Asianet Suvarna News Asianet Suvarna News

Ind vs NZ: ಭಾರತ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ, ಉಭಯ ತಂಡದಲ್ಲೂ ಒಂದು ಮಹತ್ವದ ಬದಲಾವಣೆ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಟಿ20 ಪಂದ್ಯಕ್ಕೆ ನೇಪಿಯರ್ ಮೈದಾನ ಆತಿಥ್ಯ
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಬ್ಯಾಟಿಂಗ್ ಆಯ್ಕೆ
ಉಭಯ ತಂಡಗಳಲ್ಲೂ ಒಂದೊಂದು ಮಹತ್ವದ ಬದಲಾವಣೆ

India vs New Zealand 3rd T20I New Zealand win the toss and elected to bat first against India kvn
Author
First Published Nov 22, 2022, 12:11 PM IST

ನೇಪಿಯರ್(ನ.22): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥಿ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಿಮ್ ಸೌಥಿ ನಾಯಕನಾಗಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಇಲ್ಲಿನ ಮೆಕ್‌ಲ್ಯಾನ್ ಪಾರ್ಕ್‌ ಮೈದಾನ ಆತಿಥ್ಯ ವಹಿಸಿದೆ. ನ್ಯೂಜಿಲೆಂಡ್ ತಂಡದಲ್ಲಿ ನಿರೀಕ್ಷೆಯಂತೆಯೇ ಒಂದು ಬದಲಾವಣೆ ಮಾಡಲಾಗಿದ್ದು, ಕೇನ್ ವಿಲಿಯಮ್ಸನ್‌ ಬದಲಿಗೆ ಮಾರ್ಕ್‌ ಚಾಪ್ಮನ್ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಭಾರತ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ತಂಡ ಕೂಡಿಕೊಂಡಿದ್ದಾರೆ.

ಸಂಜು-ಮಲಿಕ್‌ಗೆ ಮತ್ತೆ ನಿರಾಸೆ: ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹಾಗೂ ಉಮ್ರಾನ್ ಮಲಿಕ್, ಮೂರನೇ ಟಿ20 ಪಂದ್ಯದಲ್ಲೂ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಎರಡನೇ ಪಂದ್ಯದಲ್ಲಿ ಬೆಂಚ್ ಕಾಯಿಸಿದ್ದ ಈ ಇಬ್ಬರು, ಇದೀಗ ಮತ್ತೊಮ್ಮೆ ನಿರಾಸೆ ಅನುಭವಿಸಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಇಲ್ಲವೇ ಶ್ರೇಯಸ್ ಅಯ್ಯರ್‌ಗೆ ವಿಶ್ರಾಂತಿ ನೀಡಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಕಲ್ಪಿಸಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇನ್ನೊಂದೆಡೆ ಮಾರಕ ವೇಗಿ ಉಮ್ರಾನ್ ಮಲಿಕ್ ಕೂಡಾ ಕಿವೀಸ್‌ ನೆಲದಲ್ಲಿ ಮೊದಲ ಟಿ20 ಪಂದ್ಯ ಆಡುವ ಕನಸು ಸದ್ಯಕ್ಕೆ ಮುಂದೂಲ್ಪಟ್ಟಿದೆ. 

Ind vs NZ: ಕಿವೀಸ್‌ ವಿರುದ್ಧ ಟಿ20 ಸರಣಿ ಗೆಲ್ಲುತ್ತಾ ಭಾರತ?

ಮತ್ತೊಂದು ಟಿ20 ಸರಣಿ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ: ಕಳೆದ ಬಾರಿ ಟೀಂ ಇಂಡಿಯಾ, ನ್ಯೂಜಿಲೆಂಡ್ ಪ್ರವಾಸ ಮಾಡಿದ್ದಾಗ 5 ಪಂದ್ಯಗಳ ಟಿ20 ಸರಣಿಯನ್ನಾಡಿತ್ತು. ಈ ಸರಣಿಯನ್ನು ಟೀಂ ಇಂಡಿಯಾ 5-0 ಅಂತರದಲ್ಲಿ ಕ್ಲೀನ್‌ ಸ್ವೀಪ್ ಮಾಡಿ ಬೀಗಿತ್ತು. ಇದೀಗ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ, ಮತ್ತೊಮ್ಮೆ ಕಿವೀಸ್‌ ನಾಡಿನಲ್ಲಿ ಟಿ20 ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

ತಂಡಗಳು ಹೀಗಿವೆ ನೋಡಿ

ಭಾರತ: ರಿಷಭ್ ಪಂತ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಹಲ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್‌ವೇ, ಗ್ಲೆನ್ ಫಿಲಿಫ್ಸ್, ಡೇರಲ್ ಮಿಚೆಲ್, ಮಾರ್ಕ್ ಚಾಂಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ(ನಾಯಕ), ಆಡಂ ಮಿಲ್ನೆ, ಇಶ್ ಸೋಧಿ, ಲಾಕಿ ಫರ್ಗ್ಯೂಸನ್. 
 

Follow Us:
Download App:
  • android
  • ios