ಟಿ20 ವಿಶ್ವಕಪ್‌ನ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗಿದ್ದು, ಸಂಜು ಸ್ಯಾಮ್ಸನ್‌ ಮತ್ತು ಜಸ್ಪ್ರೀತ್ ಬುಮ್ರಾ ಆಡುವ ಹನ್ನೊಂದರ ಬಳಗಕ್ಕೆ ಮರಳಿದ್ದಾರೆ.

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಹಾಲಿ ಚಾಂಪಿಯನ್ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಮೀಬಿಯಾ ತಂಡದ ನಾಯಕ ಗೆರಾಲ್ಡ್ ಎರಾಸ್‌ಮಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಭಾರತ ಹಾಗೂ ನಮೀಬಿಯಾ ನಡುವಿನ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಭಾರತ ತಂಡವು ತಾನಾಡಿದ ಮೊದಲ ಪಂದ್ಯದಲ್ಲಿ ಯುಎಸ್‌ಎ ಎದುರು 29 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ನಮೀಬಿಯಾ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.

ಭಾರತ ತಂಡದಲ್ಲಿ ಮೇಜರ್ ಚೇಂಜ್:

ಇನ್ನು ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಕಳೆದ ಪಂದ್ಯಕ್ಕೆ ಹೋಲಿಸಿದರೆ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಅಭಿಷೇಕ್ ಶರ್ಮಾ ಸಂಪೂರ್ಣ ಫಿಟ್ ಆಗಿರದ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಸಂಜು ಸ್ಯಾಮ್ಸನ್‌ ಆರಂಭಿಕನಾಗಿ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿರುವುದರಿಂದ ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಸಿರಾಜ್, ಯುಎಸ್‌ಎ ಎದುರು 3 ವಿಕೆಟ್ ಕಬಳಿಸಿದ್ದರು. ಹೀಗಿದ್ದೂ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:

ಭಾರತ:

ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ. ಸೂರ್ಯಕುಮಾರ್ ಯಾದವ್(ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ. ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ನಮೀಬಿಯಾ:

ಲೌರೆನ್ ಸ್ಟೀನ್‌ಕಾಪ್, ಜಾನ್ ಫ್ರೈಲಿಂಕ್, ಜಾನ್ ನಿಕೊಲ್ ಲೋಫ್ಟಿ ಈಟನ್, ಗೆರಾಲ್ಡ್ ಎರಾಸ್ಮಸ್(ನಾಯಕ), ಜೆಜೆ ಸ್ಮಿತ್, ಜೇನ್ ಗ್ರೀನ್(ವಿಕೆಟ್ ಕೀಪರ್), ರೂಬಿನ್ ಟ್ರಂಪ್ಲನ್‌, ಮಲಾನ್ ಕ್ರುಗರ್, ಬೆರ್ನಾಲ್ಡ್ ಸೋಲ್ಜ್, ಬೆನ್ ಶಿಕಾಂಗೊ, ಮ್ಯಾಕ್ಸ್ ಹೆಯಿಂಗೊ