ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಅಕ್ಟೋಬರ್ 27ರಂದು ವೆಲ್ಲಿಂಗ್ಟನ್ನಲ್ಲಿ ನಡೆಯಲಿದೆ. ಈ ರೋಚಕ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಅಲ್ಲದೆ, ಡಿಡಿ ಸ್ಪೋರ್ಟ್ಸ್ ಮೂಲಕ ಅಭಿಮಾನಿಗಳು ಪಂದ್ಯವನ್ನು ಸಂಪೂರ್ಣ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಭರ್ಜರಿಯಾಗಿ ಸಾಗುತ್ತಿದೆ. ಕ್ರೈಸ್ಟ್ಚರ್ಚ್ನಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯವನ್ನು ಗೆದ್ದು, ಇನ್ನೆರಡು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇನ್ನೊಂದೆಡೆ ನ್ಯೂಜಿಲೆಂಡ್ ತಂಡವು ಈ ಟಿ20 ಸರಣಿಯಲ್ಲಿ ಮೂರನೇ ಪಂದ್ಯದ ಮೂಲಕ ಕಮ್ಬ್ಯಾಕ್ ಮಾಡಲು ತುದಿಗಾಲಿನಲ್ಲಿ ನಿಂತಿದೆ. ಹೀಗಾಗಿ ಮೂರನೇ ಟಿ20 ಪಂದ್ಯವು ಸಾಕಷ್ಟು ರೋಚಕತೆಯಿಂದ ಕೂಡಿರುವ ನಿರೀಕ್ಷೆಯಿದೆ. ಅಂದಹಾಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ? ಯಾವಾಗ? ನಡೆಯಲಿದೆ. ಇದರ ನೇರ ಪ್ರಸಾರ ಯಾವ ಚಾನೆಲ್ನಲ್ಲಿ ಪ್ರಸಾರವಾಗಲಿದೆ. ಇನ್ನು ಉಚಿತವಾಗಿ ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು ಎನ್ನುವುದನ್ನು ನೋಡೋಣ ಬನ್ನಿ.
ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಮ್ಯಾಚ್ ಎಲ್ಲಿ? ಯಾವಾಗ ಆರಂಭ?
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಇದೇ ಮಂಗಳವಾರ ಅಕ್ಟೋಬರ್ 27ರಂದು ನಡೆಯಲಿದೆ. ಉಭಯ ತಂಡಗಳು ವೆಲ್ಲಿಂಗ್ಟನ್ನ ಹೆನ್ರಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 12.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧಗಂಟೆ ಮುಂಚಿತವಾಗಿ ಅಂದರೆ 12 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಭಾರತದಲ್ಲಿ ನೇರ ಪ್ರಸಾರದ ಹಕ್ಕನ್ನು ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ ಪಡೆದುಕೊಂಡಿದೆ. ಹೀಗಾಗಿ ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಈ ಟಿ20 ಸರಣಿಯನ್ನು ವೀಕ್ಷಿಸಬಹುದಾಗಿದೆ. ಇನ್ನು ಮೊಬೈಲ್ ಹಾಗೂ ಲ್ಯಾಪ್ಟಾಪ್ನಲ್ಲಿ ಸೋನಿ ಲಿವ್ ಆಪ್ ಹಾಗೂ ವೆಬ್ಸೈಟ್ ಮೂಲಕ ಮೂರನೇ ಟಿ20 ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಸೋನಿ ಸ್ಪೋರ್ಟ್ಸ್ ಹಾಗೂ ಸೋನಿ ಲಿವ್ನಲ್ಲಿ ಮ್ಯಾಚ್ ವೀಕ್ಷಿಸಲು ಹಣ ಪಾವತಿಸಿ ಸಬ್ಸ್ಕ್ರಿಪ್ಷನ್ ಪಡೆದುಕೊಳ್ಳಬೇಕಾಗುತ್ತದೆ.
ಉಚಿತವಾಗಿ ಭಾರತ-ನ್ಯೂಜಿಲೆಂಡ್ ಮ್ಯಾಚ್ ವೀಕ್ಷಿಸೋದು ಹೇಗೆ?
ಇನ್ನು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವನ್ನು ಉಚಿತವಾಗಿಯೂ ವೀಕ್ಷಿಸಬಹುದು ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ. ನೀವು ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬೇಕಿದ್ದರೇ, ಡಿಡಿ ಫ್ರೀ ಡಿಶ್ ಹೊಂದಿರಬೇಕು. ಡಿಟಿಎಚ್ ಹೊಂದಿರುವವರು ಡಿಡಿ ಸ್ಪೋರ್ಟ್ಸ್ನಲ್ಲಿ ಉಚಿತವಾಗಿ ಈ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ. ಡಿಡಿ ಸ್ಪೋರ್ಟ್ಸ್ ಒಂದು ಫ್ರೀ ಚಾನೆಲ್ ಆಗಿದು, ಒಂದು ರುಪಾಯಿ ಖರ್ಚಿಲ್ಲದೇ ಈ ಟಿ20 ಸರಣಿಯನ್ನು ವೀಕ್ಷಿಸಬಹುದಾಗಿದೆ.
ಟಿ20 ಸರಣಿಗೆ ಉಭಯ ತಂಡಗಳು ಹೀಗಿವೆ:
ಭಾರತ: ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ನಮನ್ ಧೀರ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ಕುಲ್ದೀಪ್ ಯಾದವ್, ಶಿವಂ ದುಬೆ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರ.
ನ್ಯೂಜಿಲೆಂಡ್: ಫಿನ್ ಅಲೆನ್, ಟಿಮ್ ಸೀಫರ್ಟ್(ವಿಕೆಟ್ ಕೀಪರ್), ಡೆವೊನ್ ಕಾನ್ವೇ, ಗ್ಲೆನ್ ಫಿಲಿಫ್ಸ್, ಡೇರಲ್ ಮಿಚೆಲ್, ಮೈಕಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ನೇಥನ್ ಸ್ಮಿತ್, ಕೈಲ್ ಜೇಮಿಸನ್, ಲಾಕಿ ಫರ್ಗ್ಯೂಸನ್, ಜೋಶ್ ಕ್ಲಾರ್ಕ್ಸನ್, ಜೇಕಬ್ ಡಫಿ, ಬೆವೊನ್ ಜೇಕಬ್ಸ್, ಬ್ಲೈರ್ ಟಿಕ್ನರ್, ಆಡಂ ಮಿಲ್ನೆ.







