ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟರೋಹಿತ್ ಶರ್ಮಾ ನಾಯಕ, ಹಾರ್ದಿಕ್ ಪಾಂಡ್ಯಗೆ ಉಪನಾಯಕ ಪಟ್ಟಅಕ್ಟೋಬರ್ 05ರಿಂದ ಏಷ್ಯಾಕಪ್ ಟೂರ್ನಿಗೆ ಅಧಿಕೃತ ಚಾಲನೆ
ನವದೆಹಲಿ(ಸೆ.05): ಮುಂಬರುವ ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ನಿರೀಕ್ಷೆಯಂತೆಯೇ ಕನ್ನಡಿಗ ಕೆ ಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಸದ್ಯ ಏಷ್ಯಾಕಪ್ ಟೂರ್ನಿಯಲ್ಲೂ ಹಾರ್ದಿಕ್ ಪಾಂಡ್ಯ ಭಾರತ ತಂಡದ ಉಪನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವಿಶ್ವಕಪ್ ಟೂರ್ನಿಗೆ ಭಾರತ ತಂಡ ಸೆಲೆಕ್ಟ್ ಮಾಡಿದ ಗೌತಮ್ ಗಂಭೀರ್..! ಇಬ್ಬರು ಸ್ಟಾರ್ ಆಟಗಾರರಿಗಿಲ್ಲ ಸ್ಥಾನ
ಭಾರತ ಕ್ರಿಕೆಟ್ ತಂಡವು ಕಳೆದೊಂದು ದಶಕದಿಂದಲೂ ಐಸಿಸಿ ಟ್ರೋಫಿಯ ಬರ ಎದುರಿಸುತ್ತಾ ಬಂದಿದೆ. 2013ರಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಟೀಂ ಇಂಡಿಯಾ ಹಲವು ಬಾರಿ ಐಸಿಸಿ ಟೂರ್ನಿಯಲ್ಲಿ ನಾಕೌಟ್ ಹಂತದಲ್ಲೇ ಹೊರಬೀಳುವ ಮೂಲಕ ನಿರಾಸೆ ಅನುಭವಿಸುತ್ತಲೇ ಬಂದಿದೆ. ಇನ್ನು ಧೋನಿ ನೇತೃತ್ವದಲ್ಲೇ ಟೀಂ ಇಂಡಿಯಾ 2011ರಲ್ಲಿ ಕೊನೆಯ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್ ಜಯಿಸಿತ್ತು.ಇದಾದ ಬಳಿಕ ಭಾರತ ವಿಶ್ವಕಪ್ ಜಯಿಸಿಲ್ಲ. ಇದೀಗ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತವೇ ಆತಿಥ್ಯ ವಹಿಸುತ್ತಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
46 ದಿನ, 48 ಪಂದ್ಯ: 46 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಫೈನಲ್ ಸೇರಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್, ಬಾಂಗ್ಲಾದೇಶ, ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ. ಈ 8 ತಂಡಗಳು ನೇರ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇನ್ನೆರಡು ತಂಡಗಳಾದ ಶ್ರೀಲಂಕಾ ಹಾಗೂ ನೆದರ್‌ಲೆಂಡ್ಸ್ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರಧಾನ ಸುತ್ತಿಗೆ ಲಗ್ಗೆಯಿಟ್ಟಿವೆ.
World Cup 2023 ಟೂರ್ನಿಗಿಂದು ಭಾರತ ತಂಡ ಪ್ರಕಟ; ಕೆ ಎಲ್ ರಾಹುಲ್‌ಗೆ ಸಿಗುತ್ತಾ ಸ್ಥಾನ?
ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ವಿಶ್ವಕಪ್ ಟೂರ್ನಿಗೆ ಭಾರತದ ವೇಳಾಪಟ್ಟಿ ಹೀಗಿದೆ ನೋಡಿ:

