ಮೊನ್ನೆ ನಾಟು ನಾಟು, ಇಂದು ಲುಂಗಿ ಡ್ಯಾನ್ಸ್, ಕೊಹ್ಲಿ ಸ್ಟೆಪ್ಸ್‌ಗೆ ಅಭಿಮಾನಿಗಳು ಫಿದಾ!
ಆಸ್ಟ್ರೇಲಿಯಾ ವಿರುದ್ದದ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೆ ತಮ್ಮ ಡ್ಯಾನ್ಸ್ ಸ್ಕಿಲ್ ಪ್ರದರ್ಶಿಸಿದ್ದಾರೆ. 2ನೇ ಪಂದ್ಯದಲ್ಲಿ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದ ಕೊಹ್ಲಿ ಇದೀಗ ಶಾರುಖ್ ಖಾನ್ ಅಭಿನಯದ ಲುಂಗಿ ಡ್ಯಾನ್ಸ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದೀಗ ಕೊಹ್ಲಿ ವಿಡಿಯೋ ವೈರಲ್ ಆಗಿದೆ.
ಚೆನ್ನೈ(ಮಾ.22): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಹಲವು ವಿಶೇಷ ಕ್ಷಣಗಳಿಗೆ ಸಾಕ್ಷಿಯಾಗಿದೆ. ದ್ವಿತೀಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಸ್ಕರ್ ಪ್ರಶಸ್ತಿ ಗೆದ್ದ ಆರ್‌ಆರ್‌ಆರ್ ಚಿತ್ರದ ನಾಟು ನಾಟು ಹಾಡಿಗೆ ಮೈದಾನದಲ್ಲಿ ಹೆಜ್ಜೆ ಹಾಕಿ ಎಲ್ಲರ ಗಮನಸೆಳೆದಿದ್ದರು. ಇದೀಗ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶಾರುಖ್ ಖಾನ್ ಅಭಿನಯದ ಲುಂಗಿ ಡ್ಯಾನ್ಸ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಹಾಗೂ ಅಂತಿಮ ಪಂದ್ಯ ಚೆನ್ನೈನ ಚಿಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಕ್ರೀಡಾಂಗಣದಲ್ಲಿ ಶಾರುಖ್ ಖಾನ್ ಅಭಿನಯದ ಚೆನ್ನೈ ಎಕ್ಸ್‌ಪ್ರೆಸ್ ಸಿನಿಮಾದ ಲುಂಗಿ ಡ್ಯಾನ್ಸ್ ಹಾಡನ್ನು ಹಾಕಿದ್ದಾರೆ. ಈ ವೇಳೆ ಕೊಹ್ಲಿ ಲುಂಗಿ ಡ್ಯಾನ್ಸ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಟೀಂ ಇಂಡಿಯಾ ಕ್ರಿಕೆಟಿಗರು ಫೀಲ್ಡಿಂಗ್ ಮಾಡಲು ಅಖಾಡಕ್ಕೆ ಇಳಿದಾಗ ಲುಂಗಿ ಡ್ಯಾನ್ಸ್ ಹಾಡು ಹಾಕಲಾಗಿತ್ತು. ಈ ವೇಳೆ ಕೊಹ್ಲಿ ಲುಂಗಿ ಡ್ಯಾನ್ಸ್‌ಗೆ ಹೆಜ್ಜೆ ಹಾಕಿದ್ದಾರೆ. ಇತ್ತ ರವೀಂದ್ರ ಜಡೇಜಾ ಡ್ಯಾನ್ಸ್ ಮಾಡುವ ಪ್ರಯತ್ನ ಮಾಡಿದರು. ಆದರೆ ಕೊಹ್ಲಿ ಡ್ಯಾನ್ಸ್ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಸಿತು.
ಭಾರತ ಆಸ್ಟ್ರೇಲಿಯಾ ಏಕದಿನ ನಡುವೆ ಆಸ್ಕರ್ ಗೆದ್ದ RRR ನಾಟು ನಾಟು ಹಾಡಿಗೆ ಕೊಹ್ಲಿ ಡ್ಯಾನ್ಸ್!
ಒಂದೆರೆಡು ಸ್ಟೆಪ್ಸ್ ಹಾಕಿದ ಕೊಹ್ಲಿ ಬಳಿಕ ಆಟದಲ್ಲಿ ತಲ್ಲೀನರಾದರು. ಆದರೆ ಅಭಿಮಾನಿಗಳು ಮಾತ್ರ ಕೊಹ್ಲಿ ಡ್ಯಾನ್ಸ್ ಡ್ಯಾನ್ಸ್ ಎಂದು ಚೀರಾಡಲು ಆರಂಭಿಸಿದ್ದಾರೆ. ಇತ್ತ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಅಭಿಮಾನಿಗಗಳು ಕೂಡ ಲುಂಗಿ ಡ್ಯಾನ್ಸ್ ಮಾಡಿದ್ದಾರೆ. ಚೆನ್ನೈ ಕ್ರೀಡಾಂಗಣದಲ್ಲಿ ಕೊಹ್ಲಿ ಲುಂಗಿ ಡ್ಯಾನ್ಸ್ ಅಭಿಮಾನಿಗಳ ಎನರ್ಜಿಗೆ ಮತ್ತಷ್ಟು ಶಕ್ತಿ ನೀಡಿದೆ.
ದ್ವಿತೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್‌ಆರ್‌ಆರ್ ಚಿತ್ರದ ನಾಟು ನಾಟು ಹಾಡಿನ ಸಿಗ್ನೇಚರ್ ಸ್ಟೆಪ್ಸ್ ಹಾಕಿ ಎಲ್ಲರ ಗಮನಸೆಳೆದಿದ್ದರು. ಆಸ್ಕರ್ ಗೆದ್ದ ನಾಟು ನಾಟು ಹಾಡು ವಿಶ್ವದೆಲ್ಲೆಡೆ ಭಾರಿ ಸದ್ದು ಮಾಡಿತ್ತು. ಇತ್ತ ಫೀಲ್ಡಿಂಗ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ನಿಂತಲ್ಲೇ ಆರ್‌ಆರ್‌ಆರ್ ಚಿತ್ರದ ಸಿಗ್ನೇಚರ್ ಸ್ಟೆಪ್ಸ್ ಹಾಕಿ ಮಿಂಚಿದ್ದರು. ಈ ವಿಡಿಯೋ ವೈರಲ್ ಆಗಿತ್ತು.
ಸೋಲಿನಿಂದ ಆರಂಭಿಸಿ ಸೋಲಿನೊಂದಿಗೆ ಆರ್‌ಸಿಬಿ ಜರ್ನಿ ಅಂತ್ಯ, ಡುಪ್ಲೆಸಿಸ್ ತಂಡದತ್ತ ಎಲ್ಲರ ಚಿತ್ತ!
ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಇಂದಿನ ಪಂದ್ಯ ಅತ್ಯಂತ ಮುಖ್ಯವಾಗಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ದಾಖಲಿಸಿದ್ದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ದಾಖಲಿಸಿದೆ. ಹೀಗಾಗಿ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿದೆ. ಇದೀಗ ಇಂದಿನ ಪಂದ್ಯ ಗೆದ್ದ ತಂಡ ಸರಣಿ ಕೈವಶ ಮಾಡಲಿದೆ. ಹೀಗಾಗಿ ಗೆಲುವಿಗಾಗಿ ಉಭಯ ತಂಡಗಳು ಶತಾಯಗತಾಯ ಪ್ರಯತ್ನ ಮಾಡಲಿದೆ.