Asianet Suvarna News Asianet Suvarna News

India Tour of Bangladesh: ಬಾಂಗ್ಲಾದೇಶ ಎದುರಿನ ಏಕದಿನ ಸರಣಿಯಿಂದ ಜಡ್ಡು, ಯಶ್ ದಯಾಳ್ ಔಟ್..!

ಡಿಸೆಂಬರ್ ಮೊದಲ ವಾರದಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ
ಬಾಂಗ್ಲಾದೇಶ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದ ಯಶ್ ದಯಾಳ್, ರವೀಂದ್ರ ಜಡೇಜಾ
ಶಹಬಾಜ್ ಅಹಮ್ಮದ್ ಹಾಗು ಕುಲ್ದಿಪ್ ಸೆನ್‌ಗೆ ಒಲಿದ ಅವಕಾಶ

India Tour of Bangladesh Ravindra Jadeja and Yash Dayal ruled out of Bangladesh ODI Series kvn
Author
First Published Nov 24, 2022, 10:35 AM IST

ನವದೆಹಲಿ(ನ.24): ಟೀಂ ಇಂಡಿಯಾ ತಾರಾ ಆಲ್ರೌಂಡರ್ ರವೀಂದ್ರ ಜಡೇಜಾ ಇನ್ನೂ ಮೊಣಕಾಲು ಗಾಯದ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಬಾಂಗ್ಲಾದೇಶ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಭಾರತ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ಪ್ರವಾಸ ಮುಗಿಸಿದ ಬಳಿಕ ಡಿಸೆಂಬರ್ ತಿಂಗಳಿನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಬಾಂಗ್ಲಾದೇಶ ಎದುರು 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಇನ್ನು ಐಪಿಎಲ್‌ ಹಾಗೂ ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಯುವ ಎಡಗೈ ವೇಗಿ ಯಶ್ ದಯಾಳ್, ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಯಶ್ ದಯಾಳ್ ಕೂಡಾ, ಬಾಂಗ್ಲಾದೇಶ ಎದುರಿನ ಸರಣಿಯಿಂದ ಹೊರಬಿದ್ದಿದ್ದಾರೆ.

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಡಿಸೆಂಬರ್ 04ರಿಂದ ಆರಂಭವಾಗಲಿದ್ದು, ರವೀಂದ್ರ ಜಡೇಜಾ ಬದಲಿಗೆ ಶಹಬಾಜ್ ಅಹಮದ್ ಹಾಗೂ ಯಶ್ ದಯಾಳ್ ಬದಲಿಗೆ ವೇಗಿ ಕುಲ್ದಿಪ್ ಸೆನ್‌ಗೆ  ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. 

ತಾರಾ ಆಲ್ರೌಂಡರ್ ರವೀಂದ್ರ ಜಡೇಜಾ, ಏಷ್ಯಾಕಪ್ ಟೂರ್ನಿಯ ವೇಳೆ ಗಾಯಕ್ಕೆ ತುತ್ತಾಗಿ, ಯುಎಇನಲ್ಲಿಯೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದಾದ ಬಳಿಕ ಜಡ್ಡು ಅನಿರ್ದಿಷ್ಟವಧಿಯ ಮಟ್ಟಿಗೆ ಕ್ರಿಕೆಟ್‌ನಿಂದ ಹೊರಬಿದ್ದಿದ್ದು, ಟಿ20 ವಿಶ್ವಕಪ್ ಟೂರ್ನಿ ಆಡುವ ಅವಕಾಶದಿಂದಲೂ ವಂಚಿತರಾಗಿದ್ದರು. 

ICC T20 Rankings: ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲೇ ಭದ್ರ, 4ನೇ ಸ್ಥಾನಕ್ಕೆ ಜಾರಿದ ಬಾಬರ್ ಅಜಂ..!

ಯಶ್ ದಯಾಳ್ ಸೊಂಟ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಬಾಂಗ್ಲಾದೇಶ ಸರಣಿಯಿಂದ ಹೊರಬಿದ್ದಿದ್ದಾರೆ. ಇನ್ನು ರವೀಂದ್ರ ಜಡೇಜಾ ಮೊಣಕಾಲ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸದ್ಯ ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯದ ಮೇಲೆ ಬಿಸಿಸಿಐ ವೈದ್ಯಕೀಯ ತಂಡವು ನಿಗಾಯಿಟ್ಟಿದೆ ಎಂದು ಬಿಸಿಸಿಐ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಂಗ್ಲಾದೇಶ ಎದುರಿನ ಏಕದಿನ ಸರಣಿಗೆ ಭಾರತದ ಪರಿಷ್ಕೃತ ತಂಡ ಹೀಗಿದೆ ನೋಡಿ

ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್, ಶಹಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಕುಲ್ದೀಪ್ ಸೆನ್.

ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:

ಶಿಖರ್ ಧವನ್(ನಾಯಕ), ಶುಭ್‌ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್&ಉಪನಾಯಕ), ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಆರ್ಶದೀಪ್ ಸಿಂಗ್, ದೀಪಕ್ ಚಹರ್, ಉಮ್ರಾನ್ ಮಲಿಕ್.

Follow Us:
Download App:
  • android
  • ios