2ನೇ ಟೆಸ್ಟ್: ಕೊಹ್ಲಿ-ಅಗರ್‌ವಾಲ್ ಫೇಲ್, ಪೃಥ್ವಿ-ಪೂಜಾರ ಫಿಫ್ಟಿ

ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಇನಿಂಗ್ಸ್ ಆರಂಭಿಸಿದ ಭಾರತ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು.

India vs New Zealand 2nd Test Cheteshwar Pujara Fifty Hanuma Vihari Steady partnership India After Early Blows

ಕ್ರೈಸ್ಟ್‌ಚರ್ಚ್(ಫೆ.29): ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ(54) ಹಾಗೂ ಚೇತೇಶ್ವರ್ ಪೂಜಾರ(50*) ಆಕರ್ಷಕ ಅರ್ಧಶತಕ ಸಿಡಿಸಿದರೆ, ಮಯಾಂಕ್ ಅಗರ್‌ವಾಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದಾರೆ. 46 ಓವರ್‌ಗಳ ಮುಕ್ತಾಯದ ವೇಳೆಗೆ ಭಾರತ 4 ವಿಕೆಟ್ ಕಳೆದುಕೊಂಡು 154 ರನ್ ಬಾರಿಸಿದೆ.

ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಇನಿಂಗ್ಸ್ ಆರಂಭಿಸಿದ ಭಾರತ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಮಯಾಂಕ್ ಕೇವಲ 7 ರನ್ ಬಾರಿಸಿ ಸೌಥಿಗೆ ವಿಕೆಟ್ ಒಪ್ಪಿಸಿದರು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಫಲವಾಗಿದ್ದ ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ನಡೆಸುವ ಅರ್ಧಶತಕ ಪೂರೈಸಿದರು. ಕೇವಲ 64 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 54 ರನ್ ಬಾರಿಸಿ ಜ್ಯಾಮಿಸನ್‌ಗೆ ವಿಕೆಟ್ ಒಪ್ಪಿಸಿದರು.  

ಕಿವೀಸ್ ಎದುರು ಕಮ್‌ಬ್ಯಾಕ್ ಮಾಡುತ್ತಾ ಟೀಂ ಇಂಡಿಯಾ..?

ನಾಯಕ-ಉಪನಾಯಕ ಫೇಲ್: ಇನ್ನು ಸದ್ಯ ರನ್ ಬರ ಅನುಭವಿಸುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೇವಲ 3 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಉಪನಾಯಕ ಅಜಿಂಕ್ಯ ರಹಾನೆ(7) ಸಹಾ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಈ ವೇಳೆ ಭಾರತ 4 ವಿಕೆಟ್ ಕಳೆದುಕೊಂಡು 113 ರನ್ ಗಳಿಸಿತ್ತು.

ಆಸರೆಯಾದ ಪೂಜಾರ: ಈ ವೇಳೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಜತೆಯಾದ ಹನುಮ ವಿಹಾರಿ ತಂಡಕ್ಕೆ ಆಸರೆಯಾದರು. ಸಾಕಷ್ಟು ಎಚ್ಚರಿಕೆಯ ಆಟವಾಡಿದ ಪೂಜಾರ 120 ಎಸೆತಗಳಲ್ಲಿ 6 ಬೌಂಡರಿ ಸಹಿತ ಅರ್ಧಶತಕ ಬಾರಿಸಿದರು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಪೂಜಾರ ಬಾರಿಸಿದ 25ನೇ ಅರ್ಧಶತಕಕವಾಗಿದೆ. ಅಂದಹಾಗೆ ಪೂಜಾರ ಪಾಲಿಗಿದು ಕಿವೀಸ್ ನೆಲದಲ್ಲಿ ಮೊದಲ ಅರ್ಧಶತಕವಾಗಿದೆ. ಪೂಜಾರಗೆ ಉತ್ತಮ ಸಾಥ್ ನೀಡುತ್ತಿರುವ ವಿಹಾರಿ 39 ಎಸೆತಗಳಲ್ಲಿ 2 ಬೌಂಡರಿಗಳ ನೆರವಿನಿಂದ 18 ರನ್ ಬಾರಿಸಿ ಕ್ರೀಸ್‌ನಲ್ಲಿದ್ದಾರೆ.

Latest Videos
Follow Us:
Download App:
  • android
  • ios