ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟ8 ತಿಂಗಳ ಬಳಿಕ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಅಶ್ವಿನ್ ಕಮ್‌ಬ್ಯಾಕ್ತಾರಾ ಆಟಗಾರರಾದ ವಿರಾಟ್ ಕೊಹ್ಲಿ, ಬುಮ್ರಾ, ಚಹಲ್‌ಗೆ ರೆಸ್ಟ್‌

ಬೆಂಗಳೂರು(ಜು.14): ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಟಿ20 ತಂಡದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿಂಡೀಸ್ ಎದುರಿನ ಏಕದಿನ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಜುಲೈ 29ರಿಂದ ಆರಂಭವಾಗಲಿರುವ ಟಿ20 ಸರಣಿಗೆ 18 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಲಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ಯುಜುವೇಂದ್ರ ಚಹಲ್‌ಗೆ ವಿಶ್ರಾಂತಿ ನೀಡಲಾಗಿದೆ.

ವಿರಾಟ್ ಕೊಹ್ಲಿ ಕಳೆದ ಕೆಲ ವರ್ಷಗಳಿಂದ ಫಾರ್ಮ್‌ ಸಮಸ್ಯೆ ಎದುರಿಸುತ್ತಿದ್ದು, ವಿಂಡೀಸ್‌ ಪ್ರವಾಸದ ಏಕದಿನ ಹಾಗೂ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಮುಕ್ತಾಯದ ಬಳಿಕ ದಕ್ಷಿಣ ಆಫ್ರಿಕಾ ಹಾಗೂ ಐರ್ಲೆಂಡ್ ಎದುರಿನ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇಂಗ್ಲೆಂಡ್ ಪ್ರವಾಸದ ವೇಳೆಯಲ್ಲಿಯೂ ಕೊಹ್ಲಿ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ತೋರಲು ವಿಫಲವಾಗಿದ್ದರು. ಇನ್ನು ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ವಿರಾಟ್ ಕೊಹ್ಲಿ ತಂಡದಿಂದ ಹೊರಗುಳಿದಿದ್ದರು.

ಇನ್ನು ಅಚ್ಚರಿಯ ಬೆಳವಣಿಗೆ ಎನ್ನುವಂತೆ ಬರೋಬ್ಬರಿ ಎಂಟು ತಿಂಗಳುಗಳ ಬಳಿಕ ರವಿಚಂದ್ರನ್ ಅಶ್ವಿನ್, ಭಾರತ ಸೀಮಿತ ಓವರ್‌ಗಳ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್‌ ವಿರುದ್ದ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದ ವೇಳೆ ಅಶ್ವಿನ್ ಬೆಂಚ್ ಕಾಯಿಸಿದ್ದರು. ಇನ್ನು ಕೆ ಎಲ್ ರಾಹುಲ್ ಹಾಗೂ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಅಯ್ಕೆ ಮಾಡಲಾಗಿದ್ದು, ಫಿಟ್ನೆಸ್ ಸಾಬೀತುಪಡಿಸಿದರಷ್ಟೇ ಈ ಇಬ್ಬರು ಆಟಗಾರರು ತಂಡ ಕೂಡಿಕೊಳ್ಳಲಿದ್ದಾರೆ. ಇನ್ನುಳಿದಂತೆ ಟೀಂ ಇಂಡಿಯಾ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. 

Shikhar Dhawan: ವಿಂಡೀಸ್ ಎದುರಿನ ಸರಣಿಗೆ ಭಾರತ ತಂಡ ಪ್ರಕಟ, ಧವನ್‌ಗೆ ನಾಯಕ ಪಟ್ಟ..!

ಮತ್ತೊಮ್ಮೆ ಸಂಜು ಸ್ಯಾಮ್ಸನ್‌ ಕಡೆಗಣಿಸಿದ ಆಯ್ಕೆ ಸಮಿತಿ: ಐರ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ 41 ಎಸೆತಗಳಲ್ಲಿ ಅಬ್ಬರದ 77 ರನ್ ಬಾರಿಸಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದ ಸಂಜು ಸ್ಯಾಮ್ಸನ್‌, ವಿಂಡೀಸ್ ಎದುರಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಂಜು ಸ್ಯಾಮ್ಸನ್ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ಕಡೆಗಣಿಸಿದೆ.

ವೆಸ್ಟ್ ಇಂಡೀಸ್ ಎದುರಿನ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಹೀಗಿದೆ ನೋಡಿ

Scroll to load tweet…
Scroll to load tweet…

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕೆ ಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್*, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಆರ್ಶದೀಪ್ ಸಿಂಗ್.