ಟೀಂ ಇಂಡಿಯಾ ಆರ್ಭಟಕ್ಕೆ ಶರಣಾದ ವಿಂಡೀಸ್; 13ನೇ ಏಕದಿನ ಸರಣಿ ಗೆದ್ದ ಭಾರತ..!

* ವೆಸ್ಟ್ ಇಂಡೀಸ್ ಎದುರು ಏಕದಿನ ಸರಣಿ ಗೆದ್ದು ಬೀಗಿದ ಟೀಂ ಇಂಡಿಯಾ
* ವಿಂಡೀಸ್ ಎದುರು 200 ರನ್ ಅಂತರದ ಗೆಲುವು ಸಾಧಿಸಿದ ಭಾರತ
* ಸರಣಿ ಶ್ರೇಷ್ಠ ಪ್ರಶಸ್ತಿ ಜಯಿಸಿದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್

Ind vs WI Shubman Gill Shardul Thakur Shine As India Defeat West Indies Clinch ODI Series kvn

ಟ್ರನಿಡ್ಯಾಡ್‌(ಆ.02): ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರುವ ಮೂಲಕ ವೆಸ್ಟ್ ಇಂಡೀಸ್ ಎದುರಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ 200 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದರ ಜತೆಗೆ ವೆಸ್ಟ್ ಇಂಡೀಸ್ ಎದುರು ಭಾರತ ತಂಡವು ಸತತ 13ನೇ ಬಾರಿ ಏಕದಿನ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಭಾರತ ನೀಡಿದ್ದ 352 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡಕ್ಕೆ, ಮುಕೇಶ್ ಕುಮಾರ್ ಆರಂಭದಲ್ಲೇ ಶಾಕ್‌ ನೀಡಿದರು. ಮೊದಲ 3 ಓವರ್‌ನಲ್ಲೇ 7 ರನ್‌ ಗಳಿಸುವಷ್ಟರಲ್ಲಿ ವಿಂಡೀಸ್ ಆರಂಭಿಕರಿಬ್ಬರನ್ನು ಬಲಿ ಪಡೆಯುವಲ್ಲಿ ಮುಕೇಶ್ ಕುಮಾರ್ ಯಶಸ್ವಿಯಾದರು. ಇದಾದ ಬಳಿಕ ಒಂದು ತುದಿಯಲ್ಲಿ ಅಲಿಕ್ ಅಥಂಜೆ 50 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 32 ರನ್ ಬಾರಿಸುವ ಮೂಲಕ ಕೊಂಚ ಪ್ರತಿರೋಧ ತೋರಿದರು. ಆದರೆ ಮತ್ತೊಂದು ತುದಿಯಲ್ಲಿ ಶಾಯ್ ಹೋಪ್(5), ಕೇಸಿ ಕಾರ್ಟಿ(6), ಶಿಮ್ರೊನ್ ಹೆಟ್ಮೇಯರ್(4) ಹಾಗೂ ರೊಮ್ಯಾರಿಯೋ ಶೆಫರ್ಡ್‌(8) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ವೆಸ್ಟ್ ಇಂಡೀಸ್ ತಂಡವು 88 ರನ್‌ ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿತ್ತು.

ಇನ್ನು ಕೊನೆಯಲ್ಲಿ ಯಾನಿಕ್‌ ಕಾರಿಯ್‌(19), ಅಲ್ಜಾರಿ ಜೋಸೆಫ್(26) ಹಾಗೂ ಗುದಕೇಶ್ ಮೋಟಿ ಅಜೇಯ 39 ರನ್‌ ಬಾರಿಸುವ ಮೂಲಕ ತಂಡ 150ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. 

IND vs WI ಸರಣಿ ನಿರ್ಧಾರ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್, ಭಾರತ ತಂಡದಲ್ಲಿ 2 ಬದಲಾವಣೆ!

ವೆಸ್ಟ್ ಇಂಡೀಸ್ ಎದುರು ಮಾರಕ ದಾಳಿ ನಡೆಸಿದ ಶಾರ್ದೂಲ್ ಠಾಕೂರ್ 37 ರನ್ ನೀಡಿ 4 ವಿಕೆಟ್ ಪಡೆದರೆ, ಮುಕೇಶ್ ಕುಮಾರ್ 30 ರನ್‌ಗೆ 3, ಕುಲ್ದೀಪ್ ಯಾದವ್ 2 ಹಾಗೂ ಜಯದೇವ್ ಉನಾದ್ಕತ್ ಒಂದು ವಿಕೆಟ್ ಪಡೆದರು. 

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾಗೆ ಶುಭ್‌ಮನ್ ಗಿಲ್ ಹಾಗೂ ಇಶಾನ್ ಕಿಶನ್‌ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿಕೊಟ್ಟರು. ಇಶಾನ್ ಕಿಶನ್‌ 64 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 77 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಸರಣಿಯಲ್ಲಿ ಸತತ ಮೂರು ಪಂದ್ಯಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವತ್ತ ದಿಟ್ಟ ಹೆಜ್ಜೆಯಿಟ್ಟರು. ಇನ್ನು ಮೊದಲೆರಡು ಪಂದ್ಯಗಳಲ್ಲಿ ರನ್ ಗಳಿಸಲು ವಿಫಲವಾಗಿದ್ದ ಮತ್ತೋರ್ವ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ 92 ಎಸೆತಗಳನ್ನು ಎದುರಿಸಿ 11 ಬೌಂಡರಿ ಸಹಿತ 85 ರನ್ ಸಿಡಿಸಿದರು.

55 ಎಸೆತಗಳಲ್ಲಿ ಅಜೇಯ 137 ರನ್ ಚಚ್ಚಿದ ನಿಕೋಲಸ್ ಪೂರನ್‌; ಮುಂಬೈ ಮುಡಿಗೆ ಚೊಚ್ಚಲ MLC ಟ್ರೋಫಿ

ಇನ್ನು ಋತುರಾಜ್ ಗಾಯಕ್ವಾಡ್‌ ಕೇವಲ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ಕೊನೆಯ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದರು. ಸಂಜು 41 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 51 ರನ್ ಸಿಡಿಸಿದರು. ಇನ್ನು ಕೊನೆಯಲ್ಲಿ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ 52 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 70 ರನ್ ಸಿಡಿಸಿದರು. ಇನ್ನು ಸೂರ್ಯಕುಮಾರ್ ಯಾದವ್ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ರವೀಂದ್ರ ಜಡೇಜಾ ಅಜೇಯ 8 ರನ್ ಬಾರಿಸಿದರು.

Latest Videos
Follow Us:
Download App:
  • android
  • ios