* ಎರಡನೇ ದಿನದಾಟದಲ್ಲಿ ದಿಢೀರ್ ಕುಸಿತ ಕಂಡ ಟೀಂ ಇಂಡಿಯಾ* ಲಂಚ್ ಬ್ರೇಕ್ ವೇಳೆಗೆ 7 ವಿಕೆಟ್ ಕಳೆದುಕೊಂಡು 346 ರನ್‌ ಬಾರಿಸಿದೆ.* ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡು 276 ರನ್‌ ಬಾರಿಸಿದ್ದ ಟೀಂ ಇಂಡಿಯಾ

ಲಾರ್ಡ್ಸ್‌(ಆ.13): ವೇಗಿ ಜೇಮ್ಸ್ ಆ್ಯಂಡರ್‌ಸನ್‌ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಎರಡನೆ ದಿನದಾಟದ ಮೊದಲ ಸೆಷನ್‌ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 346 ರನ್‌ ಬಾರಿಸಿದೆ. ಜಡೇಜಾ 31 ರನ್ ಬಾರಿಸಿ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡು 276 ರನ್‌ ಬಾರಿಸಿದ್ದ ಟೀಂ ಇಂಡಿಯಾ, ಮೂರನೇ ದಿನದಾಟದ ಆರಂಭದಲ್ಲೇ ತನ್ನ ಖಾತೆಗೆ 2 ರನ್‌ ಸೇರಿಸುವಷ್ಟರಲ್ಲೇ ಶತಕ ಬಾರಿಸಿದ್ದ ಕೆ.ಎಲ್. ರಾಹುಲ್‌(129) ವಿಕೆಟ್ ಕಳೆದುಕೊಂಡಿತು. ಇದರ ಬೆನ್ನಲ್ಲೇ ಉಪನಾಯಕ ಅಜಿಂಕ್ಯ ರಹಾನೆ 1 ಒಂದು ರನ್‌ ಬಾರಿಸಿ ಆ್ಯಂಡರ್‌ಸನ್‌ಗೆ ವಿಕೆಟ್‌ ಒಪ್ಪಿಸಿದರು.

Scroll to load tweet…

ಲಾರ್ಡ್ಸ್ ಮೈದಾನದಲ್ಲಿ ಕೆಎಲ್ ರಾಹುಲ್ ಆಕರ್ಷಕ ಶತಕ, ಬೃಹತ್ ಮೊತ್ತದತ್ತ ಟೀಂ ಇಂಡಿಯಾ!

ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌(37) ಹಾಗೂ ರವೀಂದ್ರ ಜಡೇಜಾ(31*) ರನ್‌ ಬಾರಿಸುವ ಮೂಲಕ ತಂಡದ ಮೊತ್ತವನ್ನು 340ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಲಂಚ್ ಬ್ರೇಕ್‌ ವೇಳೆಗೆ ಭಾರತ 7 ವಿಕೆಟ್‌ ಕಳೆದುಕೊಂಡು 346 ರನ್‌ ಬಾರಿಸಿದೆ. ಜಡೇಜಾ ಹಾಗೂ ಇಶಾಂತ್ ಶರ್ಮಾ ಕ್ರೀಸ್‌ ಕಾಯ್ದುಕೊಂಡಿದ್ದಾರೆ.