ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿರುವ ಭಾರತ ಕ್ರಿಕೆಟ್ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯ ಜೂನ್ 20 ರಂದು ಆರಂಭವಾಗಲಿದ್ದು, ತಂಡದಲ್ಲಿ ಸಾಯಿ ಸುದರ್ಶನ್ ಸ್ಥಾನ ಪಡೆದಿದ್ದಾರೆ.

ಹೆಡಿಂಗ್ಲೆ: ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದು 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯ ಜೂನ್ 20 ರಂದು ಆರಂಭವಾಗಲಿದೆ. ಈ ಟೆಸ್ಟ್ ಸರಣಿಯಲ್ಲಿ ಆಡುವ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಇಂಗ್ಲೆಂಡ್ ಟೆಸ್ಟ್ ಸರಣಿಗೆ ಶುಭ್‌ಮನ್ ಗಿಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ಉಪನಾಯಕರಾಗಿ ವಿಕೆಟ್ ಕೀಪರ್ ರಿಷಭ್ ಪಂತ್ ಅವರಿಗೆ ಪಟ್ಟ ಕಟ್ಟಲಾಗಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ

ಐಪಿಎಲ್‌ನಲ್ಲಿ ಅಬ್ಬರಿಸಿರುವ ತಮಿಳುನಾಡು ಆಟಗಾರ ಸಾಯಿ ಸುದರ್ಶನ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಬ್ಬ ತಮಿಳುನಾಡು ಆಟಗಾರ ವಾಷಿಂಗ್ಟನ್ ಸುಂದರ್ ಕೂಡ ಟೆಸ್ಟ್ ತಂಡದಲ್ಲಿದ್ದಾರೆ. ದೇಶೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಕರುಣ್ ನಾಯರ್ ಸುಮಾರು 9 ವರ್ಷಗಳ ನಂತರ ಭಾರತ ತಂಡಕ್ಕೆ ಮರಳಿದ್ದಾರೆ. ಶಾರ್ದೂಲ್ ಠಾಕೂರ್‌ಗೂ ಮತ್ತೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿದೆ.

ಮೊದಲ ಟೆಸ್ಟ್‌ನಲ್ಲಿ ಭಾರತದ ಆಡುವ ಹನ್ನೊಂದು

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಪಂದ್ಯ ಹೆಡಿಂಗ್ಲೆ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದ್ದು, ಮೊದಲ ಟೆಸ್ಟ್‌ನಲ್ಲಿ ಭಾರತದ ಆಡುವ ಹನ್ನೊಂದರ ಬಗ್ಗೆ ಮಾಹಿತಿ ಹೊರಬಿದ್ದಿದೆ. ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್.ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ನಂತರ ದೇಶಿ ಕ್ರಿಕೆಟ್‌ನಲ್ಲಿ ರನ್ ರಾಶಿಯನ್ನೇ ಗುಡ್ಡೆಹಾಕಿರುವ ಕರುಣ್ ನಾಯರ್ ಅವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಕರುಣ್ ನಾಯರ್, ಇಂಗ್ಲೆಂಡ್ ವಿರುದ್ದವೇ ತ್ರಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಸಾಯಿ ಸುದರ್ಶನ್‌ಗೆ ಆಡುವ ಹನ್ನೊಂದರಲ್ಲಿ ಸ್ಥಾನ

ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್‌ಮನ್‌ ಗಿಲ್ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ತಮಿಳುನಾಡು ಆಟಗಾರ ಸಾಯಿ ಸುದರ್ಶನ್ ಬ್ಯಾಟಿಂಗ್‌ಗೆ ಬರಬಹುದು. ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ. ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಮತ್ತು ಶಾರ್ದೂಲ್ ಠಾಕೂರ್ ಎಂಟನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಒಂಬತ್ತನೇ ಕ್ರಮಾಂಕದಲ್ಲಿ ಜಸ್ಪ್ರೀತ್ ಬುಮ್ರಾ, ಹತ್ತನೇ ಕ್ರಮಾಂಕದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಹನ್ನೊಂದನೇ ಕ್ರಮಾಂಕದಲ್ಲಿ ಪ್ರಸಿದ್ಧ್ ಕೃಷ್ಣ ಕಣಕ್ಕಿಳಿಯಲಿದ್ದಾರೆ.

ವಾಷಿಂಗ್ಟನ್ ಸುಂದರ್‌ಗಿಲ್ಲ ಸ್ಥಾನ!

ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ 6 ಬ್ಯಾಟ್ಸ್‌ಮನ್‌ಗಳು, 2 ಆಲ್ರೌಂಡರ್‌ಗಳು ಮತ್ತು 3 ವೇಗದ ಬೌಲರ್‌ಗಳೊಂದಿಗೆ ಆಡುವ ಸಾಧ್ಯತೆ ದಟ್ಟವಾಗಿದೆ. ರವೀಂದ್ರ ಜಡೇಜಾ ಸ್ಪಿನ್ನರ್ ಆಗಿ ಮತ್ತು ಶಾರ್ದೂಲ್ ಠಾಕೂರ್ ಮಧ್ಯಮ ವೇಗದ ಬೌಲರ್ ಆಗಿ ಆಡಲಿದ್ದಾರೆ. ಮತ್ತೊಬ್ಬ ತಮಿಳುನಾಡು ಆಟಗಾರ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ. ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್‌ಗೂ ಅವಕಾಶ ಸಿಗುವ ಸಾಧ್ಯತೆ ಕಡಿಮೆ.

ಭಾರತ ತಂಡದ ಆಡುವ ಹನ್ನೊಂದು

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತದ ಆಡುವ ಹನ್ನೊಂದು: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಕರುಣ್ ನಾಯರ್, ಶುಭ್‌ಮನ್ ಗಿಲ್, ಸಾಯಿ ಸುದರ್ಶನ್, ರಿಷಭ್ ಪಂತ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ.

ಭಾರತ ತಂಡದ ಸಂಪೂರ್ಣ ಪಟ್ಟಿ:

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡದ ಸಂಪೂರ್ಣ ಪಟ್ಟಿ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್.