ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೊದಲ ಟಿ20 ಪಂದ್ಯದ ಕೌಂಟ್‌ಡೌನ್ ಶುರುವಾಗಿದೆ. ಪ್ಲೇಯಿಂಗ್ 11ನಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ, ರಿಂಕು ಸಿಂಗ್ ಕಮ್‌ಬ್ಯಾಕ್ ಸೇರಿದಂತೆ ಯಾರಿಗೆಲ್ಲಾ ಸ್ಥಾನವಿದೆ? ಯಾರಿಗೆ ಕೊಕ್?
ಹರಾರೆ (ಜು.22) ಭಾರತ ಹಾಗೂ ಜಿಂಬಾಬ್ವೆ ಟಿ20 ಸರಣಿ ಆರಂಭಗೊಳ್ಳುತ್ತಿದೆ. ಮೂರು ಪಂದ್ಯಗಳ ಟಿ20 ಸರಣಿಗಾಗಿ ಈಗಗಾಗಲೇ ಟೀಂ ಇಂಡಿಯಾ ಜಿಂಬಾಬ್ವೆಯಲ್ಲಿ ಬೀಡು ಬಿಟ್ಟಿದೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ಸರಣಿ ಸೋಲಿನಿಂದ ಕಂಗೆಟ್ಟಿರುವ ಟೀಂ ಇಂಡಿಯಾಗೆ ಇದೀಗ ಜಿಂಬಾಬ್ವೆ ವಿರುದ್ದ ಸರಣಿ ಗೆದ್ದು ಮುಖಭಂಗ ತಪ್ಪಿಸಿಕೊಳ್ಳಲು ಮುಂದಾಗಿದೆ. ಜುಲೈ 23ಕ್ಕೆ ಹರಾರೆಯಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಮೊದಲ ಪಂದ್ಯಕ್ಕೆ ಯಾರಿಗೆಲ್ಲಾ ಸ್ಥಾನವಿದೆ? ಸಂಭಾವ್ಯ ತಂಡ ಪ್ರಕಟಗೊಂಡಿದೆ. ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಿಂಕು ಸಿಂಗ್ ಕಮ್‌ಬ್ಯಾಕ್ ಮಾಡುವ ಸಾಧ್ಯತೆ ಇದೆ.
ಟೀಂ ಇಂಡಿಯಾ ಪ್ಲೇಯಿಂಗ್ 11 ಸಂಭಾವ್ಯ ತಂಡ
ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಆಯ್ಯರ್ (ನಾಯಕ) ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ಹರ್ಷ ದುಬೆ, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ/ಯಶ್ ಠಾಕೂರ್, ಮಯಾಂಕ್ ಯಾದವ್
ಆರಂಭಿಕರಾಗಿ ವೈಭವ್ ಸೂರ್ಯವಂಶಿ-ಅಭಿಷೇಕ್ ಶರ್ಮಾ
ಜಿಂಬಾಬ್ವೆ ಸರಣಿಗೆ ಸಂಜು ಸ್ಯಾಮ್ಸನ್ ಆಯ್ಕೆಯಾಗಿಲ್ಲ. ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ ಕೊಡಲು ತನ್ನ ಸ್ಥಾನ ಬಿಟ್ಟುಕೊಟ್ಟ ಸಂಜು ಸ್ಯಾಮ್ಸನ್ ಇದೀಗ ತಂಡದಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಶ್ರೇಯಸ್ ಅಯ್ಯರ್
ಶ್ರೇಯಸ್ ಅಯ್ಯರ್ ಟಿ20 ತಂಡದ ಪರಿಪೂರ್ಣ ನಾಯಕನಾಗಿ ಆಯ್ಕೆಯಾದ ಬಳಿಕ ಐರ್ಲೆಂಡ್ ಸರಣಿ ಸೋಲು, ಇಂಗ್ಲೆಂಡ್ ಸರಣಿ ಸೋಲಿನ ಕಹಿ ಅನುಭವಿಸಿದ್ದಾರೆ. ಒಂದೂ ಪಂದ್ಯದಲ್ಲೂ ಗೆಲುವು ಸಿಕ್ಕಿಲ್ಲ. ಇದೀಗ ಜಿಂಬಾಬ್ವೆ ಸರಣಿಯಲ್ಲಿ ಮೊದಲ ಗೆಲುವು ಹಾಗೂ ಮೊದಲ ಸರಣಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಆಡಿದ 6ರಲ್ಲಿ 6 ಪಂದ್ಯದಲ್ಲಿ ಸೋಲು ಕಂಡರೆ, ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು.
2026ರ ಟಿ20 ಸರಣಿಯಲ್ಲಿ ಬೆಂಚ್ ಕಾದಿದ್ದ ರಿಂಕು ಸಿಂಗ್, ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿಯಬೇಕಾಯಿತು. ಇದೀಗ ಮತ್ತೆ ಜಿಂಬಾಬ್ವೆ ಸರಣಿಗೆ ಆಯ್ಕೆಯಾಗಿದ್ದಾರೆ. ಪ್ಲೇಯಿಂಗ್ 11ನಲ್ಲಿ ರಿಂಕ್ ಸಿಂಗ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇತ್ತ ಇಂಗ್ಲೆಂಡ್ ಪ್ರವಾಸದಲ್ಲಿ ಕಳಪೆ ಪ್ರದರ್ಶನ ನೀಡಿದ ಉಪ ನಾಯಕ ತಿಲಕ್ ವರ್ಮಾ ಸ್ಥಾನ ಪಡೆಯಲಿದ್ದಾರೆ. ಇನ್ನು ಶಿವಂ ದುಬೆ 6ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.
ಹರ್ಷ ದುಬೆ ಟೀಂ ಇಂಡಿಯಾಗೆ ಪದಾರ್ಪಣೆ ಮಾಡುವ ಸಾಧ್ಯತೆ
ಬೌಲಿಂಗ್ ವಿಭಾಗದಲ್ಲಿ ಕೆಲ ಬದಲಾವಣೆಯಾಗುವ ಸಾಧ್ಯತೆ ಇದೆ. ಹರ್ಷ ದುಬೆ ಟೀಂ ಇಂಡಿಯಾಗೆ ಪದಾರ್ಪಣೆ ಮಾಡುವ ಸಾಧ್ಯತೆ ಇದೆ. ಇನ್ನು ಕಳೆದೆರಡು ವರ್ಷದಿಂದ ಇಂಜುರಿ ಕಾರಣ ತಂಡದಿಂದ ಹೊರಗುಳಿದ ಮಯಾಂಕ್ ಯಾದವ್ ತಂಡ ಸೇರಿಕೊಂಡಿದ್ದಾರೆ. ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.


