ಭಾರತ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಚೆನ್ನೈ(ಫೆ.05): ಭಾರತ-ಇಂಗ್ಲೆಂಡ್‌ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಮೇಲ್ನೋಟಕ್ಕೆ ಎರಡು ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು, ಇಲ್ಲಿನ ಎಂ. ಎ. ಚಿದಂಬರಂ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದೆ. ಎರಡು ತಂಡಗಳು ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿವೆ. ಭಾರತ ತಂಡದ ಪರ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ ಹಾಗೂ ಶಹಬಾಜ್ ನದೀಮ್‌ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ಚೆನ್ನೈ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ; ಸ್ಟಾರ್ ಆಲ್ರೌಂಡರ್‌ ಔಟ್‌..!

ಇನ್ನು ಶ್ರೀಲಂಕಾ ವಿರುದ್ದ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿ ಬೀಗುತ್ತಿರುವ ಇಂಗ್ಲೆಂಡ್‌ ತಂಡಕ್ಕೆ ಬೆನ್ ಸ್ಟೋಕ್ಸ್‌, ರೋರಿ ಬರ್ನ್ಸ್‌ ಹಾಗೂ ಜೋಫ್ರಾ ಆರ್ಚರ್‌ ಆಗಮನ ತಂಡದ ಬಲ ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ತಂಡಗಳು ಹೀಗಿವೆ:
ಭಾರತ:

Scroll to load tweet…

ಇಂಗ್ಲೆಂಡ್:

Scroll to load tweet…