ಕಿವೀಸ್ ಎದುರಿನ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಇಶಾಂತ್ ಶರ್ಮಾ..!

ಕಿವೀಸ್ ವಿರುದ್ಧದ 2 ಟೆಸ್ಟ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಅತಿದೊಡ್ಡ ಆಘಾತವೊಂದು ಎದುರಾಗಿದ್ದಿದ್ದು, ಪ್ರಮುಖ ವೇಗಿ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

India vs New Zealand 2nd Test ankle injury Ishant Sharma ruled out of Christchurch Test

ಕ್ರೈಸ್ಟ್‌ಚರ್ಚ್(ಫೆ.28):  ನ್ಯೂಜಿಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತು ಮುಖಭಂಗ ಅನುಭವಿಸಿರುವ ವಿರಾಟ್ ಪಡೆಗೆ ಮತ್ತೊಂದು ಆಘಾತ ಎದುರಾಗಿದೆ. ಬಲಗಾಲಿನ ಗಾಯಕ್ಕೆ ತುತ್ತಾಗಿರುವ ಟೀಂ ಇಂಡಿಯಾ ಪ್ರಮುಖ ವೇಗಿ ಇಶಾಂತ್ ಶರ್ಮಾ ಕಿವೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರ ಬಿದ್ದಿದ್ದಾರೆ.  

India vs New Zealand 2nd Test ankle injury Ishant Sharma ruled out of Christchurch Test

24ಗಂಟೆ ಪ್ರಯಾಣ, ನಿದ್ದೆ ಇಲ್ಲ; ತಂಡಕ್ಕಾಗಿ ಕಣಕ್ಕಿಳಿದ ಇಶಾಂತ್!

ಕಿವೀಸ್ ಎದುರು ಪ್ರಮುಖ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಹಾಗೆಯೇ ಮೊಹಮ್ಮದ್ ಶಮಿ ವಿಕೆಟ್ ಪಡೆಯಲು ಪರದಾಡುತ್ತಿದ್ದರೆ, ಇಶಾಂತ್ ಶರ್ಮಾ 5 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಇಶಾಂತ್ ಶರ್ಮಾ ಟೀಂ ಇಂಡಿಯಾದಿಂದ ಹೊರಬಿದ್ದಿದ್ದು, ವಿರಾಟ್ ಪಡೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದೀಗ ಇಶಾಂತ್ ಶರ್ಮಾ ಬದಲಿಗೆ ಉಮೇಶ್ ಯಾದವ್ ತಂಡ ಕೂಡಿಕೊಂಡಿದ್ದಾರೆ.

India vs New Zealand 2nd Test ankle injury Ishant Sharma ruled out of Christchurch Test

ಉಮೇಶ್ ಯಾದವ್ ಇತ್ತೀಚೆಗೆ ತವರಿನಲ್ಲಿ ಅಮೋಘ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದರು. ಆದರೆ ತವರಿನಾಚೆ ಟೆಸ್ಟ್ ಕ್ರಿಕೆಟ್‌ನಲ್ಲಿ ಉಮೇಶ್ ಯಾದವ್ 2018ರಲ್ಲಿ ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. 

ಟೀಂ ಇಂಡಿಯಾಗೆ 10 ವಿಕೆಟ್‌ಗಳ ಹೀನಾಯ ಸೋಲು, ಕಿವೀಸ್‌ಗೆ 100ನೇ ಐತಿಹಾಸಿಕ ಟೆಸ್ಟ್ ಗೆಲುವು

ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಫೆಬ್ರವರಿ 29ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಆರಂಭವಾಗಲಿದೆ. ಟೆಸ್ಟ್ ಸರಣಿಯನ್ನು ಸಮಬಲ ಮಾಡಿಕೊಳ್ಳಬೇಕಿದ್ದರೆ ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳಿಂದ ನ್ಯೂಜಿಲೆಂಡ್‌ಗೆ ಶರಣಾಗಿತ್ತು. 
ಫೆಬ್ರವರಿ 28ರ ಟಾಪ್ 10 ಸುದ್ದಿಗಾಗಿ  ಇಲ್ಲಿ ಕ್ಲಿಕ್ ಮಾಡಿ: 

Latest Videos
Follow Us:
Download App:
  • android
  • ios