Asianet Suvarna News Asianet Suvarna News

ಕಿಂಗ್ ಕೊಹ್ಲಿ ಖಾತೆಗೆ ಮತ್ತೊಂದು ಶತಕ, ಬೃಹತ್ ಮೊತ್ತದತ್ತ ಭಾರತ

ಆಕರ್ಷಕ ಶತಕ ಚಚ್ಚಿದ ವಿರಾಟ್ ಕೊಹ್ಲಿ
ಅಂತಾರಾಷ್ಟ್ರಿಯ ಕ್ರಿಕೆಟ್‌ನಲ್ಲಿ ಕೊಹ್ಲಿ ಖಾತೆಗೆ 73ನೇ ಶತಕ ದಾಖಲು
ಕೇವಲ 80 ಎಸೆತಗಳಲ್ಲಿ ಶತಕ ಸಿಡಿಸಿದ ಕೊಹ್ಲಿ

Ind vs SL Virat Kohli hits 73rd International Century kvn
Author
First Published Jan 10, 2023, 4:57 PM IST

ಗುವಾಹಟಿ(ಜ.10): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಖಾತೆಗೆ ಮತ್ತೊಂದು ಶತಕ ಜಮೆಯಾಗಿದೆ. ಶ್ರೀಲಂಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಕೇವಲ 80 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 73ನೇ ಶತಕ ಸಿಡಿಸಿ ಮಿಂಚಿದ್ದಾರೆ. ಕೊಹ್ಲಿ ಶತಕದ ನೆರವಿನಿಂದ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. 

ಇಲ್ಲಿನ ಬರ್ಸಾಪುರ ಕ್ರಿಕೆಟ್ ಮೈದಾನದಲ್ಲಿ, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್‌ 143 ರನ್‌ಗಳ ಜತೆಯಾಟ ನಿಭಾಯಿಸಿದರು. ಗಿಲ್‌ 70 ರನ್ ಗಳಿಸಿ ವಿಕೆಟ್‌ ಒಪ್ಪಿಸಿದಾಗ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ, ತಮ್ಮ ಭರ್ಜರಿ ಲಯವನ್ನು ಮುಂದುವರೆಸಿದರು. ಇಂದಿಗೆ ಸರಿಯಾಗಿ ಒಂದು ತಿಂಗಳ ಹಿಂದಷ್ಟೇ ಬಾಂಗ್ಲಾದೇಶ ಎದುರು ಆಕರ್ಷಕ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಶತಕದ ಬರ ನೀಗಿಸಿಕೊಂಡಿದ್ದ ವಿರಾಟ್ ಕೊಹ್ಲಿ, ಇದೀಗ ಏಕದಿನ ಕ್ರಿಕೆಟ್‌ನಲ್ಲಿ ಸತತ ಎರಡನೇ ಶತಕ ಸಿಡಿಸುವಲ್ಲಿ ಯಶಸ್ವಿಯಾದರು.

ಜೀವದಾನದ ಲಾಭ ಪಡೆದು ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಟೀಂ ಇಂಡಿಯಾ ರನ್‌ ಮಷೀನ್ ವಿರಾಟ್ ಕೊಹ್ಲಿ, 52 ರನ್‌ ಬಾರಿಸಿದ್ದಾಗ ವಿಕೆಟ್‌ ಕೀಪರ್ ಕುಸಾಲ್ ಮೆಂಡಿಸ್ ಸುಲಭ ಕ್ಯಾಚ್ ಕೈಚೆಲ್ಲಿದರು. ಇದರ ಲಾಭ ಪಡೆದ ವಿರಾಟ್ ಕೊಹ್ಲಿ ಮತ್ತಷ್ಟು ಆಕ್ರಮಣಕಾರಿಯಾಟವಾಡಿದರು. ಇನ್ನು ವಿರಾಟ್ ಕೊಹ್ಲಿ 81 ರನ್ ಗಳಿಸಿದ್ದಾಗ ಕೂಡಾ ಲಂಕಾ ನಾಯಕ ಕ್ಯಾಚ್‌ ಕೈಚೆಲ್ಲಿದರು ಇದಾದ ಬಳಿಕ ತಪ್ಪು ಮಾಡದ ಕೊಹ್ಲಿ, ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು.

ಏಕದಿನ ಕ್ರಿಕೆಟ್‌ನಲ್ಲಿ 45ನೇ ಶತಕ: ಮಾಜಿ ನಾಯಕ ವಿರಾಟ್ ಕೊಹ್ಲಿ, 2019ರ ಬಳಿಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಸತತ ಎರಡೂವರೆ ವರ್ಷಗಳ ಕಾಲ ರನ್‌ ಬರ ಅನುಭವಿಸುತ್ತಾ ಬಂದಿದ್ದರು. ಆದರೆ ಕಳೆದ ತಿಂಗಳು ಬಾಂಗ್ಲಾದೇಶ ಪ್ರವಾಸದಲ್ಲಿನ ಕೊನೆಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕದ ಬರ ನೀಗಿಸಿಕೊಂಡಿದ್ದರು. ಇದೀಗ ಇದಾಗಿ ಸರಿಯಾಗಿ ಒಂದು ತಿಂಗಳಿಗೆ ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ, ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಅಂದಹಾಗೆ ಇದು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಬಾರಿಸಿದ 45ನೇ ಶತಕ ಹಾಗೂ ಒಟ್ಟಾರೆ 73ನೇ ಶತಕವಾಗಿದೆ.

Follow Us:
Download App:
  • android
  • ios