* ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಆರಂಭ* ಈಗಾಗಲೇ ಮೊದಲ ಪಂದ್ಯ ಗೆದ್ದು ಬೀಗುತ್ತಿರುವ ರೋಹಿತ್ ಶರ್ಮಾ ಪಡೆ* ಎರಡನೇ ಏಕದಿನ ಪಂದ್ಯದಲ್ಲಿ ತಂಡ ಕೂಡಿಕೊಂಡ ವಿರಾಟ್ ಕೊಹ್ಲಿ
ಲಂಡನ್(ಜು.14): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ನಿರೀಕ್ಷೆಯಂತೆಯೇ ವಿರಾಟ್ ಕೊಹ್ಲಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಕ್ರಿಕೆಟ್ ಕಾಶಿ ಎನಿಸಿಕೊಂಡಿರುವ ಲಾರ್ಡ್ಸ್ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗುತ್ತಿದೆ. ತೊಡೆಸಂದಿನ ಗಾಯಕ್ಕೊಳಗಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ, ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ಎರಡನೇ ಪಂದ್ಯಕ್ಕೆ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದು, ಕೊಹ್ಲಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರೇ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ.
2020ರ ಬಳಿಕ ಇದೇ ಮೊದಲ ಬಾರಿಗೆ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುತ್ತಿದ್ದು, ಇಂಗ್ಲೆಂಡ್ ಎದುರು ಎರಡನೇ ಪಂದ್ಯ ಗೆದ್ದು, ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಭಾರತದ ಕನಸಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲೂ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡು ಯಶಸ್ವಿಯಾಗಿದ್ದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಪ್ರಸಿದ್ಧ್ ಕೃಷ್ಣ ಮಾರಕ ದಾಳಿಗೆ ತತ್ತರಿಸಿ ಕೇವಲ 110 ರನ್‌ಗಳಿಗೆ ಸರ್ವಪತನ ಕಂಡಿತ್ತು. ಜಸ್ಪ್ರೀತ್ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಕಬಳಿಸಿದ್ದರೇ, ಮೊಹಮ್ಮದ್ ಶಮಿ 3 ಹಾಗೂ ಪ್ರಸಿದ್ಧ್ ಕೃಷ್ಣ ಒಂದು ವಿಕೆಟ್ ಪಡೆದಿದ್ದರು. ಇನ್ನು ಈ ಸಾಧಾರಣ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ, ಯಾವುದೇ ವಿಕೆಟ್ ಕಳೆದುಕೊಳ್ಳದೇ ಸುಲಭ ಗೆಲುವು ದಾಖಲಿಸಿತ್ತು.
ಇಂಗ್ಲೆಂಡ್ ಎದುರಿನ 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಮಹತ್ತರ ಬದಲಾವಣೆ?
ತಂಡಗಳು ಹೀಗಿವೆ ನೋಡಿ
ಭಾರತ: ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಯುಜುವೇಂದ್ರ ಚಹಲ್.
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೇರ್‌ಸ್ಟೋವ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೋಯಿನ್ ಅಲಿ, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸ್, ಕ್ರೇಗ್ ಓವರ್‌ಟನ್, ರೀಸ್ ಟಾಪ್ಲಿ.
ಸ್ಥಳ: ಲಾರ್ಡ್ಸ್ ಕ್ರೀಡಾಂಗಣ, ಲಂಡನ್
ಸಮಯ: ಸಂಜೆ 5.30ಕ್ಕೆ
ನೇರ ಪ್ರಸಾರ: ಸೋನಿ ಸಿಕ್ಸ್
ಪಿಚ್ ರಿಪೋರ್ಚ್
ಲಾಡ್‌್ಸ ಪಿಚ್‌ನಲ್ಲಿ ರನ್ ಹೊಳೆ ಹರಿದ ಉದಾಹರಣೆಗಳು ಕಡಿಮೆ. ಇಲ್ಲಿ ಮೊದಲ ಇನ್ನಿಂಗ್‌್ಸನ ಸರಾಸರಿ ಮೊತ್ತ 238, 2ನೇ ಇನ್ನಿಂಗ್‌್ಸನ ಸರಾಸರಿ ಮೊತ್ತ 213 ರನ್. ಪಂದ್ಯದ ಆರಂಭದ ಸಮಯದಲ್ಲಿ ಮೋಡ ಕವಿದ ವಾತಾವರಣವಿರುವ ಸಾಧ್ಯತೆ ಇದ್ದು, ಸ್ವಿಂಗ್ ಬೌಲಿಂಗ್‌ಗೆ ಹೆಚ್ಚು ನೆರವು ಸಿಗುವ ನಿರೀಕ್ಷೆ ಇದೆ.
