ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ  ಇಂಗ್ಲೆಂಡ್ ಮೊದಲು ಬೌಲಿಂಗ್‌ ಆಯ್ದುಕೊಂಡಿದೆ. ಉಭಯ ತಂಡಗಳು ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿದಿವೆ.

ಪುಣೆ(ಮಾ.23): ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ

3 ಪಂದ್ಯಗಳ ಏಕದಿನ ಸರಣಿಗೆ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್‌ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ಭಾರತ ತಂಡಕ್ಕೆ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಕೃನಾಲ್‌ ಪಾಂಡ್ಯ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಇಂಗ್ಲೆಂಡ್ ಪರ ಸ್ಯಾಮ್‌ ಬಿಲ್ಲಿಂಗ್ಸ್‌, ಟಾಮ್ ಕರ್ರನ್‌ ಹಾಗೂ ಮೋಯಿನ್ ಅಲಿ ತಂಡ ಕೂಡಿಕೊಂಡಿದ್ದಾರೆ.

Scroll to load tweet…
Scroll to load tweet…

2019ರ ಏಕದಿನ ವಿಶ್ವಕಪ್‌ ಫೈನಲ್‌ನ ಲೀಗ್‌ ಹಂತದ ಪಂದ್ಯದ ಬಳಿಕ ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಹಾಲಿ ವಿಶ್ವಕಪ್‌ ಚಾಂಪಿಯನ್‌ ಇಂಗ್ಲೆಂಡ್‌ ತಂಡಕ್ಕೆ ಪ್ರಬಲ ಪೈಪೋಟಿ ಎದುರಾಗುವ ಸಾಧ್ಯತೆಯಿದೆ. ಇನ್ನೊಂದು ಕಡೆ ಟೆಸ್ಟ್ ಹಾಗೂ ಟಿ20 ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ ಏಕದಿನ ಸರಣಿಯಲ್ಲೂ ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ.

ತಂಡಗಳು ಹೀಗಿವೆ:

ಭಾರತ:

Scroll to load tweet…

ಇಂಗ್ಲೆಂಡ್‌:

Scroll to load tweet…