ಅಹಮದಾಬಾದ್‌(ಮಾ.20): ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 5ನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ನಾಯಕ ಇಯಾನ್‌ ಮಾರ್ಗನ್‌ ಬೌಲಿಂಗ್‌ ಆಯ್ದುಕೊಂಡಿದ್ದಾರೆ.  

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಕೊನೆಯ ಪಂದ್ಯ ಉಭಯ ತಂಡಗಳ ನಡುವಿನ ಫೈನಲ್‌ ಫೈಟ್‌ ಎನಿಸಿದೆ. ಈಗಾಗಲೇ ಭಾರತ ಹಾಗೂ ಪ್ರವಾಸಿ ಇಂಗ್ಲೆಂಡ್ ತಂಡಗಳು ತಲಾ 2 ಪಂದ್ಯಗಳನ್ನು ಜಯಿಸಿದ್ದು ನಿರ್ಣಾಯಕ ಪಂದ್ಯದಲ್ಲಿ ಟ್ರೋಫಿ ಗೆಲ್ಲಲು ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ.

ಇಂಗ್ಲೆಂಡ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕೆ.ಎಲ್‌ ರಾಹುಲ್‌ ಬದಲಿಗೆ ಟಿ. ನಟರಾಜನ್‌ ತಂಡ ಕೂಡಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಜತೆ ಇನಿಂಗ್ಸ್‌ ಆರಂಭಿಸಲಿದ್ದಾರೆ

ಇಂಗ್ಲೆಂಡ್ ಮೊದಲ ಟಿ20 ಪಂದ್ಯವನ್ನು 8 ವಿಕೆಟ್‌ಗಳಿಂದ ಜಯಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಎರಡನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸಮಬಲ ಸಾಧಿಸಿತ್ತು. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಮತ್ತೊಮ್ಮೆ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಮತ್ತೊಮ್ಮೆ ಮುನ್ನಡೆ ಸಾಧಿಸಿತ್ತು. ಆದರೆ 4ನೇ ಟಿ20 ಪಂದ್ಯದಲ್ಲಿ ಭಾರತ 8 ರನ್‌ಗಳ ಜಯ ಸಾಧಿಸುವ ಮೂಲಕ ಸರಣಿ ಗೆಲ್ಲುವ ಆಸೆ ಜೀವಂತವಾಗಿರಿಸಿಕೊಂಡಿದೆ.

ತಂಡಗಳು ಹೀಗಿವೆ

ಭಾರತ:

ಇಂಗ್ಲೆಂಡ್‌