Asianet Suvarna News Asianet Suvarna News

ಭಾರತ ಬಾಂಗ್ಲಾದೇಶ ಟೆಸ್ಟ್ ಸರಣಿ, ಇಂಜುರಿಯಿಂದ ತಂಡದಲ್ಲಿ ಮಹತ್ವದ ಬದಲಾವಣೆ!

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಡಿಸೆಂಬರ್ 14 ರಿಂದ ಆರಂಭಗೊಳ್ಳುತ್ತಿದೆ. ಆದರೆ ಇಂಜರಿ ಸಮಸ್ಯೆ ಟೀಂ ಇಂಡಿಯಾಗೆ ಮತ್ತೆ ಹಿನ್ನಡೆ ತಂಡಿದೆ. ಇದೀಗ ನಾಯಕ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ಇನ್ನೂ ಚೇತರಿಸಿಕೊಳ್ಳದ ಕಾರಣ ಮಹತ್ವದ ಬದಲಾವಣೆಯಾಗಲಿದೆ.

India vs Bangladesh Test Rohit sharma likely to miss KL Rahul may lead Team India Squad details ckm
Author
First Published Dec 11, 2022, 5:08 PM IST

ಢಾಕ(ಡಿ.11): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಏಕದಿನ ಸರಣಿ ಅಂತ್ಯಗೊಂಡಿದೆ. ಇದೀಗ 2 ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಈಗಾಗಲೇ ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ, ಟೆಸ್ಟ್ ಸರಣಿಯಲ್ಲಿ ತಿರುಗೇಟು ನೀಡಲು ಸಜ್ಜಾಗಿದೆ. ಆದರೆ ಈಗಾಗಲೇ ಇಂಜುರಿಗೆ ತುತ್ತಾಗಿರುವ ಆಟಗಾರರ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇದರ ಪರಿಣಾಮ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ. ಎರಡನೇ ಏಕದಿನ ಪಂದ್ಯದ ವೇಳೆ ಕೈಬೆರಳಿನ ಗಾಯಕ್ಕೆ ತುತ್ತಾದ ನಾಯಕ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಇದೆ. ಹೀಗಾದಲ್ಲಿ ಕೆಎಲ್ ರಾಹುಲ್ ಟೀಂ ಇಂಡಿಯಾ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ.

ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಎರಡೂ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ. ಎರಡೂ ಪಂದ್ಯದಲ್ಲಿ ಕೆಎಲ್ ರಾಹುಲ್ ತಂಡವನ್ನು ಮನ್ನಡೆಸುವ ಸಾಧ್ಯತೆ ಇದೆ. ನ್ಯೂಜಿಲೆಂಡ್ ಸರಣಿ ಬಳಿಕ ವಿಶ್ರಾಂತಿಗೆ ಜಾರಿದ್ದ ಶುಭಮನ್‌ ಗಿಲ್ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಆಗಮಿಸಲಿದ್ದಾರೆ. ಗಿಲ್ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

Ind vs Ban ಇಶಾನ್ ಕಿಶನ್ ಒಂದು ದ್ವಿಶತಕ: ಹಲವು ದಾಖಲೆಗಳು ನುಚ್ಚುನೂರು..!

2022ರಲ್ಲಿ ಚೇತೇಶ್ವರ ಪೂಜಾರ ಕೌಂಟಿ ಕ್ರಿಕೆಟ್ ಮೂಲಕ ಗಮನಸೆಳೆದಿದ್ದಾರೆ. ಪೂಜಾರ ಟೀಂ ಇಂಡಿಯಾ ಪ್ಲೇಯಿಂಗ್ 11ನಲ್ಲಿ ಕಾಣಿಸಿಕೊಳ್ಳವು ಸಾಧ್ಯತೆ ಹೆಚ್ಚಿದೆ. ಇನ್ನು ರವೀಂದ್ರ ಜಡೇಜಾ ಅಲಭ್ಯತೆಯಿಂದ ಈ ಸ್ಥಾನದಲ್ಲಿ ರವಿಂದ್ರನ್ ಅಶ್ವಿನ್ ಕಣಕ್ಕಿಳಿಯಲಿದ್ದಾರೆ. ಮಾರ್ಚ್ ತಿಂಗಳಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಆರ್ ಅಶ್ವಿನ್ ಟೆಸ್ಟ್ ಆಡಿಲ್ಲ. 

ಐಪಿಎಲ್ 2022ರಲ್ಲಿ ಉತ್ತಮ ಪ್ರದರ್ಶನ ನೀಡಿದ ವೇಗಿ ಉಮೇಶ್ ಯಾದವ್, ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ಪ್ರಮುಖ ವೇಗಿಯಾಗಿದ್ದಾರೆ.  ಏಕದಿನ ತಂಡದಲ್ಲಿದ್ದ ಹಲವರು ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ಹೊಸ ತಂಡ, ಕೆಲ ಬದಲಾವಣೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

ಇಂಜುರಿಯಾಗಿರುವ ಆಟಗಾರರು
ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ

Virat Kohli: 2019ರ ಬಳಿಕ ಮೊದಲ ಏಕದಿನ ಶತಕ ಸಿಡಿಸಿದ ಕಿಂಗ್ ಕೊಹ್ಲಿ..!

ಬಾಂಗ್ಲಾ ಟೆಸ್ಟ್‌: ವೇಗಿ ಶಮಿ ಬದಲು ಉನಾದ್ಕತ್‌ಗೆ ಸ್ಥಾನ
ಎಡಗೈ ವೇಗಿ ಜಯದೇವ್‌ ಉನಾದ್ಕತ್‌ ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್‌ ಸರಣಿಗೆ ಗಾಯಾಳು ವೇಗಿ ಮೊಹಮದ್‌ ಶಮಿ ಬದಲಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ರಣಜಿ ಟ್ರೋಫಿಯ ಗರಿಷ್ಠ ವಿಕೆಟ್‌ ಸರದಾರ ಎನಿಸಿದ್ದ ಉನಾದ್ಕತ್‌, ಇತ್ತೀಚೆಗೆ ಮುಕ್ತಾಯಗೊಂಡ ವಿಜಯ್‌ ಹಜಾರೆ ಟೂರ್ನಿಯಲ್ಲೂ ಅತಿಹೆಚ್ಚು ವಿಕೆಟ್‌ ಪಡೆದಿದ್ದರು. 2010ರಲ್ಲಿ ಉನಾದ್ಕತ್‌ ದ.ಆಫ್ರಿಕಾ ವಿರುದ್ಧ ಏಕೈಕ ಟೆಸ್ಟ್‌ ಆಡಿದ್ದರು. ಭಾರತ ಪರ 7 ಏಕದಿನ, 10 ಟಿ20 ಪಂದ್ಯಗಳನ್ನು ಸಹ ಅವರು ಆಡಿದ್ದಾರೆ.

ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಆಶ್ವಿನ್, ಅಕ್ಸರ್ ಪಟೇಲ್,  ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಯದೇವ್‌ ಉನಾದ್ಕತ್‌, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ 

Follow Us:
Download App:
  • android
  • ios