ಮುಂಬೈ(ಫೆ.17): ಇಂಗ್ಲೆಂಡ್‌ ವಿರುದ್ದದ ಅಹಮದಾಬಾದ್‌ನಲ್ಲಿ ನಡೆಯಲಿರುವ ಮೂರು ಹಾಗೂ ನಾಲ್ಕನೇ ಟೆಸ್ಟ್‌ ಪಂದ್ಯಕ್ಕೆ ಆಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದ್ದು, ಉಮೇಶ್ ಯಾದವ್‌ ತಂಡ ಕೂಡಿಕೊಂಡಿದ್ದಾರೆ.

ಮೂರನೇ ಟೆಸ್ಟ್‌ ಪಂದ್ಯವು ಪಿಂಕ್‌ ಬಾಲ್ ಟೆಸ್ಟ್‌ ಪಂದ್ಯವಾಗಿದ್ದು, ವೇಗಿ ಉಮೇಶ್‌ ಯಾದವ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಫಿಟ್ನೆಸ್‌ ಪರೀಕ್ಷೆ ಪಾಸ್‌ ಮಾಡಿದರೆ ತಂಡ ಕೂಡಿಕೊಳ್ಳಲಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಉಮೇಶ್ ಯಾದವ್‌ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಉಮೇಶ್ ಯಾದವ್‌ ಬದಲಿಗೆ ಶಾರ್ದೂಲ್ ಠಾಕೂರ್‌ ತಂಡ ಕೂಡಿಕೊಂಡಿದ್ದರು. ಇದೀಗ ಶಾರ್ದೂಲ್‌ ಠಾಕೂರ್‌ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಅವರ ಬದಲಿಗೆ ಉಮೇಶ್ ಯಾದವ್‌ ತಂಡ ಕೂಡಿಕೊಂಡಿದ್ದಾರೆ.

ಭಾರತ ಎದುರಿನ 3ನೇ ಟೆಸ್ಟ್‌ಗೆ 17 ಆಟಗಾರರನ್ನೊಳಗೊಂಡ ಇಂಗ್ಲೆಂಡ್‌ ತಂಡ ಪ್ರಕಟ..!

4 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಿಸಿದ್ದು, ಇನ್ನುಳಿದ ಎರಡು ಪಂದ್ಯಗಳಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂದು ಕಾದು ನೋಡಬೇಕಿದೆ.

ಉಳಿದೆರಡು ಟೆಸ್ಟ್ ಪಂದ್ಯಗಳಿಗೆ  ಭಾರತ ತಂಡ ಹೀಗಿದೆ ನೋಡಿ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್‌ವಾಲ್‌, ಶುಭ್‌ಮನ್‌ ಗಿಲ್‌, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ಕೆ.ಎಲ್‌.ರಾಹುಲ್‌, ಹಾರ್ದಿಕ್ ಪಾಂಡ್ಯ, ರಿಷಭ್‌ ಪಂತ್‌, ವೃದ್ದಿಮಾನ್ ಸಾಹ, ರವಿಚಂದ್ರನ್ ಅಶ್ವಿನ್‌, ಕುಲ್ದೀಪ್ ಯಾದವ್‌, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್‌, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌