IND vs SA ಅಂತಿಮ ಪಂದ್ಯದಲ್ಲಿ ಸೌತ್ ಆಫ್ರಿಕಾ ಉಡೀಸ್, ಟೀಂ ಇಂಡಿಯಾ ತೆಕ್ಕೆಗೆ ಏಕದಿನ ಸೀರಿಸ್!

ಟೀಂ ಇಂಡಿಯಾ ಪ್ರದರ್ಶನಕ್ಕೆ ಸೌತ್ ಆಫ್ರಿಕಾ ನೆಲಕಚ್ಚಿದೆ. ಅಂತಿಮ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಅಲ್ಪಮೊತ್ತಕ್ಕೆ ಆಲೌಟ್ ಮಾಡಿದ ಟೀಂ ಇಂಡಿಯಾ 7 ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

IND vs SA Team India beat south Africa by 7 wickets in 3rd match and clinch ODI series by 2 1 ckm

ದೆಹಲಿ(ಅ.11): ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ ಪ್ರದರ್ಶನ ಆತಂಕ ತಂದಿತ್ತು. ಆದರೆ ಮೊದಲ ಸೋಲಿನ ಬಳಿಕ ಟೀಂ ಇಂಡಿಯಾ ಅಷ್ಟೇ ಪ್ರಬಲವಾಗಿ ಕಮ್‌ಬ್ಯಾಕ್ ಮಾಡಿದೆ. ಸೌತ್ ಆಫ್ರಿಕಾ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ. ಸೌತ್ ಆಫ್ರಿಕಾ ತಂಡವನ್ನು 99 ರನ್‌ಗೆ ಆಲೌಟ್ ಮಾಡಿದ ಟೀಂ ಇಂಡಿಯಾ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ. ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ನಂತರದ ಎರಡೂ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಸರಣಿ ಗೆದ್ದು ಇತಿಹಾಸ ರಚಿಸಿದೆ.

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಕೇವಲ 99ರನ್‌ಗೆ ಆಲೌಟ್ ಆಯಿತು. 100ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾ ನಿರೀಕ್ಷಿತ ಆರಂಭ ನೀಡಲು ಸಾಧ್ಯವಾಗಲಿಲ್ಲ. ನಾಯಕ ಶಿಖರ್ ಧವನ್ 8 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. ಆದರೆ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಜೊತೆಯಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿಯತ್ತ ಸಾಗಿತು. 

BCCI ಅಧ್ಯಕ್ಷ ಸ್ಥಾನಕ್ಕೆ ರೋಜರ್‌ ಬಿನ್ನಿ ನಾಮಪತ್ರ, ಧುಮಲ್‌ ಐಪಿಎಲ್‌ ಹೊಸ ಚೇರ್ಮನ್‌?

ಆದರೆ ಇಶಾನ್ ಕಿಶನ್ 10 ರನ್ ಸಿಡಿಸಿ ಔಟಾದರು. ಶುಭಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ನೀಡಿದರು.  ದಿಟ್ಟ ಹೋರಾಟ ನೀಡಿದ ಗಿಲ್ 49 ರನ್ ಸಿಡಿಸಿ ಔಟಾದರು. ಇತ್ತ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಹೋರಾಟದಿಂದ ಟೀಂ ಇಂಡಿಯಾ ಸುಭವಾಗಿ ಗುರಿ ತಲುಪಿತು. ಅಯ್ಯರ್ ಅಜೇಯ 28 ರನ್ ಸಿಡಿಸಿದರೆ, ಸ್ಯಾಮ್ಸನ್ ಅಜೇಯ 2 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.  ಇದರೊಂದಿಗೆ 2-1 ಅಂತರದಲ್ಲಿ ಭಾರತ ಏಕದಿನ ಸರಣಿ ವಶಪಡಿಸಿಕೊಂಡಿತು.

ಸೌತ್ ಆಫ್ರಿಕಾ 99 ರನ್‌ಗೆ ಆಲೌಟ್
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸೌತ್ ಆಫ್ರಿಕಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲವಾಯಿತು. ಟೀಂ ಇಂಡಿಯಾ ಬೌಲರ್‌ಗಳು ಸೌತ್ ಆಫ್ರಿಕಾ ತಂಡಕ್ಕೆ ಯಾವುದೇ ಅವಕಾಶ ನೀಡಲಿಲ್ಲ. ಜನ್ನೆಮ್ಯಾನ್ ಮಲನ್ 15 ರನ್ ಸಿಡಿಸಿ ಔಟಾದರು. ಕ್ವಿಂಟನ್ ಡಿಕಾಕ್ 6 ರನ್ ಸಿಡಿಸಿ ಔಟಾದರು. ಹೆಂಡ್ರಿಕಸ್ 3 ರನ್ ಸಿಡಿಸಿ ಔಟಾದರು. ಆ್ಯಡಿನ್ ಮಕ್ರಮ್ 9, ನಾಯಕ ಡೇವಿಡ್ ಮಿಲ್ಲರ್ 7, ಫೆಲುಕವಾಯೋ 5 ,  ಮಾರ್ಕೋ ಜಾನ್ಸೆನ್ 14, ಹೆನ್ರಿಚ್ ಕಾಲ್ಸೆನ್ 34 ರನ್, ಜಾರ್ನ್ ಫಾರ್ಟಿನ್ 1, ಅನ್ರಿಚ್ ನೋರ್ಜೆ ಡಕೌಟ್ ಆದರು. ಇದರೊಂದಿಗೆ ಸೌತ್ ಆಫ್ರಿಕಾ 99 ರನ್ ಸಿಡಿಸಿ ಔಟಾದರು.

ರನೌಟ್ ಮಾಡಲು ಹೋಗಿ 4 ರನ್ ಬಿಟ್ಟು ಕೊಟ್ಟು, ಅಂಪೈರ್ ಜತೆ ವಾದ ಮಾಡಿದ ಸಿರಾಜ್‌..! ವಿಡಿಯೋ ವೈರಲ್

ಭಾರತ ಹಾಗೂ ಸೌತ್ ಆಫ್ರಿಕಾ ಸರಣಿ
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಕೊಂಡ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿದೆ. ಏಕದಿನ ಸರಣಿ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತ್ತು. ಹೀಗಾಗಿ 40 ಓವರ‌್‌ಗಳಿಗೆ ಪಂದ್ಯ ಸೀಮಿತಗೊಳಿಸಲಾಗಿತ್ತು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ 9 ರನ್ ಗೆಲುವು ದಾಖಲಿಸಿತ್ತು. ಈ ಮೂಲಕ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ಟೀಂ ಇಂಡಿಯಾ ಕಮ್‌ಬ್ಯಾಕ್ ಮಾಡಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿತ್ತು. ಈಮೂಲಕ ಸರಣಿ ಸಮಬಲಗೊಳಿಸಿತ್ತು. ಹೀಗಾಗಿ ಅಂತಿಮ ಪಂದ್ಯ ಫೈನಲ್ ಸ್ವರೂಪ ಪಡೆದುಕೊಂಡಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರದರ್ಶನಕ್ಕೆ ಸೌತ್ ಆಫ್ರಿಕಾ ಬೆಚ್ಚಿಬಿದ್ದಿದೆ. ಈ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ. 

Latest Videos
Follow Us:
Download App:
  • android
  • ios