ಕ್ಯಾನ್‌ಬೆರ್ರಾ(ಡಿ.04): ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಫೀಲ್ಡಿಂಗ್ ಆಯ್ದುಕೊಂಡಿದೆ.

ಉಭಯ ತಂಡಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ತಮಿಳುನಾಡು ಮೂಲದ ಟಿ. ನಟರಾಜನ್ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನುಳಿದಂತೆ ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್ ಹಾಗೂ ಮೊಹಮ್ಮದ್ ಶಮಿ ತಂಡ ಕೂಡಿಕೊಂಡಿದ್ದು, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಅಸ್ಟ್ರೇಲಿಯಾ ತಂಡದಲ್ಲಿ ಡಾರ್ಚಿ ಶಾರ್ಟ್ ಹಾಗೂ ಮ್ಯಾಥ್ಯೂ ವೇಡ್ ತಂಡ ಕೂಡಿಕೊಂಡಿದ್ದಾರೆ. ಈಗಾಗಲೇ ಏಕದಿನ ಸರಣಿ ಸೋತಿರುವ ಟಿ20 ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ. 

ತಂಡಗಳು ಹೀಗಿವೆ:

ಭಾರತ:

ಅಸ್ಟ್ರೇಲಿಯಾ: