ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೆಲ್ಬರ್ನ್‌ನಲ್ಲಿ ನಡೆಯುತ್ತಿರುವ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದಲ್ಲಿ ಮ್ಯಾಥ್ಯೂ ಶಾರ್ಟ್ ರೂಪದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ಮೆಲ್ಬರ್ನ್‌: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡವು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿತ್ತು. ಇದೀಗ ಎರಡನೇ ಟಿ20 ಪಂದ್ಯಕ್ಕೆ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿದ್ದು, ಸರಣಿಯಲ್ಲಿ ಶುಭಾರಂಭ ಮಾಡಲು ಉಭಯ ತಂಡಗಳು ತುದಿಗಾಲಿನಲ್ಲಿ ನಿಂತಿವೆ.

Scroll to load tweet…

ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ:

ಭಾರತ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಜೋಶ್ವಾ ಫಿಲಿಫ್ಪಿ ಬದಲಿಗೆ ಮ್ಯಾಥ್ಯೂ ಶಾರ್ಟ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇದೀಗ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:

ಭಾರತ: ಅಭಿಷೇಕ್ ಶರ್ಮಾ, ಶುಭ್‌ಮನ್ ಗಿಲ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ: ಟ್ರ್ಯಾವಿಸ್ ಹೆಡ್, ಮಿಚೆಲ್ ಮಾರ್ಷ್(ನಾಯಕ), ಜೋಶ್ ಇಂಗ್ಲಿಶ್(ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ಶಾರ್ಟ್, ಟಿಮ್ ಡೇವಿಡ್, ಮಿಚೆಲ್ ಓವನ್, ನೇಥನ್ ಎಲ್ಲೀಸ್, ಕ್ಸೇವಿಯರ್ ಬಾರ್ಟೆಲ್ಟ್, ಮ್ಯಾಥ್ಯೂ ಕುನ್ಹೇಮನ್, ಜೋಶ್ ಹೇಜಲ್‌ವುಡ್.

ಪಂದ್ಯ ಆರಂಭ: ಮಧ್ಯಾಹ್ನ 1.45ಕ್ಕೆ

ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್