ಬೆಂಗಳೂರು(ಫೆ.27): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ನಿರ್ಣಾಯಕ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ಸಮಬಲ ಮಾಡಿಕೊಳ್ಳಲು ಹವಣಿಸುತ್ತಿರುವ ಟೀಂ ಇಂಡಿಯಾ ತಂಡದಲ್ಲಿ3 ಪ್ರಮುಖ ಬದಲಾವಣೆ ಮಾಡಿದೆ.

ರೋಹಿತ್ ಶರ್ಮಾ, ಮಯಾಂಕ್ ಮಾರ್ಕಂಡೆ  ಹಾಗೂ ಉಮೇಶ್ ಯಾದವ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಬದಲು ಶಿಖರ್ ಧವನ್, ವಿಜಯ್ ಶಂಕರ್ ಹಾಗೂ ಸಿದ್ಧಾರ್ಥ್ ಕೌಲ್ ತಂಡ ಸೇರಿಕೊಂಡಿದ್ದಾರೆ. 
ಆಸಿಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ 2ನೇ ಪಂದ್ಯದಲ್ಲೂ ಆಡಲಿದೆ. 

ಭಾರತ ತಂಡ:
ವಿರಾಟ್ ಕೊಹ್ಲಿ(ನಾಯಕ),  ಶಿಖರ್ ಧವನ್, ಕೆ.ಎಲ್.ರಾಹುಲ್, ರಿಷಬ್ ಪಂತ್, ಎಂ.ಎಸ್.ಧೋನಿ, ದಿನೇಶ್ ಕಾರ್ತಿಕ್, ವಿಜಯ್ ಶಂಕರ್, ಕ್ರುನಾಲ್ ಪಾಂಡ್ಯ, ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಸಿದ್ಧಾರ್ಥ್ ಕೌಲ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮುಗ್ಗರಿಸಿತು.  ಗೆಲುವಿಗೆ 127 ರನ್ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ 7 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ವಿಶಾಖಪಟ್ಟಣಂ ಪಂದ್ಯದಲ್ಲಿ 3 ವಿಕೆಟ್ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.