Asianet Suvarna News Asianet Suvarna News

ವಿರಾಟ್ ಕೊಹ್ಲಿ ಏಷ್ಯಾಕಪ್ ದಾಖಲೆ ಮುರಿದ ಕ್ಯಾಪ್ಟನ್ ರೋಹಿತ್ ಶರ್ಮಾ..!

ಪಾಕಿಸ್ತಾನ ಎದುರು ಅಲ್ಫ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದ ನಾಯಕ ರೋಹಿತ್ ಶರ್ಮಾ, ಇದೀಗ ಕೊನೆಗೂ ದೊಡ್ಡ ಇನಿಂಗ್ಸ್ ಆಡುವಲ್ಲಿ ಯಶಸ್ವಿಯಾದರು. ಕೇವಲ 39 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವುದರ ಜತೆಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಹಿಟ್‌ಮ್ಯಾನ್ ಯಶಸ್ವಿಯಾದರು. 

India vs Nepal Team India Capatin Rohit Sharma breaks Virat Kohli Asia Cup record kvn
Author
First Published Sep 5, 2023, 1:17 PM IST

ಪಲ್ಲೆಕೆಲೆ(ಸೆ.05): ಭಾರತ ಕ್ರಿಕೆಟ್ ತಂಡದ ನಾಯಕ ಏಷ್ಯಾಕಪ್ ಟೂರ್ನಿಯಲ್ಲಿ ನೇಪಾಳ ಎದುರು ಕೇವಲ 39 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ. ಭಾರತ ಹಾಗೂ ನೇಪಾಳ ನಡುವಿನ ಪಂದ್ಯಕ್ಕೆ ಪದೇ ಪದೇ ಮಳೆ ಅಡ್ಡಿಯಾಗಿದ್ದರಿಂದ 23 ಓವರ್‌ಗಳಲ್ಲಿ ಭಾರತಕ್ಕೆ 145 ರನ್ ಗುರಿ ನೀಡಲಾಗಿತ್ತು. ಈ ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಇನ್ನೂ 17 ಎಸೆತ ಬಾಕಿ ಇರುವಂತೆಯೇ 10 ವಿಕೆಟ್ ಸುಲಭ ಜಯ ದಾಖಲಿಸಿತು. 

ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು 48.2 ಓವರ್‌ಗಳಲ್ಲಿ 230 ರನ್ ಗಳಿಸಿ ಸರ್ವಪತನ ಕಂಡಿತು. ಈ ಸುಲಭ ಗುರಿ ಬೆನ್ನತ್ತಿದ ಭಾರತಕ್ಕೆ ಮಳೆರಾಯ ಅಡ್ಡಿಪಡಿಸಿದ. ಹೀಗಾಗಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಟೀಂ ಇಂಡಿಯಾಗೆ 23 ಓವರ್‌ಗಳಲ್ಲಿ 145 ರನ್ ಗುರಿ ನೀಡಲಾಯಿತು. ಮೊದಲಿಗೆ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಹಿಟ್‌ಮ್ಯಾನ್‌, ಆ ಬಳಿಕ ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿಬಿಟ್ಟು ಬ್ಯಾಟ್ ಬೀಸುವ ಮೂಲಕ ಲಯಕ್ಕೆ ಮರಳುವಲ್ಲಿ ಯಶಸ್ವಿಯಾದರು. 

ಪಾಕಿಸ್ತಾನ ಎದುರು ಅಲ್ಫ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದ ನಾಯಕ ರೋಹಿತ್ ಶರ್ಮಾ, ಇದೀಗ ಕೊನೆಗೂ ದೊಡ್ಡ ಇನಿಂಗ್ಸ್ ಆಡುವಲ್ಲಿ ಯಶಸ್ವಿಯಾದರು. ಕೇವಲ 39 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವುದರ ಜತೆಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಹಿಟ್‌ಮ್ಯಾನ್ ಯಶಸ್ವಿಯಾದರು. 

ಹೌದು, ಏಷ್ಯಾಕಪ್ ಕ್ರಿಕೆಟ್‌ ಇತಿಹಾಸದಲ್ಲಿ ರೋಹಿತ್ ಶರ್ಮಾ, ಇದೀಗ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಕುಮಾರ ಸಂಗಕ್ಕರ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಏಷ್ಯಾಕಪ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೀಲಂಕಾದ ಕ್ರಿಕೆಟ್ ದಂತಕಥೆ ಸನತ್ ಜಯಸೂರ್ಯ ಮಾತ್ರ ರೋಹಿತ್ ಶರ್ಮಾ ಅವರಿಗಿಂತ ಹೆಚ್ಚು ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. 

ಏಷ್ಯಾಕಪ್ ಇತಿಹಾಸದಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 5 ಬ್ಯಾಟರ್‌ಗಳಿವರು:

1. ಸನತ್ ಜಯಸೂರ್ಯ: 1220 ರನ್‌ -25 ಪಂದ್ಯಗಳು
2. ರೋಹಿತ್ ಶರ್ಮಾ: 1080* ರನ್ - 33 ಪಂದ್ಯಗಳು
3. ಕುಮಾರ ಸಂಗಕ್ಕರ: 1075 ರನ್ - 24 ಪಂದ್ಯಗಳು
4. ವಿರಾಟ್ ಕೊಹ್ಲಿ: 1046* ರನ್ - 23 ಪಂದ್ಯಗಳು
5. ಸಚಿನ್ ತೆಂಡುಲ್ಕರ್: 971 ರನ್ - 23 ಪಂದ್ಯಗಳು

Follow Us:
Download App:
  • android
  • ios