ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪವರ್‌ಪ್ಲೇನಲ್ಲಿ ಹೊಸ ವಿಶ್ವದಾಖಲೆಗಳನ್ನು ನಿರ್ಮಿಸಿದೆ. ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ಅವರ ಸ್ಪೋಟಕ ಬ್ಯಾಟಿಂಗ್‌ನಿಂದ ಭಾರತ ಕೇವಲ 5 ಓವರ್‌ಗಳಲ್ಲಿ 100 ರನ್ ಗಳಿಸಿ ಇತಿಹಾಸ ಸೃಷ್ಟಿಸಿದೆ. ಅಲ್ಲದೆ, ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
ವೆಲ್ಲಿಂಗ್ಟನ್: ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ ವಿಸ್ಪೋಟಕ ಆರಂಭ ಪಡೆದಿದೆ. ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿಯ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ, ಇದೀಗ ಪವರ್‌ಪ್ಲೇನಲ್ಲೇ ಹೊಸ ವಿಶ್ವದಾಖಲೆ ಬರೆದಿದೆ.
ಹೌದು, ಮೂರನೇ ಟಿ20 ಪಂದ್ಯದಲ್ಲಿ ಗೆಲ್ಲಲು 199 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಮೊದಲ ಓವರ್‌ನಲ್ಲೇ ಭರ್ಜರಿ ಆರಂಭ ಪಡೆಯಿತು. ಸಂಜು ಸ್ಯಾಮ್ಸನ್ ಬದಲಿಗೆ ಅಭಿಷೇಕ್ ಶರ್ಮಾ ಜತೆ ಇನ್ನಿಂಗ್ಸ್ ಅರಂಭಿಸಿದ ವೈಭವ್ ಸೂರ್ಯವಂಶಿ ಭಾರತಕ್ಕೆ ಭರ್ಜರಿ ಆರಂಭ ಒದಗಿಸಿಕೊಟ್ಟರು. ಮೊದಲ ಓವರ್‌ನಲ್ಲೇ 26 ರನ್ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಓವರ್‌ನಲ್ಲೇ ಅತಿಹೆಚ್ಚು ರನ್ ಬಾರಿಸಿದ ತಂಡ ಎನ್ನುವ ಹಿರಿಮೆಗೆ ಟೀಂ ಇಂಡಿಯಾ ಪಾತ್ರವಾಗಿದೆ.
2.2 ಓವರ್‌ನಲ್ಲಿ ಫಿಫ್ಟಿ, 5 ಓವರ್‌ನಲ್ಲಿ ಸೆಂಚೂರಿ ಬಾರಿಸಿದ ಟೀಂ ಇಂಡಿಯಾ!
ಇನ್ನು ಟೀಂ ಇಂಡಿಯಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ 2.2 ಓವರ್‌ಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಅಪರೂಪದ ವಿಶ್ವದಾಖಲೆ ನಿರ್ಮಿಸಿದೆ. ಐಸಿಸಿ ಪೂರ್ಣ ಸದಸ್ಯತ್ವ ಪಡೆದ ಹಾಗೂ ಟೆಸ್ಟ್ ಆಡುವ ಮಾನ್ಯತೆ ಪಡೆದ ದೇಶಗಳ ಪೈಕಿ ಟಿ20 ಕ್ರಿಕೆಟ್‌ನಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಮೊದಲ ತಂಡ ಎನ್ನುವ ವಿಶ್ವದಾಖಲೆಗೆ ಟೀಂ ಇಂಡಿಯಾ ಪಾತ್ರವಾಗಿದೆ.
ಇನ್ನು ಇದಾದ ಬಳಿಕವೂ ಮಿಂಚಿನ ಆಟ ಮುಂದುವರೆಸಿದ ಟೀಂ ಇಂಡಿಯಾ ಕೇವಲ 5 ಓವರ್‌ನಲ್ಲಿ ನೂರು ರನ್ ಬಾರಿಸುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿದ ಮೊದಲ ತಂಡ ಎನ್ನುವ ಹಿರಿಮೆಗೆ ಟೀಂ ಇಂಡಿಯಾ ಪಾತ್ರವಾಗಿದೆ. ಇದಕ್ಕೂ ಮೊದಲು 2021ರಲ್ಲಿ ರೊಮ್ಯಾನಿಯಾ ತಂಡವು ಸರ್ಬಿಯಾ ಎದುರು 5.2 ಓವರ್‌ಗಳಲ್ಲಿ 100 ರನ್ ಬಾರಿಸಿದ ಸಾಧನೆ ಮಾಡಿತ್ತು.
14 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ ಅಭಿಷೇಕ್ ಶರ್ಮಾ:
ಟೀಂ ಇಂಡಿಯಾ ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ತಮ್ಮ ಗುರು ಯುವರಾಜ್ ಸಿಂಗ್ ಹಾದಿಯಲ್ಲಿಯೇ ಸಾಗುತ್ತಿದ್ದಾರೆ. ಇದೀಗ ಅಭಿಷೇಕ್ ಶರ್ಮಾ ಹಾದಿಯಲ್ಲಿಯೇ ಸಾಗುತ್ತಿದ್ದಾರೆ. 2007ರಲ್ಲಿ ಯುವರಾಜ್ ಸಿಂಗ್ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಅಭಿಷೇಕ್ ಶರ್ಮಾ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕಾಲಿನ್ ಮನ್ರೂ ಜತೆ ಜಂಟಿ ಎರಡನೇ ಸ್ಥಾನಕ್ಕೇರಿದ್ದಾರೆ.







