ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸೂರ್ಯಕುಮาร์ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿರುವ ಭಾರತ ತಂಡವು ಜಿತೇಶ್ ಶರ್ಮಾ, ಅರ್ಶದೀಪ್ ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ಕಣಕ್ಕಿಳಿಸಿ ಮೂರು ಬದಲಾವಣೆ ಮಾಡಿದೆ.
ಹೋಬಾರ್ಟ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಉಭಯ ತಂಡಗಳಲ್ಲೂ ಪ್ರಮುಖ ಬದಲಾವಣೆಗಳಾಗಿವೆ.
ಭಾರತ ತಂಡದಲ್ಲಿ ಮೂರು ಮೇಜರ್ ಚೇಂಜ್
ಹೌದು, ಎರಡನೇ ಟಿ20 ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಭಾರತ ತಂಡವು ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಹೌದು, ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಹರ್ಷಿತ್ ರಾಣಾ ಹಾಗೂ ಕುಲ್ದೀಪ್ ಯಾದವ್‌ಗೆ ವಿಶ್ರಾಂತಿ ನೀಡಲಾಗಿದ್ದು, ಜಿತೇಶ್ ಶರ್ಮಾ, ಅರ್ಶದೀಪ್ ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಆಸ್ಟ್ರೇಲಿಯಾ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಜೋಶ್ ಹೇಜಲ್‌ವುಡ್ ಬದಲಿಗೆ ಶಾನ್ ಅಬ್ಬಾಟ್ ತಂಡ ಕೂಡಿಕೊಂಡಿದ್ದಾರೆ
2ನೇ ಪಂದ್ಯದಲ್ಲಿ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡಿ ಸೋತಿದ್ದ ಭಾರತ ಸುಧಾರಿತ ಆಟವಾಡಲು ಎದುರು ನೋಡುತ್ತಿದೆ. ಮೊದಲ ಪಂದ್ಯ ಮಳೆಗೆ ಬಲಿಯಾಗಿತ್ತು. 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆಯಲ್ಲಿದ್ದು, ಈ ಪಂದ್ಯದಲ್ಲೂ ಜಯಿಸಿ ಸರಣಿ ಜಯದತ್ತ ಮತ್ತೊಂದು ಹೆಜ್ಜೆ ಮುಂದಿಡಲು ಕಾಯುತ್ತಿದೆ. ಆಸೀಸ್ ವೇಗಿ ಜೋಶ್ ಹೇಜಲ್‌ವುಡ್ ಮುಂದಿನ 3 ಪಂದ್ಯಗಳಿಗೂ ಅಲಭ್ಯರಾಗಿದ್ದು, ಭಾರತೀಯ ಬ್ಯಾಟರ್ ಗಳು ಕೊಂಚ ನಿರಾಳರಾಗಲಿದ್ದಾರೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ
ಭಾರತ: ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್(ನಾಯಕ), ಟ್ರ್ಯಾವಿಸ್ ಹೆಡ್, ಜೋಶ್ ಇಂಗ್ಲಿಶ್(ವಿಕೆಟ್ ಕೀಪರ್), ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ಶಾರ್ಟ್, ಶಾನ್ ಅಬಾಟ್, ಕ್ಸೇವಿಯರ್ ಬಾರ್ಟೆಲ್ಟ್, ನೇಥನ್ ಎಲ್ಲಿಸ್, ಮ್ಯಾಥ್ಯೂ ಕುನ್ಹೇಮನ್.
ಪಂದ್ಯ ಆರಂಭ: ಮಧ್ಯಾಹ್ನ 1.45ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್.
