ಆಕ್ಸಿಜನ್ ಪೂರೈಕೆಗೆ ಸಚಿನ್ 1 ಕೋಟಿ ರೂ ಬೆಂಬಲ
ಕ್ರಿಕೆಟ್ ದಿಗ್ಗಜ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ದೇಶದ ಕೊರೋನಾ ವಿರುದ್ದದ ಹೋರಾಟಕ್ಕೆ ಕೈಜೋಡಿಸಿದ್ದು, ಮಿಷನ್ ಆಕ್ಸಿಜನ್ ಅಭಿಯಾನಕ್ಕೆ ಒಂದು ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ನವದೆಹಲಿ(ಏ.30): ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿಗೆ ತುತ್ತಾದವರಿಗೆ ಆಕ್ಸಿಜನ್ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಪೂರೈಕೆಗೆ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ 1 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ.
ದೆಹಲಿಯ ಉದ್ಯಮಿಗಳು ಸೇರಿ ರಚಿಸಿಕೊಂಡಿರುವ ‘ಮಿಷನ್ ಆಕ್ಸಿಜನ್’ ಹೆಸರಿನ ಸಂಸ್ಥೆಯೊಂದಕ್ಕೆ ಸಚಿನ್ ದೇಣಿಗೆ ನೀಡಿದ್ದು, ಆ ಸಂಸ್ಥೆ ವಿದೇಶದಿಂದ ಆಕ್ಸಿಜನ್ ಉಪಕರಣಗಳನ್ನು ಆಮದು ಮಾಡಿಕೊಂಡು ಅಗತ್ಯವಿರುವ ಆಸ್ಪತ್ರೆಗಳಿಗೆ ಅವುಗಳನ್ನು ದಾನ ನೀಡುತ್ತದೆ. ಇತ್ತೀಚೆಗಷ್ಟೇ ಸಚಿನ್ ಕೋವಿಡ್ ಸೋಂಕಿಗೆ ತುತ್ತಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಹಲವು ದಿನಗಳ ಕಾಲ ಆಸ್ಪತ್ರೆ ವಾಸದ ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು.
ಕೋವಿಡ್ ಮಣಿಸಲು 7.5 ಕೋಟಿ ರುಪಾಯಿ ದೇಣಿಗೆ ನೀಡಿದ ರಾಜಸ್ಥಾನ್ ರಾಯಲ್ಸ್
ಈ ಮೊದಲು ಆಸ್ಟ್ರೇಲಿಯಾ ಕ್ರಿಕೆಟಿಗರಾದ ಪ್ಯಾಟ್ ಕಮಿನ್ಸ್ ಹಾಗೂ ಬ್ರೆಟ್ ಲೀ ಭಾರತದ ಕೋವಿಡ್ ವಿರುದ್ದದ ಹೋರಾಟಕ್ಕೆ ಲಕ್ಷಾಂತರ ರುಪಾಯಿ ದೇಣಿಗೆ ನೀಡಿದ್ದರು. ಇದಾದ ಬಳಿಕ ಏಪ್ರಿಲ್ 29ರಂದು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ 7.5 ಕೋಟಿ ರುಪಾಯಿ ದೇಣಿಗೆ ನೀಡುವ ಮೂಲಕ ಭಾರತದ ಕೊರೋನಾ ವಿರುದ್ದದ ಹೋರಾಟಕ್ಕೆ ಕೈ ಜೋಡಿಸಿದ್ದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
"