Asianet Suvarna News Asianet Suvarna News

Ind vs SA: 4 ವರ್ಷಗಳ ಭಾರತ ಏಕದಿನ ತಂಡಕ್ಕೆ ರವಿಚಂದ್ರನ್ ಅಶ್ವಿನ್‌ ವಾಪಸ್‌?

* ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲು ಅಶ್ವಿನ್ ರೆಡಿ

* ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಯಲ್ಲಿ ಅಶ್ವಿನ್ ಸ್ಥಾನ ಪಡೆಯುವ ಸಾಧ್ಯತೆ

* ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿ ಜನವರಿ 19ರಿಂದ ಆರಂಭ

Ind vs SA Team India Spinner Ravichandran Ashwin in Line For ODI Comeback against South Africa Limited Over Series kvn
Author
Bengaluru, First Published Dec 27, 2021, 8:15 AM IST

ನವದೆಹಲಿ(ಡಿ.27): 4 ವರ್ಷಗಳ ಬಳಿಕ ಭಾರತ ಏಕದಿನ ತಂಡಕ್ಕೆ ತಾರಾ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್‌ (Ravichandran Ashwin) ವಾಪಸಾಗುವ ನಿರೀಕ್ಷೆಯಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಸದ್ಯದಲ್ಲೇ ಬಿಸಿಸಿಐ(BCCI) ಆಯ್ಕೆ ಸಮಿತಿ ತಂಡ ಆಯ್ಕೆ ಮಾಡಲಿದ್ದು, ಅಶ್ವಿನ್‌ಗೆ ಸ್ಥಾನ ಸಿಗಬಹುದು ಎನ್ನಲಾಗಿದೆ. 2017ರ ಬಳಿಕ ಅಶ್ವಿನ್‌ ಏಕದಿನ ಪಂದ್ಯವನ್ನಾಡಿಲ್ಲ. ರವಿಚಂದ್ರನ್ ಅಶ್ವಿನ್ ಕೊನೆ ಬಾರಿಗೆ ಲಿಸ್ಟ್‌ ‘ಎ’ ಪಂದ್ಯವನ್ನಾಡಿದ್ದು 2019 ದೇವಧರ್‌ ಟ್ರೋಫಿಯಲ್ಲಿ. ಇದಾದ ಬಳಿಕ 2021ರ ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯಲ್ಲಿ ಭಾರತ ಸೀಮಿತ ಓವರ್‌ಗಳ ತಂಡಕ್ಕೆ ಅಶ್ವಿನ್‌ ಕಮ್‌ಬ್ಯಾಕ್‌ ಮಾಡಿದ್ದರು

ನಂತರ ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಮೂಲಕ ಅಶ್ವಿನ್‌  ಸೀಮಿತ ಓವರ್‌ ಕ್ರಿಕೆಟ್‌ನಲ್ಲಿ ಪಾಲ್ಗೊಂಡಿದ್ದರು. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಅಶ್ವಿನ್‌ಗೆ ಮಣೆಹಾಕುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಲಿದೆ.  111 ಏಕದಿನ ಪಂದ್ಯಗಳನ್ನಾಡಿರುವ ಅಶ್ವಿನ್‌ 150 ವಿಕೆಟ್‌ ಕಬಳಿಸಿದ್ದಾರೆ.

ಮುಂದಿನ 24 ಗಂಟೆಗಳೊಳಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯು ಭಾರತ ತಂಡವನ್ನು ಆಯ್ಕೆ ಮಾಡಲಿದ್ದು, ವಿಜಯ್ ಹಜಾರೆ ಟ್ರೋಫಿ (Vijay Hazare Trophy) ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿರುವ ವೆಂಕಟೇಶ್ ಅಯ್ಯರ್ (Venkatesh Iyer) ಹಾಗೂ ಋತುರಾಜ್ ಗಾಯಕ್ವಾಡ್ (Ruturaj Gaikwad) ಅವರಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ರವಿಚಂದ್ರನ್ ಅಶ್ವಿನ್‌ ಜತೆಗೆ ಸ್ಪಿನ್ನರ್ ಯುಜುವೇಂದ್ರ ಚಹಲ್‌ (Yuzvendra Chahal) ಕೂಡಾ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ದಕ್ಷಿಣ ಆಫ್ರಿಕಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜನವರಿ 19ರಿಂದ ಆರಂಭವಾಗಲಿದ್ದು, ರೋಹಿತ್ ಶರ್ಮಾ(Rohit Sharma) ಭಾರತ ಕ್ರಿಕೆಟ್ ತಂಡವನ್ನು ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಅಂಡರ್‌-19: ಭಾರತಕ್ಕೆ ಇಂದು ಆಫ್ಘನ್‌ ಸವಾಲು

ದುಬೈ: ಅಂಡರ್‌-19 ಏಷ್ಯಾಕಪ್‌ನಲ್ಲಿ ಭಾರತ ಸೆಮಿಫೈನಲ್‌ ಪ್ರವೇಶಿಸಬೇಕಿದ್ದರೆ ಸೋಮವಾರ ನಡೆಯಲಿರುವ ‘ಎ’ ಗುಂಪಿನ ಅಂತಿಮ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಜಯಗಳಿಸಬೇಕಿದೆ. ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಭಾರತ, 2ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ವೀರೋಚಿತ ಸೋಲು ಅನುಭವಿಸಿತ್ತು. 

Vijay Hazare Trophy 2021 : ಚೊಚ್ಚಲ ದೇಶೀಯ ಪ್ರಶಸ್ತಿ ಗೆದ್ದ ಹಿಮಾಚಲ ಪ್ರದೇಶ!

2 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಪಾಕಿಸ್ತಾನ, ಸೆಮಿಫೈನಲ್‌ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಆಫ್ಘಾನಿಸ್ತಾನ ಸಹ 1 ಗೆಲುವು, 1 ಸೋಲು ಕಂಡಿದ್ದು, ಭಾರತ ವಿರುದ್ಧ ಗೆದ್ದರೆ ಸೆಮೀಸ್‌ಗೇರಲಿದೆ.

ಅಂಧರ ಕ್ರಿಕೆಟ್‌: ಬಾಂಗ್ಲಾ ವಿರುದ್ಧ ಟಿ20 ಸರಣಿ ಕ್ಲೀನ್‌ ಸ್ವೀಪ್‌ ಮಾಡಿದ ಭಾರತ

ಭೋಪಾಲ್‌: ಬಾಂಗ್ಲಾದೇಶ ವಿರುದ್ಧದ ಚೊಚ್ಚಲ ದ್ವಿಪಕ್ಷೀಯ ಟಿ20 ಸರಣಿಯನ್ನು ಭಾರತ 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿದೆ. ಭಾನುವಾರ ನಡೆದ 3ನೇ ಪಂದ್ಯವನ್ನು ಭಾರತ 4 ವಿಕೆಟ್‌ಗಳಿಂದ ಗೆದ್ದುಕೊಂಡಿತು. 

ಮೊದಲು ಬ್ಯಾಟ್‌ ಮಾಡಿದ ಬಾಂಗ್ಲಾದೇಶ 20 ಓವರಲ್ಲಿ 8 ವಿಕೆಟ್‌ಗೆ 132 ರನ್‌ ಗಳಿಸಿತು. ಭಾರತ ಕೇವಲ 15.1 ಓವರಲ್ಲಿ 6 ವಿಕೆಟ್‌ ನಷ್ಟಕ್ಕೆ 136 ರನ್‌ ಗಳಿಸಿತು. ದೀಪಕ್‌ ಮಲಿಕ್‌ 45 ರನ್‌ ಗಳಿಸಿದರು. ಮೊದಲ ಪಂದ್ಯದಲ್ಲಿ 124 ರನ್‌ಗಳಿಂದ ಗೆದ್ದಿದ್ದ ಭಾರತ, 2ನೇ ಪಂದ್ಯವನ್ನು 7 ವಿಕೆಟ್‌ಗಳಿಂದ ಜಯಿಸಿತ್ತು. ಸೋಮವಾರದಿಂದ ಉಭಯ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದೆ.

Follow Us:
Download App:
  • android
  • ios