ಆಕ್ಲೆಂಡ್(ಜ.24): ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಐದು ಪಂದ್ಯಗಳ ಸರಣಿ ಇದಾಗಿದ್ದು, ಉಭಯ ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿವೆ.

ಇಲ್ಲಿನ ಈಡನ್ ಪಾರ್ಕ್ ಮೈದಾನ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು, ಬೃಹತ್ ಮೊತ್ತ ದಾಖಲಾಗುವ ಸಾಧ್ಯತೆಯಿದೆ. ನಿರೀಕ್ಷೆಯಂತೆಯೇ ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಪಾತ್ರವನ್ನು ನಿಭಾಯಿಸಲಿದ್ದಾರೆ. ಇನ್ನುಳಿದಂತೆ ಶಿವಂ ದುಬೆ ಹಾಗೂ ಶಾರ್ದೂಲ್ ಠಾಕೂರ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಮನೀಶ್ ಪಾಂಡೆ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

3 ಬದಲಾವಣೆ: ಪ್ರಮುಖವಾಗಿ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಆಲ್ರೌಂಡರ್ ಶಿವಂ ದುಬೆ, ವೇಗಿ ಶಾರ್ದೂಲ್ ಠಾಕೂರ್ ಹಾಗೂ ಮಣಿಕಟ್ಟು ಸ್ಪಿನ್ನರ್ ಯುಜುವೇಂದ್ರ ಚಹಲ್ ತಂಡ ಕೂಡಿಕೊಂಡಿದ್ದಾರೆ. ನವದೀಪ್ ಸೈನಿ, ಕುಲ್ದೀಪ್ ಯಾದವ್‌ಗೆ ವಿಶ್ರಾಂತಿ ನೀಡಲಾಗಿದೆ

ಪದಾರ್ಪಣೆ ಮಾಡಿದ ಹ್ಯಾಮಿಸ್ ಬೆನ್ನೆಟ್
 ನ್ಯೂಜಿಲೆಂಡ್ ಎಡಗೈ ವೇಗಿ ಹ್ಯಾಮಿಸ್ ಬೆನ್ನೆಟ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಈಗಾಗಲೇ ಕಿವೀಸ್ ಪರ ಒಂದು ಟೆಸ್ಟ್ ಹಾಗೂ ಹದಿನಾರು ಏಕದಿನ ಪಂದ್ಯಗಳನ್ನಾಡಿರುವ ಬೆನ್ನೆಟ್, ಇದೀಗ ಚುಟುಕು ಕ್ರಿಕೆಟ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

ತಂಡಗಳು ಹೀಗಿವೆ:

ಭಾರತ

ನ್ಯೂಜಿಲೆಂಡ್: