯಾ,ಪಾರ್ನೆಲ್‌, ಪ್ರಿಟೋರಿಯಸ್‌, ರಬಾಡ, ಶಮ್ಸಿ, ಸ್ಟಬ್ಸ್‌, ಡುಸ್ಸೆನ್‌, ಯಾನ್ಸನ್‌.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟಿಂ ಇಂಡಿಯಾ 

ಕೆಎಲ್ ರಾಹುಲ್(ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶಾನ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್

ದ.ಆಫ್ರಿಕಾ ವಿರುದ್ಧ ಟಿ20ಗೆ ಕೋಚ್‌ ದ್ರಾವಿಡ್‌ ಲಭ್ಯ

ನವದೆಹಲಿ: ಜೂ.9ರಿಂದ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡದ ಪ್ರಧಾನ ಕೋಚ್‌ ರಾಹುಲ್‌ ದ್ರಾವಿಡ್‌ ಲಭ್ಯರಿರಲಿದ್ದು, ಸರಣಿ ಮುಕ್ತಾಯಗೊಂಡ ಬಳಿಕ ಅವರು ಇಂಗ್ಲೆಂಡ್‌ಗೆ ತೆರಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಮೊದಲು ದ್ರಾವಿಡ್‌ ಜೂ.16ಕ್ಕೆ ಇಂಗ್ಲೆಂಡ್‌ಗೆ ತೆರಳಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಸರಣಿ ಮುಗಿಸಿ ಜೂ.20ಕ್ಕೆ ಪ್ರಯಾಣಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸರಣಿಯ 5ನೇ ಹಾಗೂ ಅಂತಿಮ ಪಂದ್ಯವು ಜೂ.20ರಂದು ಬೆಂಗಳೂರಲ್ಲಿ ನಡೆಯಲಿದೆ.

Team India Squad ಟಿ20 ಸರಣಿ ಹಾಗೂ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ, ಉಮ್ರಾನ್ ಮಲಿಕ್‌‌ಗೆ ಚಾನ್ಸ್!

ಜೂ.30ಕ್ಕೆ ಇಂಗ್ಲೆಂಡ್‌ಗೆ ಗಂಗೂಲಿ, ಜಯ್‌ ಶಾ

ನವದೆಹಲಿ: ಇಂಗ್ಲೆಂಡ್‌ ವಿರುದ್ಧ ಜು.1ರಿಂದ ಆರಂಭಗೊಳ್ಳಲಿರುವ 5ನೇ ಟೆಸ್ಟ್‌ ಪಂದ್ಯವನ್ನು ವೀಕ್ಷಿಸಲು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಕಾರ‍್ಯದರ್ಶಿ ಜಯ್‌ ಶಾ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಬರ್ಮಿಂಗ್‌ಹ್ಯಾಮ್‌ಗೆ ತೆರಳಲಿದ್ದಾರೆ. ಜೂ.30ಕ್ಕೆ ಈ ಮೂವರು ತಲುಪಲಿದ್ದು, ಪಂದ್ಯದ ವೇಳೆ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ(ಇಸಿಬಿ)ಯ ವ್ಯವಸ್ಥಾಪಕ ನಿರ್ದೇಶಕ ರಾಬರ್ಚ್‌ ಕೀ ಜೊತೆ 2023ರ ಐಪಿಎಲ್‌, ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಬಗ್ಗೆ ಚರ್ಚಿಸಲಿದ್ದಾರೆ. ಮುಂದಿನ ವರ್ಷದಿಂದ ಐಪಿಎಲ್‌ ಪಂದ್ಯಗಳ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದ್ದು, ಟೂರ್ನಿ ನಡೆಯುವ ಒಟ್ಟು ದಿನಗಳ ಸಂಖ್ಯೆಯೂ ಸಹ ಜಾಸ್ತಿಯಾಗಲಿದೆ. ಈ ಪ್ರಸ್ತಾಪವನ್ನು ಬೆಂಬಲಿಸುವಂತೆ ಬಿಸಿಸಿಐ, ಇಸಿಬಿಗೆ ಮನವಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.


 

Latest Videos
Follow Us:
Download App:
  • android
  • ios