ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, 4ನೇ ಓವರ್‌ನಲ್ಲೇ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ವಿಕೆಟ್ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಗಾಯಕ್ವಾಡ್, ಎರಡನೇ ಏಕದಿನ ಪಂದ್ಯದಲ್ಲಿ 12 ಎಸೆತಗಳನ್ನು ಎದುರಿಸಿ ಎರಡು ಬೌಂಡರಿಯೊಂದಿಗೆ ಕೇವಲ 8 ರನ್ ಗಳಿಸಿ ಜೋಶ್ ಹೇಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು.

ಇಂದೋರ್(ಸೆ.24): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ. ಹೀಗಿರುವಾಗಲೇ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗಿದ್ದು ಪಂದ್ಯ ಸ್ಥಗಿತವಾಗಿದೆ. ಭಾರತ ತಂಡವು ಮೊದಲ 9.5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 79 ರನ್‌ ಗಳಿಸಿದ್ದಾಗ ಮಳೆರಾಯ ಪಂದ್ಯಕ್ಕೆ ಅಡ್ಡಿಯಾಗಿದ್ದಾನೆ.

ಇಲ್ಲಿನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, 4ನೇ ಓವರ್‌ನಲ್ಲೇ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ವಿಕೆಟ್ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಗಾಯಕ್ವಾಡ್, ಎರಡನೇ ಏಕದಿನ ಪಂದ್ಯದಲ್ಲಿ 12 ಎಸೆತಗಳನ್ನು ಎದುರಿಸಿ ಎರಡು ಬೌಂಡರಿಯೊಂದಿಗೆ ಕೇವಲ 8 ರನ್ ಗಳಿಸಿ ಜೋಶ್ ಹೇಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು.

ಗಿಲ್-ಅಯ್ಯರ್ ಮಿಂಚಿನ ಜತೆಯಾಟ: ಕೇವಲ 16 ರನ್‌ಗೆ ಒಂದು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೊಳಗಾಗಿದ್ದ ಭಾರತ ತಂಡಕ್ಕೆ ಶುಭ್‌ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಆಸರೆಯಾಗಿದ್ದಾರೆ. ಎರಡನೇ ವಿಕೆಟ್‌ಗೆ ಈ ಜೋಡಿ ಕೇವಲ 37 ಎಸೆತಗಳಲ್ಲಿ ಮುರಿಯದ 63 ರನ್‌ಗಳ ಜತೆಯಾಟವಾಡುವ ಮೂಲಕ ರನ್ ಗಳಿಕೆಗೆ ಚುರುಕು ಮುಟ್ಟಿಸಿದರು. ಈ ವೇಳೆ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗಿದ್ದಾನೆ. ಶುಭ್‌ಮನ್ ಗಿಲ್ 27 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 32 ರನ್ ಬಾರಿಸಿದ್ದಾರೆ. ಇನ್ನು ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಕೇವಲ 20 ಎಸೆತಗಳಲ್ಲಿ 6 ಬೌಂಡರಿ ಸಹಿತ 34 ರನ್ ಗಳಿಸಿದ್ದು, ದೊಡ್ಡ ಮೊತ್ತ ಕಲೆಹಾಕುವ ಮುನ್ಸೂಚನೆ ನೀಡಿದ್ದಾರೆ.

ತಂಡಗಳು ಹೀಗಿವೆ ನೋಡಿ

ಭಾರತ: ಶುಭ್‌ಮನ್ ಗಿಲ್‌, ಋತುರಾಜ್ ಗಾಯಕ್ವಾಡ್‌, ಶ್ರೇಯಸ್‌ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್‌ ಕಿಶನ್, ಕೆ ಎಲ್ ರಾಹುಲ್‌(ನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್‌, ಶಾರ್ದೂಲ್‌ ಠಾಕೂರ್, ಪ್ರಸಿದ್ಧ್‌ ಕೃಷ್ಣ, ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್‌, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್‌(ನಾಯಕ), ಮಾರ್ನಸ್ ಲಬುಶೇನ್‌, ಕ್ಯಾಮರೋನ್ ಗ್ರೀನ್‌, ಜೋಶ್ ಇಂಗ್ಲಿಸ್‌, ಅಲೆಕ್ಸ್ ಕ್ಯಾರಿ, ಶಾನ್ ಅಬೋಟ್‌, ಆಡಂ ಜಂಪಾ, ಜೋಶ್ ಹೇಜಲ್‌ವುಡ್, ಸ್ಪೆನ್ಸರ್ ಜಾನ್ಸನ್.