* ಜಿಂಬಾಬ್ವೆ ಎದುರು ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ* ಭಾರತ ಕ್ರಿಕೆಟ್ ತಂಡದಲ್ಲಿ ಒಂದು ಮಹತ್ವದ ಬದಲಾವಣೆ* ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಗೆಲುವು ಸಾಧಿಸಿದ್ದ ಭಾರತ

ಹರಾರೆ(ಆ.20): ಭಾರತ ಹಾಗೂ ಜಿಂಬಾಬ್ವೆ ತಂಡಗಳ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡದಲ್ಲಿ ಒಂದು ಹಾಗೂ ಜಿಂಬಾಬ್ವೆ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಗೆಲುವು ಸಾಧಿಸಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇಂದಿನ ಪಂದ್ಯವನ್ನು ಗೆದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ.

ಇಲ್ಲಿನ ಹರಾರೆ ಕ್ರಿಕೆಟ್ ಕ್ಲಬ್‌ನಲ್ಲಿ ಆರಂಭವಾದ ಎರಡನೇ ಏಕದಿನ ಪಂದ್ಯದಲ್ಲಿ ಅಚ್ಚರಿಯ ಬದಲಾವಣೆ ಎನ್ನುವಂತೆ ಕಳೆದ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ದೀಪಕ್ ಚಹರ್‌ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಾರ್ದೂಲ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಜಿಂಬಾಬ್ವೆ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಕೈಟಾನೋ ಮತ್ತು ಚಿವಾಂಗ ತಂಡ ಕೂಡಿಕೊಂಡಿದ್ದಾರೆ.

Ind vs ZIM ಏಕದಿನ ಸರಣಿ ಜಯದ ವಿಶ್ವಾಸದಲ್ಲಿ ಟೀಂ ಇಂಡಿಯಾ

ಮೊದಲ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಮೊದಲು ಬ್ಯಾಟ್ ಮಾಡಿ ಕೇವಲ 189 ರನ್‌ಗಳಿಗೆ ಸರ್ವಪತನ ಕಂಡಿತ್ತು. ಇನ್ನು ಸಾದಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ 10 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತ್ತು. ಶಿಖರ್ ಧವನ್ ಹಾಗೂ ಶುಭ್‌ಮನ್ ಗಿಲ್‌ ಆಕರ್ಷಕ ಅರ್ಧಶತಕ ಬಾರಿಸಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದರು. ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಹಾಗೂ ಶುಭ್‌ಮನ್ ಗಿಲ್ ಅವರೇ ಇನಿಂಗ್ಸ್ ಆರಂಭಿಸುತ್ತಾರೋ ಅಥವಾ ಕೆ ಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಾರೋ ಎನ್ನುವ ಕುತೂಹಲ ಜೋರಾಗಿದೆ.

Scroll to load tweet…

ಎರಡನೇ ಏಕದಿನ ಪಂದ್ಯಕ್ಕೆ ತಂಡಗಳು ಹೀಗಿವೆ

ಭಾರತ: ಶಿಖರ್ ಧವನ್‌, ಶುಭ್‌ಮನ್‌ ಗಿಲ್‌, ಇಶಾನ್ ಕಿಶನ್‌, ಕೆ ಎಲ್ ರಾಹುಲ್‌(ನಾಯಕ), ದೀಪಕ್‌ ಹೂಡಾ, ಸಂಜು ಸ್ಯಾಮ್ಸನ್‌, ಅಕ್ಷರ್‌ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್‌ ಯಾದವ್, ಪ್ರಸಿದ್ದ್ ಕೃಷ್ಣ, ಮೊಹಮ್ಮದ್ ಸಿರಾಜ್‌.

ಜಿಂಬಾಬ್ವೆ: ಇನೊಸೆಂಟ್‌, ತಕುವಾನ್ಸೆ ಕೈಟಾನೊ, ಮಧೆವೆರೆ, ಸೀನ್ ವಿಲಿಯಮ್ಸ್‌, ಸಿಕಂದರ್ ರಾಜಾ, ಚಕಾಬ್ವ(ನಾಯಕ), ರಿಯಾನ್ ಬರ್ಲ್‌, ಜಾಂಗ್ವೆ, ಬ್ರಾಡ್ ಎವಾನ್ಸ್‌, ತನಕ ಚಿವಾಂಗ, ವಿಕ್ಟರ್‌.

ಪಂದ್ಯ ಆರಂಭ: ಮಧ್ಯಾಹ್ನ 12.45ಕ್ಕೆ
ನೇರ ಪ್ರಸಾರ: ಸೋನಿ ಟೆನ್‌